‘ದ್ವೇಷ ಭಾಷಣಕ್ಕೆ 10 ವರ್ಷ ಜೈಲು’ ಕಾಂಗ್ರೆಸ್‌ನ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ ಜೋಶಿ

Date:

ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ” ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.

- Advertisement -

ನವದೆಹಲಿಯಲ್ಲಿ ಮಾತನಾಡಿದ ಅವರು, “ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದಾಗಿದೆ ಮತ್ತು ರಾಜಕೀಯ ನಿಯಂತ್ರಣದ ದುರುದ್ದೇಶಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಹರಿಹಾಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮೂಲಕ ಸರ್ವರ ವಾಕ್ ಸ್ವತಂತ್ರ ಕಿತ್ತುಕೊಳ್ಳುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರದರ್ಶಿಸುತ್ತಿದ್ದು, ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ದುರಾಡಳಿತ ವಿರುದ್ಧದ ಧ್ವನಿ ಅಡಗಿಸಲು ಹಾಗು ಸಾರ್ವಜನಿಕ ಅಭಿಪ್ರಾಯಗಳಿಗೆ ಕಡಿವಾಣ ಹಾಕಲು ಹೀಗೆ “ದ್ವೇಷ ಭಾಷಣ”ಕ್ಕೆ 10 ವರ್ಷಗಳ ಜೈಲು ಶಿಕ್ಷೆ?” ಎಂಬ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ” ಶಾಸನ ರಚನೆ ಮಾಡಿದೆ” ಎಂದು ಖಂಡಿಸಿದರು.

“ಕಾಂಗ್ರೆಸ್ ಸರ್ಕಾರದ ಈ ಶಾಸನ ದ್ವೇಷ ಭಾಷಣವನ್ನು ನಿಯಂತ್ರಿಸುವ ಉದ್ದೇಶವೋ ಅಥವಾ ವಾಕ್ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವ ಹುನ್ನಾರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಇದು ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ರಚಿಸಿದಂತೆ ಕಾಣುತ್ತಿಲ್ಲ. ಬದಲಾಗಿ ಸರ್ಕಾರದ ದುರಾಡಳಿತ ಪ್ರಶ್ನಿಸುವವರ ಧ್ವನಿ ಅಡಗಿಸುವ ದುರುದ್ದೇಶಪುರಕದಂತೆ ಇದೆ” ಎಂದು ಆರೋಪಿಸಿದರು.

“ರಾಜ್ಯ ಸರ್ಕಾರದ ಈ ವಿಧೇಯಕ ವಿಮರ್ಶಕರನ್ನು ವಿಮರ್ಶೆಯಿಂದಲೇ ದೂರವಿಡುವ ಹಾಗೂ ಸರ್ಕಾರದ ದುರಾಡಳಿತ ಹೊರಬಾರದಂತೆ ಹತ್ತಿಕ್ಕುವ ದುರಾಲೋಚನೆಯಿಂದ ಕೂಡಿದೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...