1.5 ಕೋಟಿ ಮತದಾರರನ್ನು ಕೈಬಿಡುವ ಭೀತಿ: ಗಡುವು ವಿಸ್ತರಿಸಲು ಚುನಾವಣಾ ಆಯೋಗಕ್ಕೆ ಸಿಎಂ ಪತ್ರ

Date:

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯಿಂದಾಗಿ ಸುಮಾರು 1.5 ಕೋಟಿ ಮತದಾರರು ಪಟ್ಟಿಯಿಂದ ಕೈಬಿಟ್ಟು ಹೋಗುವ ಭೀತಿ ಎದುರಾಗಿದೆ. ಈ ಹಿನ್ನೆಲೆಯಲ್ಲಿ, ಆಕ್ಷೇಪಣೆ ಸಲ್ಲಿಕೆ ಹಾಗೂ ವಿಚಾರಣೆಗೆ ಸೂಕ್ತ ಸಮಯಾವಕಾಶ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ರಾಜ್ಯದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08 ಕೋಟಿ ಜನರನ್ನು ‘ಎಎಸ್‌ಡಿಡಿಒ’ (ಗೈರು, ಸ್ಥಳಾಂತರ, ಮರಣ, ನಕಲು ಹಾಗೂ ಇತರೆ) ಪಟ್ಟಿಗೆ ಸೇರಿಸಲಾಗಿದೆ. ರಾಜಧಾನಿ ಬೆಂಗಳೂರು ಒಂದರಲ್ಲೇ 46.88 ಲಕ್ಷ ಮತದಾರರು ಈ ಪಟ್ಟಿಯಲ್ಲಿದ್ದಾರೆ. ಇದರ ಜೊತೆಗೆ, ತಾರ್ಕಿಕ ದೋಷಗಳ ಹೆಸರಿನಲ್ಲಿ 43.8 ಲಕ್ಷ ಮತದಾರರಿಗೆ ಪರಿಶೀಲನಾ ನೋಟಿಸ್ ನೀಡಲಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಉದ್ಯೋಗ, ಅನಾರೋಗ್ಯ ಅಥವಾ ಇತರೆ ಕಾರಣಗಳಿಗಾಗಿ ಸ್ಥಳಾಂತರಗೊಂಡ ನೈಜ ಮತದಾರರು ಇದರಿಂದಾಗಿ ಮತದಾನದ ಹಕ್ಕಿನಿಂದ ವಂಚಿತರಾಗುವ ಅಪಾಯವಿದೆ. ಅದರಲ್ಲೂ ಬಡವರು ಮತ್ತು ವಲಸೆ ಕಾರ್ಮಿಕರಿಗೆ ಇದು ತೀವ್ರ ತೊಂದರೆಯಾಗಲಿದ್ದು, ತಮ್ಮ ಅರ್ಹತೆಯನ್ನು ಸಾಬೀತುಪಡಿಸಲು ಅಗತ್ಯವಿರುವ ದಾಖಲೆಗಳನ್ನು ಒದಗಿಸಲು ಅವರ ಬಳಿ ಸಮಯದ ಕೊರತೆಯಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

ಮತದಾರರಿಗೆ ನೋಟಿಸ್ ನೀಡಿದ ಕೇವಲ ಒಂದು ವಾರದೊಳಗೆ ಉತ್ತರ ಕೇಳುವುದು ದುಸ್ತರವಾಗಲಿದ್ದು, ದಾಖಲೆಗಳನ್ನು ಒದಗಿಸಲು ಪ್ರತಿಯೊಬ್ಬರಿಗೂ ಕನಿಷ್ಠ 3 ರಿಂದ 4 ವಾರಗಳ ಕಾಲಾವಕಾಶ ನೀಡಬೇಕು. ಸದ್ಯ ರಾಜ್ಯದಲ್ಲಿ ಯಾವುದೇ ಚುನಾವಣೆಗಳು ನಿಗದಿಯಾಗದ ಕಾರಣ, ಕರಡು ಪಟ್ಟಿಯಲ್ಲಿ ಹೆಸರಿಲ್ಲದವರು ಹೊಸದಾಗಿ ಸೇರ್ಪಡೆಗೊಳ್ಳಲು ಆಕ್ಷೇಪಣೆ ಮತ್ತು ಹಕ್ಕು ಮಂಡನೆ ಸಲ್ಲಿಕೆಯ ಗಡುವನ್ನು ವಿಸ್ತರಿಸಬೇಕು ಎಂದು ಆಗ್ರಹಿಸಲಾಗಿದೆ.

ಮತದಾರರ ಪಟ್ಟಿಯ ಕರಡನ್ನು ಕಡ್ಡಾಯವಾಗಿ ನಗರಾಭಿವೃದ್ಧಿ ವ್ಯಾಪ್ತಿಯಲ್ಲಿ ವಾರ್ಡ್ ಸಮಿತಿಗಳಲ್ಲಿ ಹಾಗೂ ಗ್ರಾಮೀಣ ಭಾಗದಲ್ಲಿ ಗ್ರಾಮ ಸಭೆಗಳಲ್ಲಿ ಓದಿ ಹೇಳುವಂತೆ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಬೇಕು. ಕೇವಲ ನಿಯಮಗಳ ಪಾಲನೆಯಷ್ಟೇ ಅಲ್ಲದೆ, ಪ್ರಾಯೋಗಿಕವಾಗಿ ತಪ್ಪುಗಳನ್ನು ಗುರುತಿಸಿ ಸರಿಪಡಿಸುವ ಕೆಲಸವಾಗಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಬೃಹತ್ ಪ್ರಮಾಣದ ಆಕ್ಷೇಪಣೆಗಳನ್ನು ಹಾಗೂ ವಿಚಾರಣೆಗಳನ್ನು ನಿರ್ದಿಷ್ಟ ಸಮಯದಲ್ಲಿ ಪೂರ್ಣಗೊಳಿಸಲು ಪ್ರಸ್ತುತ ಇರುವ ಸಿಬ್ಬಂದಿ ವರ್ಗ ಸಾಲದು. ಹಾಗಾಗಿ, ತಾರ್ಕಿಕ ದೋಷಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಹೆಚ್ಚುವರಿ ಎಇಆರ್‌ಒ (AERO) ಹಾಗೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳನ್ನು ನೇಮಕ ಮಾಡಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗವನ್ನು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...