ಕ್ಯಾರಿ ಬ್ಯಾಗ್‌ಗೆ ₹10 ಶುಲ್ಕ: ಅನ್ಯಾಯ ವ್ಯಾಪಾರ ಎಂದ ಗ್ರಾಹಕ ನ್ಯಾಯಾಲಯ; ಜುಡಿಯೋಗೆ ₹30,000 ದಂಡ

Date:

ಗ್ರಾಹಕರಿಗೆ ವಸ್ತುಗಳನ್ನು ಕೊಂಡೊಯ್ಯಲು ನೀಡುವ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ವ್ಯಾಪಾರ ಪದ್ಧತಿ ಹಾಗೂ ಸೇವಾ ಲೋಪ ಎಂದು ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ತೀರ್ಪೊಂದನ್ನು ನೀಡಿದೆ.

- Advertisement -

ದಾವಣಗೆರೆಯ ಪಿಜೆ ಎಕ್ಸ್‌ಟೆನ್ಶನ್‌ನ ಎವಿಕೆ ರಸ್ತೆಯಲ್ಲಿರುವ ಜುಡಿಯೋ (ತೋಶಾನಿ ಎಂಪೋರಿಯಂ ಅವೆನ್ಯೂ) ಮಳಿಗೆಯಲ್ಲಿ ಬಟ್ಟೆ ಖರೀದಿಸಿದ್ದ ರಾಜೇಂದ್ರ ಎಸ್‌ಕೆ ಬಸವರಾಜ್ ಅವರಿಗೆ ಕ್ಯಾರಿ ಬ್ಯಾಗ್‌ಗಾಗಿ ಹೆಚ್ಚುವರಿಯಾಗಿ ₹10 ಶುಲ್ಕ ವಿಧಿಸಲಾಗಿತ್ತು. ಇದನ್ನು ಪ್ರಶ್ನಿಸಿ ರಾಜೇಂದ್ರ ಅವರು ಜಿಲ್ಲಾ ಗ್ರಾಹಕ ಆಯೋಗಕ್ಕೆ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

11 ವರ್ಷಗಳ ಬಳಿಕ ಅಮೆರಿಕಕ್ಕೆ ಜಿನ್‌ಪಿಂಗ್‌; ಸ್ವಾಗತಕ್ಕೆ ಖುದ್ದು...

ಬರೋಬ್ಬರಿ 11 ವರ್ಷಗಳ ಬಳಿಕ ಅಮೆರಿಕಕ್ಕೆ ಕಾಲಿಟ್ಟಿರುವ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರನ್ನು ಖುದ್ದು ತೆರಳಿ ಸ್ವಾಗತಿಸಿದ ಟ್ರಂಪ್‌, ಶ್ವೇತಭವನದಲ್ಲಿ ಅದ್ದೂರಿ ಸರ್ಕಾರಿ ಔತಣ ಆಯೋಜಿಸಿದ್ದಾರೆ. AI, ಅತ್ಯಾಧುನಿಕ ಚಿಪ್‌ಗಳು, ರೇರ್‌...

ದೆಹಲಿಯಲ್ಲಿ ಮತದಾರರ ಪಟ್ಟಿಯಿಂದ 47 ಲಕ್ಷ ಜನರ ಕೈಬಿಟ್ಟ...

ದೇಶದ ರಾಜಧಾನಿ ದೆಹಲಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (SIR) ನೆಪದಲ್ಲಿ ಲಕ್ಷಾಂತರ ಜನರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿಸುತ್ತಿರುವ ಅತ್ಯಂತ ಆಘಾತಕಾರಿ ಸತ್ಯವೊಂದು ಇದೀಗ ಬಯಲಾಗಿದೆ. ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿರುವ ಈ ಗಂಭೀರವಾದ ವಿಷಯವನ್ನು...

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ದೂರು ವಿಚಾರಣೆ ನಡೆಸಿದ ಆಯೋಗ, ಗ್ರಾಹಕರು ಮಳಿಗೆಯಲ್ಲಿ ವಸ್ತುಗಳನ್ನು ಖರೀದಿಸಿದ ಬಳಿಕ ಅವುಗಳನ್ನು ಕೊಂಡೊಯ್ಯಲು ಕ್ಯಾರಿ ಬ್ಯಾಗ್ ನೀಡುವುದಕ್ಕೆ ಪ್ರತ್ಯೇಕ ಶುಲ್ಕ ವಿಧಿಸುವುದು ಅನ್ಯಾಯ ವ್ಯಾಪಾರ ಪದ್ಧತಿ ಹಾಗೂ ಸೇವಾ ಲೋಪಕ್ಕೆ ಒಳಪಡುತ್ತದೆ ಎಂದು ಸ್ಪಷ್ಟಪಡಿಸಿದೆ.

ಪ್ರಕರಣದಲ್ಲಿ ಜುಡಿಯೋ ಮಳಿಗೆ ದೂರುದಾರರಿಗೆ ಒಟ್ಟು ₹10 ಸಾವಿರ ಪರಿಹಾರ ಪಾವತಿಸುವಂತೆ ಆಯೋಗ ಆದೇಶಿಸಿದೆ. ಇದರಲ್ಲಿ ಸೇವಾ ಲೋಪ, ಅನ್ಯಾಯ ವ್ಯಾಪಾರ ಪದ್ಧತಿ ಹಾಗೂ ದೂರು ಸಲ್ಲಿಸಲು ಉಂಟಾದ ವೆಚ್ಚವನ್ನು ಪರಿಗಣಿಸಲಾಗಿದೆ. ಇದರೊಂದಿಗೆ ಗ್ರಾಹಕರಿಂದ ಪಡೆದ ₹10 ಅನ್ನು ಹಿಂದಿರುಗಿಸುವಂತೆಯೂ ಸೂಚಿಸಲಾಗಿದೆ.

ಅಲ್ಲದೆ, ₹20,000ವನ್ನು ಗ್ರಾಹಕರ ಕಾನೂನು ನೆರವು ಖಾತೆಗೆ ಜಮೆ ಮಾಡುವಂತೆ ಮಳಿಗೆಗೆ ನಿರ್ದೇಶನ ನೀಡಲಾಗಿದೆ. ಹೀಗಾಗಿ ಒಟ್ಟು ₹30 ಸಾವಿರ ಮೊತ್ತವನ್ನು ಒಂದು ತಿಂಗಳೊಳಗೆ ಪಾವತಿಸುವಂತೆ ಆಯೋಗ ಆದೇಶಿಸಿದೆ.

ಇದನ್ನೂ ಓದಿ: ಬಾಗಲಕೋಟೆ | ತೋಟಗಾರಿಕೆ ವಿವಿಯಲ್ಲಿ ಪೂಜೆ-ಹೋಮ ಆಯೋಜನೆ; ಸೋಷಿಯಲ್ ಮೀಡಿಯಾದಲ್ಲಿ ತೀವ್ರ ಆಕ್ಷೇಪ!

ಈ ಆದೇಶ ಕೇವಲ ಜುಡಿಯೋ ಮಳಿಗೆಗೆ ಸೀಮಿತವಾಗಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿದೆ. ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗೆ ಹೆಚ್ಚುವರಿ ಶುಲ್ಕ ವಸೂಲಿ ಮಾಡುವ ಪದ್ಧತಿ ಇತರೆ ಸಗಟು ಮತ್ತು ಚಿಲ್ಲರೆ ವ್ಯಾಪಾರ ಮಳಿಗೆಗಳು, ದೊಡ್ಡ ಮಾಲ್‌ಗಳು ಹಾಗೂ ರಿಟೇಲ್‌ ಔಟ್‌ಲೆಟ್‌ಗಳಿಗೂ ಅನ್ವಯಿಸುತ್ತದೆ ಎಂದು ತಿಳಿಸಿದೆ.

ಮೋರ್, ರಿಲಯನ್ಸ್, ಟ್ರೆಂಡ್ಸ್ ಸೇರಿದಂತೆ ವಸ್ತುಗಳನ್ನು ಮಾರಾಟ ಮಾಡುವ ಇತರೆ ಮಳಿಗೆಗಳೂ ಗ್ರಾಹಕರಿಂದ ಕ್ಯಾರಿ ಬ್ಯಾಗ್‌ಗಾಗಿ ಪ್ರತ್ಯೇಕ ಶುಲ್ಕ ವಸೂಲಿ ಮಾಡಬಾರದು ಎಂದು ಆಯೋಗದ ಆದೇಶದಲ್ಲಿ ತಿಳಿಸಲಾಗಿದೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಕುಮಾರಿ ಎಚ್‌.ಎನ್‌. ಮೀನಾ ಹಾಗೂ ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಅವರನ್ನೊಳಗೊಂಡ ಪೀಠ ಈ ಆದೇಶ ನೀಡಿದೆ ಎಂದು ಆಯೋಗದ ಸಹಾಯಕ ನೋಂದಣಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೀಸಲಾತಿ ದೇಶಕ್ಕೆ ಅತ್ಯಗತ್ಯ, ಅದು ಮುಂದುವರಿಯಲೇಬೇಕು: ಎಬಿವಿಪಿ ಪ್ರಧಾನ ಕಾರ್ಯದರ್ಶಿ ಡಾ. ವೀರೇಂದ್ರ ಸಿಂಗ್ ಸೋಲಂಕಿ

ಸಂವಿಧಾನ ಒದಗಿಸಿರುವ ಮೀಸಲಾತಿ ವ್ಯವಸ್ಥೆಯು ಭಾರತದಂತಹ ದೇಶಕ್ಕೆ ಅತ್ಯಗತ್ಯವಾಗಿದ್ದು, ಅದು ಖಂಡಿತವಾಗಿಯೂ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...