ಜನತಂತ್ರದ ಹತ್ಯೆ: ಮತದಾನದ ಹಕ್ಕು ಮತ್ತು ಸ್ಥಳೀಯ ಪ್ರಾತಿನಿಧ್ಯದ ಮೇಲೆ ದಾಳಿ

Date:

ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ಕೇವಲ ಸರ್ಕಾರಗಳ ಕರ್ತವ್ಯವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ಜನರ ಧ್ವನಿಯನ್ನು ಕುಗ್ಗಿಸುವ ಯಾವುದೇ ಕ್ರಮದ ವಿರುದ್ಧ ಸಮಾಜ ಎಚ್ಚರಿಕೆಯಿಂದ ನಿಲ್ಲಬೇಕಾಗಿದೆ. ಏಕೆಂದರೆ ಮತದಾನದ ಹಕ್ಕು ಮತ್ತು ಪ್ರತಿನಿಧಿತ್ವ ಉಳಿದಾಗ ಮಾತ್ರ ಪ್ರಜಾಪ್ರಭುತ್ವ ಜೀವಂತವಾಗಿರುತ್ತದೆ.

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವೆಂದು ಜಗತ್ತಿನ ಮುಂದೆ ಹೆಮ್ಮೆಪಡುತ್ತದೆ. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕುಗಳನ್ನು ನೀಡಿ ‘ಜನರ ಆಡಳಿತ’, ʼಸ್ಥಳೀಯ ಆಡಳಿತʼ ಎಂಬ ಆದರ್ಶವನ್ನು ಸ್ಥಾಪಿಸಿದೆ. ಆದರೆ ಇತ್ತೀಚಿನ ರಾಜಕೀಯ ಮತ್ತು ಆಡಳಿತಾತ್ಮಕ ಬೆಳವಣಿಗೆಗಳನ್ನು ಗಮನಿಸಿದರೆ, ದೇಶದ ಪ್ರಜಾಪ್ರಭುತ್ವದ ಮೂಲಭೂತ ಮೌಲ್ಯಗಳೇ ಪ್ರಶ್ನೆಗೆ ಒಳಗಾಗುತ್ತಿರುವುದು ಸ್ಪಷ್ಟವಾಗುತ್ತಿದೆ.

- Advertisement -

ಒಂದು ಕಡೆ ಕೇಂದ್ರ ಸರ್ಕಾರವು ಭಾರತ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ(SIR) ಪ್ರಕ್ರಿಯೆ ದಲಿತರು, ಮಹಿಳೆಯರು, ಆದಿವಾಸಿಗಳು ಮತ್ತು ಹಿಂದುಳಿದ ವರ್ಗಗಳ ಮತದಾನದ ಹಕ್ಕನ್ನು ಕುಗ್ಗಿಸಲು ನಿರಂತರ ಪ್ರಯತ್ನ ನಡೆಸುತ್ತಿದೆ. ಮತ್ತೊಂದೆಡೆ ಕರ್ನಾಟಕ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮಯಕ್ಕೆ ನಡೆಸದೆ ಜನರ ಪ್ರತಿನಿಧಿತ್ವವನ್ನೇ ಕಿತ್ತುಕೊಳ್ಳುತ್ತಿರುವುದು ಪ್ರಜಾಪ್ರಭುತ್ವದ ಆತ್ಮಕ್ಕೆ ಧಕ್ಕೆ ತರುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು ಕೇವಲ ಚುನಾವಣಾ ಪ್ರಕ್ರಿಯೆಯ ಭಾಗವಲ್ಲ; ಅದು ನಾಗರಿಕನ ಅಸ್ತಿತ್ವದ ಸಂಕೇತವಾಗಿದೆ. ಭಾರತ ಸಂವಿಧಾನದ 326ನೇ ವಿಧಿಯು 18 ವರ್ಷ ತುಂಬಿದ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೂ ಜಾತಿ, ಧರ್ಮ, ಲಿಂಗ, ಸಾಮಾಜಿಕ ಸ್ಥಾನಮಾನ ಮುಂತಾದ ಯಾವುದೇ ತಾರತಮ್ಯವಿಲ್ಲದೆ ಮತದಾನದ ಹಕ್ಕು ನೀಡಿದೆ. ಈ ಹಕ್ಕು ಸಮಾಜದ ಅಂಚಿನಲ್ಲಿದ್ದ ಸಮುದಾಯಗಳಿಗೆ ರಾಜಕೀಯ ಶಕ್ತಿ ನೀಡಿದ ಅತ್ಯಂತ ದೊಡ್ಡ ಸಾಧನವಾಗಿದೆ.

ವಿಶೇಷವಾಗಿ ದಲಿತರು, ಆದಿವಾಸಿಗಳು ಮತ್ತು ಮಹಿಳೆಯರು ರಾಜಕೀಯವಾಗಿ ಸಬಲಗೊಳ್ಳಲು ಸಾರ್ವತ್ರಿಕ ಮತದಾನದ ಹಕ್ಕು ಪ್ರಮುಖ ಕಾರಣವಾಗಿದೆ. ಈ ಪ್ರಕ್ರಿಯೆಯು ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಸಾವಿರಾರು ಜನರ ಹೆಸರುಗಳು ಕೈಬಿಡಲ್ಪಡುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಇದರಿಂದಾಗಿ ಗ್ರಾಮೀಣ ಪ್ರದೇಶಗಳ ಬಡವರು, ವಲಸೆ ಕಾರ್ಮಿಕರು, ಮಹಿಳೆಯರು ಮತ್ತು ಆದಿವಾಸಿಗಳು ಹೆಚ್ಚು ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಆಡಳಿತಾತ್ಮಕ ದೋಷಗಳು ಮತ್ತು ಪಾರದರ್ಶಕತೆಯ ಕೊರತೆಯಿಂದ ನಿಜವಾದ ಮತದಾರರು ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿಯುವ ಅಪಾಯ ಎದುರಿಸುತ್ತಿದ್ದಾರೆ. ಚುನಾವಣಾ ಆಯೋಗವು ದೇಶಾದ್ಯಂತ SIR ಮೂಲಕ ಮತದಾನದ ಹಕ್ಕಿನ ಜತೆಗೆ ನಾಗರಿಕತ್ವವನ್ನು ಕಿತ್ತುಕೊಳ್ಳುವ ಮೂಲಕ ಪ್ರಜಾಪ್ರಭುತ್ವದ ಆಶಯವನ್ನೇ ಅಣಕಿಸುತ್ತಿದೆ.

ಮತದಾನದ ಹಕ್ಕಿನ ಮೇಲಿನ ಈ ರೀತಿಯ ಪರೋಕ್ಷ ದಾಳಿಗಳು ಸಾಮಾಜಿಕ ನ್ಯಾಯದ ಆಶಯವನ್ನೇ ದುರ್ಬಲಗೊಳಿಸುತ್ತವೆ. ಡಾ. ಬಿ ಆರ್ ಅಂಬೇಡ್ಕರ್ ಅವರು ರಾಜಕೀಯ ಹಕ್ಕುಗಳನ್ನು ಶೋಷಿತ ಸಮುದಾಯಗಳ ಮುಕ್ತಿಯ ಸಾಧನವೆಂದು ಪರಿಗಣಿಸಿ ಸಂವಿಧಾನದಲ್ಲಿ ಅವಕಾಶ ಕಲ್ಪಿಸಿದ್ದರು. ಆದರೆ ಇಂದು ಅದೇ ಹಕ್ಕುಗಳನ್ನು ಕುಗ್ಗಿಸುವ ಪ್ರಯತ್ನಗಳು ನಡೆಯುತ್ತಿರುವುದು ಆತಂಕಕಾರಿ ಸಂಗತಿ.

ಇದರೊಂದಿಗೆ ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದಿರುವುದು ಮತ್ತೊಂದು ಗಂಭೀರ ಸಮಸ್ಯೆಯಾಗಿದೆ. 73ನೇ ಮತ್ತು 74ನೇ ಸಂವಿಧಾನ ತಿದ್ದುಪಡಿಗಳ ಮೂಲಕ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂವಿಧಾನಾತ್ಮಕ ಸ್ಥಾನಮಾನ ನೀಡಲಾಯಿತು. ಅಧಿಕಾರದ ವಿಕೇಂದ್ರೀಕರಣದ ಮೂಲಕ ಗ್ರಾಮ ಮತ್ತು ನಗರ ಮಟ್ಟದಲ್ಲಿ ಜನರ ಆಡಳಿತವನ್ನು ಬಲಪಡಿಸುವುದು, ಗ್ರಾಮ ಗ್ರಾಮ ಸ್ವರಾಜ್‌ ನಿರ್ಮಾಣ ಮಾಡುವುದು ಇದರ ಉದ್ದೇಶವಾಗಿತ್ತು.

ಸ್ಥಳೀಯ ಸಂಸ್ಥೆಗಳು ಕೇವಲ ಆಡಳಿತ ಘಟಕಗಳಲ್ಲ; ಅವು ಪ್ರಜಾಪ್ರಭುತ್ವದ ಅಡಿಪಾಯ. ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯತ್‌, ಜಿಲ್ಲಾ ಪಂಚಾಯತ್‌ ಮತ್ತು ನಗರ ಪಾಲಿಕೆ, ನಗರಸಭೆ ಮತ್ತು ಪುರಸಭೆಗಳು ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ವೇದಿಕೆಗಳಾಗಿವೆ. ವಿಶೇಷವಾಗಿ ಮಹಿಳೆಯರು, ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ರಾಜಕೀಯ ನಾಯಕತ್ವದ ಅವಕಾಶ ನೀಡುವ ವ್ಯವಸ್ಥೆಯಾಗಿದೆ.

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಲವಾರು ವರ್ಷಗಳಿಂದ ಮುಂದೂಡಲ್ಪಡುತ್ತಿವೆ. ವಾರ್ಡ್ ಪುನರ್ವಿಂಗಡಣೆ, ಮೀಸಲಾತಿ ವಿವಾದ, ಜನಗಣತಿ ಮಾಹಿತಿ ಮುಂತಾದ ಕಾರಣಗಳನ್ನು ಸರ್ಕಾರ ನೀಡುತ್ತಿದೆ. ಆದರೆ ಚುನಾವಣೆಗಳನ್ನು ನಿರಂತರವಾಗಿ ಮುಂದೂಡುವುದು ಜನರ ಪ್ರತಿನಿಧಿತ್ವವನ್ನೇ ಕಸಿದುಕೊಳ್ಳುವ ಕ್ರಮವಾಗಿದೆ. ಚುನಾಯಿತ ಪ್ರತಿನಿಧಿಗಳ ಬದಲು ಆಡಳಿತಾಧಿಕಾರಿಗಳು ಅಧಿಕಾರ ನಡೆಸುವ ಪರಿಸ್ಥಿತಿ ಪ್ರಜಾಪ್ರಭುತ್ವದ ತತ್ವಗಳಿಗೆ ವಿರುದ್ಧವಾಗಿದೆ.

ಚುನಾವಣೆಗಳು ನಡೆಯದಿದ್ದರೆ ಹೆಚ್ಚು ಹಾನಿಗೊಳಗಾಗುವುದು ಅಂಚಿನ ಸಮುದಾಯಗಳೇ. ಮಹಿಳೆಯರು, ಹಿಂದುಳಿದವರು ಮತ್ತು ದಲಿತರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ದೊರೆತ ಮೀಸಲಾತಿ ರಾಜಕೀಯ ಸಬಲೀಕರಣಕ್ಕೆ ದಾರಿ ಮಾಡಿಕೊಟ್ಟಿತ್ತು. ಅನೇಕ ಸಾಮಾನ್ಯ ಕುಟುಂಬಗಳ ಮಹಿಳೆಯರು ಪಂಚಾಯತ್ ಅಧ್ಯಕ್ಷರು, ಸದಸ್ಯರು ಮತ್ತು ನಗರಸಭಾ ಪ್ರತಿನಿಧಿಗಳಾಗಿ ಹೊರಹೊಮ್ಮಿದ್ದರು. ಇದು ಸಾಮಾಜಿಕ ಪರಿವರ್ತನೆಯ ಪ್ರಮುಖ ಹೆಜ್ಜೆಯಾಗಿತ್ತು. ಆದರೆ ಚುನಾವಣೆಗಳು ನಡೆಯದೆ ಹೋದರೆ ಈ ಸಮುದಾಯಗಳ ರಾಜಕೀಯ ಛಾಯೆಯೇ ಮಂಕಾಗುತ್ತದೆ.

ಪ್ರಜಾಪ್ರಭುತ್ವದ ಬಲವು ಕೇವಲ ಸಂಸತ್ ಅಥವಾ ವಿಧಾನಸಭೆಗಳಲ್ಲಿ ಮಾತ್ರ ಇರುವುದಿಲ್ಲ. ಅದು ಗ್ರಾಮ ಪಂಚಾಯಿತಿಯಿಂದ ಹಿಡಿದು ರಾಷ್ಟ್ರ ಮಟ್ಟದ ಪ್ರತಿಯೊಂದು ಚುನಾವಣಾ ಪ್ರಕ್ರಿಯೆಯಲ್ಲೂ ಅಡಗಿದೆ. ಜನರಿಗೆ ಮತದಾನ ಮಾಡುವ ಅವಕಾಶ ಕಳೆದುಹೋದರೆ ಅಥವಾ ತಮ್ಮ ಪ್ರತಿನಿಧಿಗಳನ್ನು ಆಯ್ಕೆಮಾಡುವ ಹಕ್ಕು ನಿರಾಕರಿಸಲ್ಪಟ್ಟರೆ ಪ್ರಜಾಪ್ರಭುತ್ವ ಕೇವಲ ಹೆಸರಿನ ವ್ಯವಸ್ಥೆಯಾಗಿಬಿಡುತ್ತದೆ.

ಈ ಸಂದರ್ಭದಲ್ಲಿ ಚುನಾವಣಾ ಆಯೋಗದ ಸ್ವಾಯತ್ತತೆ ಮತ್ತು ನ್ಯಾಯಾಂಗದ ಪಾತ್ರ ಅತ್ಯಂತ ಮಹತ್ವದ್ದು. ಚುನಾವಣಾ ಆಯೋಗವು ಸಂಪೂರ್ಣ ನಿರಪೇಕ್ಷತೆಯಿಂದ ಕಾರ್ಯನಿರ್ವಹಿಸಬೇಕು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಬೇಕು. ಒಬ್ಬನೇ ಒಬ್ಬ/ಒಬ್ಬಳೇ ಒಬ್ಬ ನಾಗರಿಕನೂ/ಳೂ ಅನ್ಯಾಯವಾಗಿ ಮತದಾನದ ಹಕ್ಕಿನಿಂದ ವಂಚಿತರಾಗಬಾರದು.

ಹಾಗೆಯೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಸಮಯಕ್ಕೆ ನಡೆಸುವುದು ರಾಜ್ಯ ಸರ್ಕಾರಗಳ ಸಂವಿಧಾನಾತ್ಮಕ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳನ್ನು ಮುಂದೂಡುವುದು ತಾತ್ಕಾಲಿಕ ಆಡಳಿತಾತ್ಮಕ ನಿರ್ಧಾರವಲ್ಲ, ಅದು ಜನರ ಹಕ್ಕಿನ ಪ್ರಶ್ನೆಯಾಗಿದೆ.

ಇದನ್ನೂ ಓದಿದ್ದೀರಾ? ಅಧಿಕಾರಿಗಳ ಪಾಲಾದ ಸ್ಥಳೀಯ ಆಡಳಿತ: ನನೆಗುದಿಗೆ ಬಿದ್ದ ಪಂಚಾಯಿತಿ ಚುನಾವಣೆ!

ಭಾರತೀಯ ಸಂವಿಧಾನವು ನ್ಯಾಯ, ಸಮಾನತೆ ಮತ್ತು ಸ್ವಾತಂತ್ರ್ಯದ ತತ್ವಗಳ ಮೇಲೆ ನಿರ್ಮಾಣಗೊಂಡಿದೆ. ಈ ಮೌಲ್ಯಗಳನ್ನು ಉಳಿಸಬೇಕಾದರೆ ಮತದಾನದ ಹಕ್ಕು ಮತ್ತು ಪ್ರತಿನಿಧಿತ್ವದ ಹಕ್ಕುಗಳನ್ನು ರಕ್ಷಿಸಲೇಬೇಕು. ಇಲ್ಲದಿದ್ದರೆ ಪ್ರಜಾಪ್ರಭುತ್ವದ ಆತ್ಮವೇ ಕುಸಿಯುವ ಅಪಾಯವಿದೆ. ಪ್ರಜಾಪ್ರಭುತ್ವವನ್ನು ಉಳಿಸಿಕೊಳ್ಳುವುದು ಕೇವಲ ಸರ್ಕಾರಗಳ ಕರ್ತವ್ಯವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ. ಜನರ ಧ್ವನಿಯನ್ನು ಕುಗ್ಗಿಸುವ ಯಾವುದೇ ಕ್ರಮದ ವಿರುದ್ಧ ಸಮಾಜ ಎಚ್ಚರಿಕೆಯಿಂದ ನಿಲ್ಲಬೇಕಾಗಿದೆ. ಏಕೆಂದರೆ ಮತದಾನದ ಹಕ್ಕು ಮತ್ತು ಪ್ರತಿನಿಧಿತ್ವ ಉಳಿದಾಗ ಮಾತ್ರ ಪ್ರಜಾಪ್ರಭುತ್ವ ಜೀವಂತವಾಗಿರುತ್ತದೆ.

WhatsApp Image 2026 05 22 at 1.29.30 PM
ಪೃಥ್ವಿರಾಜ್ ಬಿ ಎಲ್
+ posts

ಬೊಪ್ಪಸಮುದ್ರ, ಮಂಡ್ಯ
ಜಾಗೃತ ಕರ್ನಾಟಕ

ಪೋಸ್ಟ್ ಹಂಚಿಕೊಳ್ಳಿ:

ಪೃಥ್ವಿರಾಜ್ ಬಿ ಎಲ್
ಪೃಥ್ವಿರಾಜ್ ಬಿ ಎಲ್
ಬೊಪ್ಪಸಮುದ್ರ, ಮಂಡ್ಯ ಜಾಗೃತ ಕರ್ನಾಟಕ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...