ಅನಧಿಕೃತ ಗರ್ಭಪಾತ; ಮಹಿಳಾ ಶುಶ್ರೂಷಕಿ ವಿರುದ್ಧ ದೂರು

Date:

Advertisements
  • ‘ಸುರಕ್ಷಿತ ಗರ್ಭಪಾತಕ್ಕಾಗಿ ವೈದ್ಯರನ್ನೇ ಸಂಪರ್ಕಿಸಿ’
  • ಅನಧಿಕೃತ ಗರ್ಭಪಾತ ಸಾವು, ಬಂಜೆತನ, ಸೋಂಕಿಗೆ ಕಾರಣ

ಮನೆಯೊಂದರಲ್ಲಿ ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದ ಮೇಲೆ ಮಹಿಳಾ ಶುಶ್ರೂಷಕಿಯೊಬ್ಬರ ಮೇಲೆ ದೂರು ದಾಖಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಶಿರಾದಲ್ಲಿ ನಡೆದಿದೆ.

ಪಟ್ಟಣದ ಜ್ಯೋತಿನಗರದಲ್ಲಿ ಮಹಿಳಾ ಶುಶ್ರೂಷಕಿ ಸೌಜನ್ಯ ಎಂಬವರು ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದರು. ಆಕೆ ಗರ್ಭಪಾತಕ್ಕೆ ಬಳಸುತ್ತಿದ್ದ ಉಪಕರಣಗಳು ಹಾಗೂ ಔಷಧಿಗಳನ್ನು ವಶಪಡಿಸಿಕೊಂಡು, ಗರ್ಭಪಾತ ಕಾಯ್ದೆ ಅಡಿ ದೂರು ದಾಖಲಿಸಲು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸಮಗ್ರ ಗರ್ಭಪಾತ ಸೇವೆಯ ನೋಡಲ್ ಅಧಿಕಾರಿ ಡಾ. ಚಂದ್ರಿಕಾ ಬಿ.ಆರ್ ಸೂಚನೆ ನೀಡಿದ್ದಾರೆ.

ಅನಧಿಕೃತ ಗರ್ಭಪಾತದ ಬಗ್ಗೆ ರಾಜ್ಯ ಪಿಸಿಪಿಎನ್‌ಡಿಟಿಯ ಉಪನಿರ್ದೇಶಕ ಡಾ. ವಿವೇಕ್ ದೊರೆ ಎಂಬುವವರು ದೂರು ನೀಡಿದ್ದರು. ಅವರ ದೂರಿನ ಆಧಾರ ಮೇಲೆ ನೋಡಲ್ ಅಧಿಕಾರಿ ಡಾ. ಚಂದ್ರಿಕಾ ಅವರು ದಾಳಿ ನಡೆಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

Advertisements

“ಅನಧಿಕೃತ ಗರ್ಭಪಾತದಿಂದಾಗಿ ಸಾವು ಸಂಭವಿಸಬಹುದು. ಶಾಶ್ವತ ಬಂಜೆತನ, ಸೋಂಕು, ಹಾಗೂ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಗರ್ಭನಿರೋಧಕಗಳ ಬಳಕೆ ಕೊರತೆಯಿಂದ ಅನಗತ್ಯ ಗರ್ಭಧಾರಣೆಯು ಒಂದು ತಾಯಿಯ ಆರೋಗ್ಯಕ್ಕೆ ಮಾರಕ” ಎಂದು ಡಾ. ಚಂದ್ರಿಕಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

“ಒಂದು ವೇಳೆ ಗರ್ಭಪಾತದ ವಿಷಯದ ಬಗ್ಗೆ ಗೌಪ್ಯತೆ ಕಾಯ್ದುಕೊಳ್ಳುವ ಸಂದರ್ಭ ಬಂದಾಗ ವೈದ್ಯರೊಡನೆ ಸಮಾಲೋಚನೆ ನಡೆಸಿ ನಂತರ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಬೇಕು. ಗರ್ಭಪಾತಕ್ಕೊಳಗಾಗುವವರ ಹೆಸರನ್ನು ಗೌಪ್ಯತೆಯಿಂದಿಡಲಾಗುತ್ತದೆ. ಒಂದು ವೇಳೆ ಕಾನೂನು ರೀತಿಯಲ್ಲಿ ಗರ್ಭಧಾರಣೆಗೆ ನೋಂದಾಯಿಸಿಕೊಂಡಿದ್ದಲ್ಲಿ ದಾಖಲೆ ಅಥವಾ ವರದಿಗಳನ್ನು ಕಾನೂನು ಮೂಲಕ ಕೋರಿದ್ದಾಗ ಮಾತ್ರ ನೀಡಬೇಕಾಗಿರುತ್ತದೆ. ವೈದ್ಯರು ದಾಖಲೆಗಳನ್ನು ಬಹಿರಂಗಗೊಳಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುರಕ್ಷಿತ ಗರ್ಭಪಾತಕ್ಕಾಗಿ ವೈದ್ಯರನ್ನೇ ಸಂಪರ್ಕಿಸಿ, ನೋಂದಾಯಿತ ಸ್ಥಳದಲ್ಲಿ ಮಾತ್ರ ಗರ್ಭಪಾತ ಮಾಡಿಸುವುದು ಉತ್ತಮ” ಎಂದು ಸಲಹೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರೋನಾ ಸಮಯದಲ್ಲಿ ತಬ್ಲಿಘಿ ಸಭೆ: 70 ಜನರ ವಿರುದ್ಧದ FIR ರದ್ದು; ಕೋರ್ಟ್‌ ಆದೇಶ

ದೇಶದಲ್ಲಿ ಕೊರೋನಾ ಆಕ್ರಮಣ ಆರಂಭವಾಗಿದ್ದ ಸಮಯ 2020ರ ಮಾರ್ಚ್‌ನಲ್ಲಿ ದೆಹಲಿಯಲ್ಲಿ ತಬ್ಲಿಘಿ...

ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ

ದಾವಣಗೆರೆಯ ಉದ್ಯಮಿಯೊಬ್ಬರ ಪುತ್ರ ಕಾಲೇಜು ವಿದ್ಯಾರ್ಥಿ ಹೃದಯಾಘಾತದಿಂದ (Heart Attack) ಕುಸಿದು...

ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು...

ಕೋವಿಡ್ ಲಸಿಕೆಗೂ ಹಠಾತ್ ಸಾವುಗಳಿಗೂ ಯಾವುದೇ ಸಂಬಂಧವಿಲ್ಲ: ಆರೋಗ್ಯ ಸಚಿವಾಲಯ

ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮತ್ತು ರಾಷ್ಟ್ರೀಯ ರೋಗ ನಿಯಂತ್ರಣ...

Download Eedina App Android / iOS

X