ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ಹತ್ಯೆಗಳಿಗೆ ಕೊನೆ ಎಂದು?

Date:

ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು. ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ ಅನುಮಾನಾಸ್ಪದವಾಗಿದೆ. ಹಾಗಿದ್ದ ಪಕ್ಷದಲ್ಲಿ ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ಹತ್ಯೆಗಳಿಗೆ ಕೊನೆ ಎಂದು? ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ ಎಂದರೆ ದಲಿತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವೇನು?

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದಲಿತ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಸಾಂಸ್ಥಿಕ ದೌರ್ಜನ್ಯ ಮತ್ತು ತಾರತಮ್ಯದ ಕಾರಣ ತಮ್ಮ ಮಕ್ಕಳನ್ನು ಕಳೆದುಕೊಂಡ ಅಬೇದ ತಾಡ್ವಿ ಮತ್ತು ರಾಧಿಕಾ ವೇಮುಲ ಅವರು ಐದು ವರ್ಷಗಳ ಹಿಂದೆ ಸುಪ್ರೀಂ ಕೋರ್ಟ್ ನಲ್ಲಿ 700 ಪುಟಗಳ ಅಫಿಡವಿಟ್ ಸಲ್ಲಿಸಿದ್ದರು.

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಡೆಯುತ್ತಿರುವ ತಾರತಮ್ಯದ ಕುರಿತು ಉತ್ತರದಾಯಿತ್ವವನ್ನು ನಿರ್ಧರಿಸಬೇಕು, ಜಾತಿ ಆಧಾರಿತ ತಾರತಮ್ಯದ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತಹ ವ್ಯವಸ್ಥೆ ರೂಪಿಸಬೇಕು ಎಂದು ಅರ್ಜಿಯಲ್ಲಿ ವಿವರಿಸಿದ್ದರು. ಪಾಯಲ್ ತಾಡ್ವಿ ಮತ್ತು ರೋಹಿತ್ ವೇಮುಲ ಮಾತ್ರವಲ್ಲದೆ ಇತರ ಅನೇಕ ದಲಿತ ವಿದ್ಯಾರ್ಥಿಗಳು ಸಾಂಸ್ಥಿಕ ಹತ್ಯೆಗೆ ಒಳಗಾಗಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

ಸುಪ್ರೀಂ ಕೋರ್ಟ್ ಈ ವಿಷಯ ಗಂಭೀರ ಸ್ವರೂಪವಾಗಿದೆ ಎಂದು ಹೇಳಿದೆ. ಆದರೆ ಇದಕ್ಕೆ ತಾರ್ಕಿಕ ಅಂತ್ಯ ಹೇಳುವ ಕಕ್ಕುಲತೆ, ಕಾಳಜಿ ಪ್ರದರ್ಶಿಸಲಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಇದಕ್ಕೆ ಉತ್ತರವಾಗಿ ತನಿಖೆ ನಡೆಸಲು ಯುಜಿಸಿ ಒಂಬತ್ತು ಸದಸ್ಯರ ಸಮಿತಿ ನೇಮಕ ಮಾಡಿತ್ತು.

ಕಳೆದ ಐದು ವರ್ಷಗಳಲ್ಲಿ ಈ ಸಮಿತಿ ಕೇವಲ ಮೂರು ಬಾರಿ ಸಭೆ ಸೇರಿದೆ. ಈ ಸಮಿತಿಗೆ ಸದಸ್ಯರನ್ನು ಇದುವರೆಗಿನ ಅವರ ಅನುಭವ ಮತ್ತು ಕಾರ್ಯದಕ್ಷತೆ ಆಧರಿಸಿ ಆಯ್ಕೆ ಮಾಡಲಿಲ್ಲ. ಬದಲಿಗೆ ಅವರ ರಾಜಕೀಯ ಒಲವನ್ನು ಆಧರಿಸಲಾಗಿದೆ. ಉದಾಹರಣೆಗೆ ಸಮಿತಿಯ ಮುಖ್ಯಸ್ಥರಾದ ಶೈಲೇಶ್ ಜಾಲ ಭಟ್ನಾಗರ್ ವಿವಿಯ ಉಪ ಕುಲಪತಿಗಳಾಗುವುದಕ್ಕೂ ಮೊದಲು ಎಬಿವಿಪಿಯ ಉಪಾಧ್ಯಕ್ಷರಾಗಿದ್ದರು.

ಇದನ್ನು ಓದಿದ್ದೀರಾ?: ಭಾರತಕ್ಕೆ ಇಪ್ಪತ್ತೊಂದನೆಯ ಶತಮಾನದ ಒಪ್ಪುಕೂಟ ವ್ಯವಸ್ಥೆ

ಮತ್ತೊಬ್ಬ ಸದಸ್ಯರಾದ ವಿಜಯಶಂಕರ್ ಮಿಶ್ರಾ ಸತ್ಯವತಿ ಕಾಲೇಜಿನ ಪ್ರಾಂಶುಪಾಲರಾಗಿದ್ದ ಸಂದರ್ಭದಲ್ಲಿ ಮೀಸಲಾತಿ ರೋಸ್ಟರ್ ನೀತಿಯನ್ನು ಪಾಲಿಸಲಿಲ್ಲ ಎನ್ನುವ ಆರೋಪವಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಉದ್ಯೋಗಿಗಳು ನಿವೃತ್ತರಾದ ನಂತರ ಮರಳಿ ನೇಮಕಾತಿ ಮಾಡುವಾಗ ಹೊರಡಿಸಿದ ಸುತ್ತೋಲೆಯಲ್ಲಿ ಉದ್ದೇಶಪೂರ್ವಕವಾಗಿ ಅದು ಮೀಸಲು ಹುದ್ದೆ ಎಂದು ಹೇಳುತ್ತಿರಲಿಲ್ಲ.

ಒಟ್ಟಾರೆಯಾಗಿ ಜಾತಿ ತಾರತಮ್ಯ ಮತ್ತು ದೌರ್ಜನ್ಯದ ಕುರಿತು ತನಿಖೆ ನಡೆಸಲು ಈ ಸಮಿತಿಯ ಸದಸ್ಯರಿಗೆ ಯಾವುದೇ ಅನುಭವ, ಅರ್ಹತೆಯಿಲ್ಲ. ಇವರ ವಿಶ್ವಾಸಾರ್ಹತೆ ಪ್ರಶ್ನಾರ್ಹವಾಗಿದೆ. ಇವರು ಸಲ್ಲಿಸುವ ಅಂತಿಮ ವರದಿಯ ನ್ಯಾಯಪರತೆಯೂ ಅನುಮಾನಾಸ್ಪದವಾಗಿದೆ.

ಹಾಗಿದ್ದ ಪಕ್ಷದಲ್ಲಿ ಉನ್ನತ ಶಿಕ್ಷಣದಲ್ಲಿ ಸಾಂಸ್ಥಿಕ ಹತ್ಯೆಗಳಿಗೆ ಕೊನೆ ಎಂದು? ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದರೂ ಯಾವುದೇ ಪರಿಹಾರ ಸಿಗಲಿಲ್ಲ ಎಂದರೆ ದಲಿತ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವೇನು?

ಈ ಯಕ್ಷ ಪ್ರಶ್ನೆಯನ್ನು ಯಾರಿಗೆ ಕೇಳಬೇಕು, ಯಾರು ಉತ್ತರಿಸುತ್ತಾರೆ ಎನ್ನುವುದೇ ಗೊತ್ತಿಲ್ಲದಂತಹ ಅರಾಜಕ ವ್ಯವಸ್ಥೆಯಲ್ಲಿ ಬದುಕುತ್ತಿದ್ದೇವೆ.

ಬಿ ಶ್ರೀಪಾದ್ ಭಟ್
+ posts

ಲೇಖಕರು, ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು

ಪೋಸ್ಟ್ ಹಂಚಿಕೊಳ್ಳಿ:

ಬಿ ಶ್ರೀಪಾದ್ ಭಟ್
ಬಿ ಶ್ರೀಪಾದ್ ಭಟ್
ಲೇಖಕರು, ಶಿಕ್ಷಣ ತಜ್ಞರು, ಸಾಮಾಜಿಕ ಹೋರಾಟಗಾರರು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾ ಮಂಜುನಾಥ್ ರಾಜಕಾರಣದಲ್ಲಿ ಗಳಿಸುವುದಕ್ಕಿಂತ ಕಳೆದುಕೊಳ್ಳುವುದೇ ಹೆಚ್ಚು

ಇತ್ತೀಚಿನ ದಿನಗಳಲ್ಲಿ ಕೆಲವು ಅವಿವೇಕಿಗಳು ಮತ್ತು ಜಾತಿವಾದಿಗಳು ಡಾ ಮಂಜುನಾಥ್ ಅವರು...

ಬಿಜೆಪಿ & ಗೋದಿ ಮೀಡಿಯಾ ʼಪಾಕಿಸ್ತಾನ್‌ ಜಿಂದಾಬಾದ್‌ ಎಂದರುʼ ಎಂಬ ಸುಳ್ಳನ್ನು ಹಬ್ಬಿಸಿದ 22 ಪ್ರಕರಣಗಳು

'ಪಾಕಿಸ್ತಾನ್‌ ಜಿಂದಾಬಾದ್’ ಎಂದು ಕೂಗಿರುವುದಾಗಿ ಮಾಧ್ಯಮ ಮತ್ತು ಬಿಜೆಪಿ ಸುಳ್ಳು ಹಬ್ಬಿಸುವುದು...

ಯಾರಿವರು ಮುಖ್ಯ ಲೋಕಪಾಲರಾಗಿ ನೇಮಕಗೊಂಡ ಖಾನ್ವಿಲ್ಕರ್‌?

ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್, ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷದ...

ಪ್ರಶ್ನಾತೀತ ಪ್ರಪಂಚವೂ ಪ್ರಜ್ಞಾವಂತ ಸಮಾಜವೂ ಪ್ರಶ್ನಿಸುವ ವಿವೇಕವೂ: ನಾ ದಿವಾಕರ ಬರೆಹ

ಪ್ರಶ್ನಾತೀತತೆ ಬೇರೂರಿದಷ್ಟೂ ಸಮಾಜವು ತನ್ನ ವಿಮರ್ಶಾತ್ಮಕ ದೃಷ್ಟಿಕೋನವನ್ನು ಕಳೆದುಕೊಳ್ಳುತ್ತಾ ಹೋಗುತ್ತದೆ. ಚಿಕಿತ್ಸಕ...