ಬೆಂಗಳೂರು ಗ್ರಾ. | ಅಂಗನವಾಡಿಗೆ ದಲಿತ ಶಿಕ್ಷಕಿಗೆ ಪ್ರವೇಶ ನಿರಾಕರಣೆ; 10 ತಿಂಗಳಿಂದ ಹೊರಗೆ ನಿಲ್ಲುತ್ತಿರುವ ಶಿಕ್ಷಕಿ

Date:

ಶಿಕ್ಷಕಿಯು ದಲಿತೆ ಎಂಬ ಕಾರಣಕ್ಕೆ ಅಂಗನವಾಡಿ ಕೇಂದ್ರಕ್ಕೆ ಪ್ರವೇಶ ನಿರಾಕರಿಸಿ ಗ್ರಾಮಸ್ಥರು ಜಾತಿ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಮೆಳೆಕೋಟೆ ಗ್ರಾಮದಲ್ಲಿ ನಡೆದಿದೆ. ಕಳೆದ 10 ತಿಂಗಳಿಂದ ಅಂಗವಾಡಿಗೆ ಬರುತ್ತಿರುವ ಶಿಕ್ಷಕಿ, ಕೇಂದ್ರಕ್ಕೆ ಪ್ರವೇಶಿಸಲಾಗದೇ ಹೊರಗೇ ನಿಲ್ಲುತ್ತಿದ್ದಾರೆಂದು ತಿಳಿದುಬಂದಿದೆ.

- Advertisement -

ಮಾದಿಗ ಸಮುದಾಯಕ್ಕೆ (ಎಸ್‌ಸಿ) ಸೇರಿದ ಶಿಕ್ಷಕಿ ಆನಂದಮ್ಮ ರಾಜಘಟ್ಟದಲ್ಲಿ ಅಂಗನವಾಡಿಯಲ್ಲಿ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಅಂಗನವಾಡಿ ಶಿಕ್ಷಕಿಯಾಗಿ ಬಡ್ತಿ ನೀಡಿ, ಮೆಳೆಕೋಟೆ ಗ್ರಾಮಕ್ಕೆ 2022ರ ಸೆಪ್ಟೆಂಬರ್‌ನಲ್ಲಿ ವರ್ಗಾವಣೆ ಮಾಡಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಆದರೆ, ಆಕೆ ದಲಿತೆ ಎಂಬ ಕಾರಣಕ್ಕೆ ಆಕೆಯನ್ನು ತಮ್ಮ ಗ್ರಾಮದ ಅಂಗನವಾಡಿಗೆ ನಿಯೋಜಿಸಬಾರದು ಎಂದು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿದ್ದರು. ಅದರ ಹೊರತಾಗಿಯೂ ಮೇಲಧಿಕಾರಿಗಳ ಆದೇಶದಂತೆ ಶಿಕ್ಷಕಿ ಆನಂದಮ್ಮ ಅವರು ದೊಡ್ಡರಾಯಪ್ಪನಹಳ್ಳಿಯಲ್ಲಿ ಬಾಡಿಗೆ ಮನೆ ಪಡೆದು, ಮೆಳೆಕೋಟೆ ಅಂಗನವಾಡಿಗೆ ಬರುತ್ತಿದ್ದರು. ಆದರೆ, ಅಲ್ಲಿನ ಗ್ರಾಮಸ್ಥರು ಆಕೆಗೆ ಅಂಗನವಾಡಿ ಒಳಗೆ ಹೋಗದಂತೆ ತಡೆಯುತ್ತಿದ್ದರು ಎಂದು ಆರೋಪಿಸಲಾಗಿದೆ.

“ನಾನು ಎಸ್‌ಸಿ ಸಮುದಾಯಕ್ಕೆ ಸೇರಿರುವ ಕಾರಣಕ್ಕೆ ನನಗೆ ಅಂಗನವಾಡಿಯಲ್ಲಿ ಕೆಲಸ ಮಾಡಲು ಗ್ರಾಮಸ್ಥರು ಬಿಡುತ್ತಿಲ್ಲ. ಕೇಂದ್ರ ಪ್ರವೇಶಿಸಲು ಹಲವು ಬಾರಿ ಪ್ರಯತ್ನಿಸಿದರೂ ಗ್ರಾಮಸ್ಥರು ತಡೆಯುತ್ತಿದ್ದಾರೆ. ಕಳೆದ 10 ತಿಂಗಳಿಂದ ಇಲ್ಲಿಗೆ ಬರುತ್ತಿದ್ದೇನೆ. ಪ್ರತಿದಿನ ಗ್ರಾಮಸ್ಥರು ನನಗೆ ಕೆಲಸ ಮಾಡಲು ಬಿಡದೆ, ತಡೆಯುತ್ತಿದ್ದಾರೆ. ನಾನು ಅಂಗನವಾಡಿಯ ಹೊರಗೆಯೇ ನಿಲ್ಲುವಂತೆ ತಾಕೀತು ಮಾಡುತ್ತಿದ್ದಾರೆ” ಎಂದು ಶಿಕ್ಷಕಿ ಆನಂದಮ್ಮ ಆರೋಪಿಸಿದ್ದಾರೆ.

“ಗ್ರಾಮದ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿದ್ದು, ಸಮಸ್ಯೆಗೆ ಸೌಹಾರ್ದಯುತ ಪರಿಹಾರ ದೊರಕಿಸಿಕೊಡುವಂತೆ ಅಧಿಕಾರಿಗಳಿಗೆ ಮನವಿ ಮಾಡಿದ್ದೇನೆ” ಎಂದೂ ಅವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ತುಮಕೂರು | ಹೃದಯ ವಿದ್ರಾವಕ ಘಟನೆ; ಸೂತಕದ ಮೌಢ್ಯಕ್ಕೆ ಹಸುಗೂಸು ಬಲಿ

“ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮಸ್ಥರಿಗೆ ಮನವರಿಕೆ ಮಾಡಿ ಶಿಕ್ಷಕಿಗೆ ಕೆಲಸ ಮಾಡಲು ಅನುವು ಮಾಡಿಕೊಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ರವಿಕುಮಾರ್ ಅವರಿಗೆ ಸೂಚನೆ ನೀಡಿದ್ಧೇನೆ” ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಟರಾಜ್ ಎಸ್ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಶುಕ್ರವಾರ ಗ್ರಾಮಕ್ಕೆ ಭೇಟಿ ನೀಡಿದ್ದು, ಗ್ರಾಮಸ್ಥರೊಂದಿಗೆ ಚರ್ಚೆ ನಡೆಸಿದ್ದಾರೆ. ಸೋಮವಾರ ಗ್ರಾಮಸಭೆ ನಡೆಸಿ, ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಿ, ಮನವರಿಕೆ ಮಾಡಿ, ಶಿಕ್ಷಕಿಗೆ ಕೆಲಸ ಮಾಡಲು ಅನುವು ಮಾಡಿಕೊಡಲಾಗುತ್ತದೆ ಎಂದು ಆಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...