ರಾಜ್ಯ ಹೈಕೋರ್ಟ್‌ಗೆ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಎಂ.ಎಸ್ ರಾಮಚಂದ್ರ ರಾವ್ ನೇಮಕಕ್ಕೆ ಶಿಫಾರಸು!

Date:

ಕರ್ನಾಟಕ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್‌ಗೆ ವರ್ಗಾವಣೆ ಮಾಡಲಾಗಿದೆ.‌ ಅವರ ವರ್ಗಾವಣೆಯಿಂದ‌ ತೆರವಾದ ಸ್ಥಾನಕ್ಕೆ ತ್ರಿಪುರಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿರುವ ನ್ಯಾ. ಎಂ.ಎಸ್. ರಾಮಚಂದ್ರ ರಾವ್ ಅವರನ್ನು ನೇಮಕ ಮಾಡಲು ಸುಪ್ರೀಂ ಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.

- Advertisement -

ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ್ ಅವರ ನೇತೃತ್ವದ ಕೊಲಿಜಿಯಂ ನವೆಂಬರ್ 24 ರಂದು ಈ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕರ್ನಾಟಕ, ಜಾರ್ಖಂಡ್ ಮತ್ತು ತ್ರಿಪುರಾ ಹೈಕೋರ್ಟ್‌ಗಳ ಮುಖ್ಯ ನ್ಯಾಯಮೂರ್ತಿಗಳ ನೇಮಕ ಮತ್ತು ವರ್ಗಾವಣೆಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳುಹಿಸಿದೆ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಜಾರ್ಖಂಡ್ ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿಗಳು ನವೆಂಬರ್ 27ರಂದು ನಿವೃತ್ತರಾಗುತ್ತಿರುವ ಹಿನ್ನೆಲೆಯಲ್ಲಿ, ಅಲ್ಲಿ ತೆರವಾಗಲಿರುವ ಹುದ್ದೆಯನ್ನು ಭರ್ತಿ ಮಾಡಲು ಈ ಸರಣಿ ಬದಲಾವಣೆಗಳನ್ನು ಮಾಡಲಾಗಿದೆ. ಇದರನ್ವಯ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ವರ್ಗಾವಣೆ ಮಾಡಲು ಸೂಚಿಸಲಾಗಿದೆ.

2013ರಲ್ಲಿ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದು, ಅಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಸೇವೆ ಸಲ್ಲಿಸಿದ್ದ ನ್ಯಾ. ಬಖ್ರು ಅವರು 2025ರಲ್ಲಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ ಒಂದು ವರ್ಷದೊಳಗಾಗಿ ಅವರನ್ನು ಜಾರ್ಖಂಡ್‌ಗೆ ವರ್ಗಾಯಿಸಲು ಶಿಫಾರಸು ಮಾಡಲಾಗಿದೆ.
ನ್ಯಾಯಮೂರ್ತಿ ಬಖ್ರು ಅವರ ವರ್ಗಾವಣೆಯಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ತೆರವಾಗಲಿರುವ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ನೇಮಕಗೊಳ್ಳಲಿದ್ದಾರೆ. ರಾವ್ ಅವರು ಈ ಹಿಂದೆ ತೆಲಂಗಾಣ ಮತ್ತು ಆಂಧ್ರಪ್ರದೇಶ ಹೈಕೋರ್ಟ್‌ಗಳಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು, ತದನಂತರ ತ್ರಿಪುರಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. ಇದೀಗ ಅವರನ್ನು ಕರ್ನಾಟಕ ಹೈಕೋರ್ಟ್‌ನ ಮುಖ್ಯಸ್ಥರನ್ನಾಗಿ ನೇಮಿಸಲು ಕೊಲಿಜಿಯಂ ಶಿಫಾರಸು ಮಾಡಿದೆ.

ಇದೇ ವೇಳೆ, ನ್ಯಾಯಮೂರ್ತಿ ರಾಮಚಂದ್ರ ರಾವ್ ಅವರ ವರ್ಗಾವಣೆಯಿಂದ ತ್ರಿಪುರಾ ಹೈಕೋರ್ಟ್‌ನಲ್ಲಿ ತೆರವಾಗುವ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ತುಂಬಲು, ಹಿಮಾಚಲ ಪ್ರದೇಶ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿರುವ ವಿವೇಕ್ ಸಿಂಗ್ ಠಾಕೂರ್ ಅವರನ್ನು ತ್ರಿಪುರಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಶಿಫಾರಸು ಮಾಡಲಾಗಿದೆ.

ಹೀಗೆ ಈ ಮೂರೂ ಶಿಫಾರಸುಗಳು ಒಂದಕ್ಕೊಂದು ಪೂರಕವಾಗಿದ್ದು, ಒಂದು ಹೈಕೋರ್ಟ್‌ನಲ್ಲಿ ತೆರವಾಗುವ ಸ್ಥಾನವನ್ನು ಮತ್ತೊಂದು ಹೈಕೋರ್ಟ್‌ನ ನ್ಯಾಯಮೂರ್ತಿಗಳ ಮೂಲಕ ವ್ಯವಸ್ಥಿತವಾಗಿ ಭರ್ತಿ ಮಾಡುವ ಕ್ರಮವನ್ನು ಅನುಸರಿಸಲಾಗಿದೆ.

ಕೊಲಿಜಿಯಂ ಕೈಗೊಂಡಿರುವ ಈ ನಿರ್ಣಯಗಳನ್ನು ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವಾಲಯಕ್ಕೆ ರವಾನಿಸಿದ ಬಳಿಕ,‌ ಕೇಂದ್ರ ಸರ್ಕಾರದಿಂದ ಅಧಿಕೃತ ಅನುಮೋದನೆ ದೊರೆಯಲಿದೆ. ನಂತರ, ನೂತನ ಮುಖ್ಯ ನ್ಯಾಯಮೂರ್ತಿಗಳ ನೇಮಕಾತಿ ಕುರಿತು ಅಧಿಸೂಚನೆ ಹೊರಡಿಸಲಾಗುತ್ತದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

ಬಾಗಲಕೋಟೆ |ಬಸವ–ಅಂಬೇಡ್ಕರ್ ಚಿಂತನೆಗೆ ರಾಜಕೀಯ ಶಕ್ತಿ ತುಂಬಲು ‘ಬಸವ ಭೀಮ ಸಂಗಮ’

ಬಸವಣ್ಣನವರ ಸಮಾನತೆಯ ಆಶಯ ಮತ್ತು ಡಾ.ಬಿ.ಆರ್. ಅಂಬೇಡ್ಕರ್ ಅವರ ಸಂವಿಧಾನಿಕ ಚಿಂತನೆಗಳನ್ನು...

ಬೆಳಗಾವಿ |ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿಯಲ್ಲಿ ಅನ್ಯಾಯ: ಪ್ರತ್ಯೇಕ ರಾಜ್ಯದ ಕೂಗು ತಪ್ಪಲ್ಲ ಎಂದ ಬಾಲಚಂದ್ರ ಜಾರಕಿಹೊಳಿ!

ಅಭಿವೃದ್ಧಿ ವಿಚಾರದಲ್ಲಿ ಉತ್ತರ ಕರ್ನಾಟಕಕ್ಕೆ ನಿರಂತರ ಅನ್ಯಾಯವಾಗುತ್ತಿದೆ. ಆಡಳಿತ ಮತ್ತು ಅಭಿವೃದ್ಧಿಯಲ್ಲಿ...