ಸೆ.20ರಿಂದ 108 ಸೇವೆ ಬಂದ್: ಆ್ಯಂಬುಲೆನ್ಸ್ ನೌಕರರಿಂದ ಸಾಮೂಹಿಕ ರಾಜೀನಾಮೆ ಎಚ್ಚರಿಕೆ, ಸರ್ಕಾರಕ್ಕೆ ಗಡುವು

Date:

ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ಆರೋಗ್ಯ ಕವಚ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ 108 ಆ್ಯಂಬುಲೆನ್ಸ್ ನೌಕರರು ತಮ್ಮ ಬೇಡಿಕೆಗಳ ಈಡೇರಿಕೆಗೆ ಸರ್ಕಾರಕ್ಕೆ 15 ದಿನಗಳ ಗಡುವು ನೀಡಲಾಗಿದ್ದು, ಮುಷ್ಕರದ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರದಿದ್ದರೆ ಸೆಪ್ಟೆಂಬರ್ 20ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟಕ್ಕಿಳಿಯುವುದಾಗಿ ಸಂಘಟನೆಗಳು ತಿಳಿಸಿವೆ.

- Advertisement -

ಈ ಸಂಬಂಧ ಸುವರ್ಣ ಕರ್ನಾಟಕ ಆರೋಗ್ಯ ಕವಚ-108 ನೌಕರರ ಸಂಘ ಹಾಗೂ ಕರ್ನಾಟಕ ರಾಜ್ಯ ಆರೋಗ್ಯ ಕವಚ ಆ್ಯಂಬುಲೆನ್ಸ್‌ ನೌಕರರ ಸಂಘದ ಪದಾಧಿಕಾರಿಗಳು ಆರೋಗ್ಯ ಸಚಿವರು ಮತ್ತು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದು ತಮ್ಮ ಅಳಲು ತೋಡಿಕೊಂಡಿದ್ದಾರೆ. ಜಿವಿಕೆ ಸಂಸ್ಥೆಯ ಅಧೀನದಲ್ಲಿ ಸುಮಾರು 35,000 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

“ವಲಯವಾರು ವಿಂಗಡಣೆ ಮಾಡಿ ನಿಗದಿ ಮಾಡಿರುವ ವೇತನ ರದ್ದುಪಡಿಸಿ ಏಕರೂಪ ವಲಯವಾಗಿ ಬದಲಾವಣೆ ಮಾಡಬೇಕು. ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ, ಜೇಷ್ಠತೆ ಆಧಾರದ ಮೇಲೆ ಸಿಬ್ಬಂದಿಗೆ ವೇತನ ನಿಗದಿ ಮಾಡಬೇಕು. ಕಾರ್ಮಿಕ ಇಲಾಖೆ ಪ್ರಕಾರ ಪ್ರತಿ ತಿಂಗಳು 7ರ ಒಳಗೆ ವೇತನ ನೀಡಬೇಕು. ಎಲ್ಲ ಕೆಲಸದ ಸ್ಥಳಗಳಲ್ಲಿ ಕಾರ್ಮಿಕರಿಗೆ ಶೌಚಾಲಯ, ವಿಶ್ರಾಂತಿ ಕೊಠಡಿ, ಆ್ಯಂಬುಲೆನ್ಸ್ ಸ್ವಚ್ಛಗೊಳಿಸಲು ನೀರಿನ ವ್ಯವಸ್ಥೆ ಮಾಡಬೇಕು” ಎಂದು ಆಗ್ರಹಿಸಿದೆ.

“ಸೆ.4ರಂದು ಪತ್ರ ಬರೆದಿರುವ ಸಂಘದ ಪದಾಧಿಕಾರಿಗಳು, 15 ದಿನಗಳ ಒಳಗಾಗಿ ಬೇಡಿಕೆ ಈಡೇರಿಸದದಸಿದ್ದರೆ ಸೆ.20ರಿಂದ ಸಾಮೂಹಿಕ ರಾಜೀನಾಮೆ ನೀಡಿ ಹೋರಾಟ ನಡೆಸುತ್ತೇವೆ. ನಂತರದ ಪರಿಣಾಮಗಳಿಗೆ ಸರ್ಕಾರವೇ ಹೊಣೆ” ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿದ್ದೀರಾ? ಬೀದರ್‌ | ರೈಲು ತಾಂತ್ರಿಕ ದೋಷದಿಂದ ತಪ್ಪಿದ ಕೆಇಎ ಪರೀಕ್ಷೆ, ಮರುಪರೀಕ್ಷೆ ನಡೆಸಲು DYFI ಆಗ್ರಹ

“108 ಆ್ಯಂಬುಲೆನ್ಸ್ ನೌಕರರ ಮುಷ್ಕರದಿಂದ ರೋಗಿಗಳಿಗೆ ಸಮಸ್ಯೆಯಾದರೆ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚಾಲಕರಿಗೆ ಯಾವುದೇ ಸಮಸ್ಯೆ ಇದ್ದಲ್ಲಿ ಕಂಪೆನಿಯೊಂದಿಗೆ ಮಾತುಕತೆ ನಡೆಸಬೇಕು. ಕಂಪನಿಗೆ ತಮ್ಮ ಚಾಲಕರು ಮತ್ತು ನಿರ್ವಾಹಕರನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ ಕಂಪನಿ ಬಿಟ್ಟು ಹೋಗಬೇಕು” ಎಂದು ಸಚಿವ ಯು ಟಿ ಖಾದರ್ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ಮುಂದಿನ 5 ದಿನ 12 ಜಿಲ್ಲೆಗಳಲ್ಲಿ ಭಾರಿ ಮಳೆ

ರಾಜ್ಯದಲ್ಲಿ ಹಿಂಗಾರು ಮತ್ತು ತಮಿಳುನಾಡು ಕರಾವಳಿಯಲ್ಲಾಗಿರುವ ಹವಾಮಾನ ಬದಲಾವಣೆಯ ಪ್ರಭಾವದಿಂದಾಗಿ ಮುಂದಿನ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ ವಲಸಿಗರೇ..?

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ...

‘ಉಗ್ರ ಕೃತ್ಯದ ಆರೋಪಿಗೆ ಇಷ್ಟೊಂದು ವಿನಾಯಿತಿ ಏಕೆ?’- ಅಮೆರಿಕ ಪ್ರಜೆ ವ್ಯಾನ್‌ಡೈಕ್ ಬಿಡುಗಡೆಗೆ ಕಾಂಗ್ರೆಸ್ ಕಿಡಿ

ಮ್ಯಾನ್ಮಾರ್‌ ಶಸ್ತ್ರಾಸ್ತ್ರ ತರಬೇತಿ ಪ್ರಕರಣದಲ್ಲಿ ಆರೋಪಿಯಾಗಿರುವ ಅಮೆರಿಕದ ಪ್ರಜೆ ಮ್ಯಾಥ್ಯೂ ವ್ಯಾನ್‌ಡೈಕ್...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...