ಉದ್ಯಮಿ ಅಪಹರಿಸಿ, ₹1.5 ಕೋಟಿ ಲಂಚ; ನಾಲ್ವರು ಜಿಎಸ್‌ಟಿ ಅಧಿಕಾರಿಗಳ ಬಂಧನ

Date:

Advertisements

ಪ್ರಕರಣವೊಂದನ್ನು ಮುಚ್ಚಿ ಹಾಕಲು 1.5 ಕೋಟಿ ರೂ. ಹಣ ಪಡೆದು ಪರಾರಿಯಾಗಿದ್ದ ಕೇಂದ್ರದ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಿಎಸ್‌ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳಾಗಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಜಿಎಸ್ ಟಿ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡ ಈ ಅಧಿಕಾರಿಗಳ ಗುಂಪು ಆ.30 ರಂದು ಕೇಶವ್ ಅವರ ಮನೆ ಮೇಲೆ ದಾಳಿ ನಡೆಸಿ ಅವರ ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದು, ಉದ್ಯಮಿಯನ್ನು ಒತ್ತಾಯಪೂರ್ವಕವಾಗಿ ಇಂದಿರಾನಗರಕ್ಕೆ ಕರೆದೊಯ್ದರು.

Advertisements

ಉದ್ಯಮಿ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ಆತನ ಫೋನ್ ನ್ನು ಫ್ಲೈಟ್ ಮೋಡ್ ಗೆ ಹಾಕಲಾಯಿತು. ಈ ಬಳಿಕ ಕೇಶವ್ ಅವರ ಸಹವರ್ತಿ ರೋಷನ್ ಜೈನ್ ಅವರಿಗೆ ವಾಟ್ಸ್ ಆಪ್ ಮೂಲಕ ಕರೆ ಮಾಡಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು. ಪ್ರಕರಣ ಮುಚ್ಚಿ ಹಾಕುವುದಕ್ಕಾಗಿ 1.5 ಕೋಟಿ ರೂ. ಹಣ ಪಡೆದು ಈ ಅಧಿಕಾರಿಗಳು ಪರಾರಿಯಾಗಿದ್ದರು.

ಘಟನೆಯ ಬಗ್ಗೆ ಕೇಶವ್ ಮತ್ತು ಸಂಗಡಿಗರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ, ಬೆದರಿಕೆ ಮತ್ತು ಸುಲಿಗೆ ಆರೋಪಗಳು ಸೇರಿವೆ. ಸೂಕ್ತ ಅನುಮತಿಯಿಲ್ಲದೆ ದಾಳಿ ನಡೆಸಿರುವುದು ತನಿಖೆ ವೇಳೆ ಪೊಲೀಸರಿಗೆ ಬೆಳಕಿಗೆ ಬಂದಿದೆ.

ತನಿಖೆಯನ್ನು ಮುಂದುವರೆಸಿದ ಸಿಸಿಬಿ ಪೊಲೀಸರು, ಈ ಪ್ರಕರಣದ ತನಿಖೆಯಲ್ಲಿ ಅನುಮೋದನೆ ಇಲ್ಲದೆ ದಾಳಿ ಮಾಡಿರುವುದು ಧೃಡಪಟ್ಟಿರುತ್ತದೆ. ಅಲ್ಲದೇ ಜಿ.ಎಸ್.ಟಿ ಅಧಿಕಾರಿಗಳು ಹಲವಾರು ವಸ್ತುಗಳನ್ನು ನಿಯಮ ಬಾಹಿರವಾಗಿ ಜಪ್ತಿ ಮಾಡಿರುವುದು, ಯಾವುದೇ ಅನುಮತಿ ಇಲ್ಲದೇ ಎರಡು ದಿನಗಳ ಕಾಲ ಫಿರ್ಯಾದುದಾರರನ್ನು ಅಕ್ರಮವಾಗಿ ಬಂಧನದಲ್ಲಿರಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X