ಧರ್ಮಸ್ಥಳ ಅಸಹಜ ಸಾವು | 10 ವರ್ಷದಲ್ಲಿ 123 ಅಪರಿಚಿತ ಶವ ಪತ್ತೆ: ಖಾಸಗಿ ಆಸ್ಪತ್ರೆಯಲ್ಲಿ 84 ಶವಗಳ ‘ಪೋಸ್ಟ್‌ ಮಾರ್ಟಮ್’

Date:

ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ (2015 ರಿಂದ 2026ರ ಆರಂಭದವರೆಗೆ) ದಾಖಲಾದ ಅಸ್ವಾಭಾವಿಕ ಮರಣ (Unnatural Death Report – UDR) ಪ್ರಕರಣಗಳು ಹಾಗೂ ಅಪರಿಚಿತ ಶವಗಳ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದ ಮಾಹಿತಿ ಬಹಿರಂಗಗೊಂಡಿದೆ.

- Advertisement -

ಧರ್ಮಸ್ಥಳ ಪೊಲೀಸ್ ಉಪನಿರೀಕ್ಷಕರು (ಪಿಎಸ್‌ಐ) ನೀಡಿರುವ ಅಧಿಕೃತ ವರದಿಯ ಪ್ರಕಾರ, ಈ ಅವಧಿಯಲ್ಲಿ ಠಾಣೆಯಲ್ಲಿ ಒಟ್ಟು 681 ಅಸ್ವಾಭಾವಿಕ ಮರಣ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 123 ಅಪರಿಚಿತ ವ್ಯಕ್ತಿಗಳ ಶವಗಳು ಪತ್ತೆಯಾಗಿದ್ದು, ಇವುಗಳ ಪೈಕಿ 84 ಶವಗಳನ್ನು ಹೆಚ್ಚಿನ ಪೋಸ್ಟ್‌ ಮಾರ್ಟಮ್‌ಗಾಗಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ; ಎಸ್ ಐಟಿ ತನಿಖೆ ಮತ್ತು ರಾಜಕೀಯ ಲೆಕ್ಕಾಚಾರ…!

2015ರಲ್ಲಿ ಯಾವುದೇ ಪ್ರಕರಣಗಳನ್ನು ದಾಖಲಿಸಲಾಗಿಲ್ಲ. 2016ರಲ್ಲಿ 48 ಅಸ್ವಾಭಾವಿಕ ಮರಣ, 10 ಅಪರಿಚಿತ ಶವ ಪ್ರಕರಣ ದಾಖಲಾಗಿದೆ. ಈ ಪೈಕಿ 9 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ಮಾಡಿಸಲಾಗಿದೆ. 2017ರಲ್ಲಿ 56 ಅಸ್ವಾಭಾವಿಕ ಮರಣ ನಡೆದಿದ್ದರೆ, 10 ಅಪರಿಚಿತ ಶವ ಪತ್ತೆಯಾಗಿದೆ. ಈ ಪೈಕಿ 7 ಶವಗಳ ಮರಣೋತ್ತರ ಪರೀಕ್ಷೆ ಕೆ ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ನಡೆದಿದೆ.

2018ರಲ್ಲಿ 63 ಅಸ್ವಾಭಾವಿಕ ಸಾವು ನಡೆದಿದೆ. 12 ಅಪರಿಚಿತ ಶವ ಪತ್ತೆಯಾಗಿದ್ದು 10 ಶವಗಳನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. 2019ರಲ್ಲಿ 59 ಅಸ್ವಾಭಾವಿಕ ಮರಣ ಸಂಭವಿಸಿದ್ದು, 7 ಅಪರಿಚಿತ ಶವ ಪ್ರಕರಣವಾಗಿದೆ. 4 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. 2020ರಲ್ಲಿ 51 ಅಸ್ವಾಭಾವಿಕ ಮರಣ ನಡೆದಿದೆ. 8 ಅಪರಿಚಿತ ಶವವಾಗಿದ್ದು ಈ ಪೈಕಿ 3 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಸಾಗಿಸಿ ಪೋಸ್ಟ್‌ ಮಾರ್ಟಮ್ ಮಾಡಲಾಗಿದೆ.

2021ರಲ್ಲಿ 67 ಅಸ್ವಾಭಾವಿಕ ಮರಣವಾಗಿದ್ದು, 14 ಅಪರಿಚಿತ ಶವ ಪ್ರಕರಣ ದಾಖಲಾಗಿದೆ. ಈ ಪೈಕಿ10 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಸಾಗಿಸಲಾಗಿದೆ. 2022ರಲ್ಲಿ 74 ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದ್ದು, 12 ಅಪರಿಚಿತ ಶವ ಪತ್ತೆಯಾಗಿದೆ. ಈ ಪೈಕಿ 9 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

2023ರಲ್ಲಿ 88 ಅಸ್ವಾಭಾವಿಕ ಮರಣ ನಡೆದಿದ್ದು, 11 ಅಪರಿಚಿತ ಶವಗಳಾಗಿವೆ. ಈ ಪೈಕಿ 6 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. 2024ರಲ್ಲಿ ಅತ್ಯಂತ ಹೆಚ್ಚು ಅಂದರೆ 97 ಅಸ್ವಾಭಾವಿಕ ಸಾವು ಪ್ರಕರಣಗಳು ದಾಖಲಾಗಿವೆ. 26 ಅಪರಿಚಿತ ಶವಗಳು ಪತ್ತೆಯಾಗಿದ್ದು, 17 ಶವಗಳನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ.

2025ರಲ್ಲಿ 67 ಅಸ್ವಾಭಾವಿಕ ಮರಣ ಸಂಭವಿಸಿದ್ದು, 11 ಅಪರಿಚಿತ ಶವ ಪತ್ತೆಯಾಗಿದೆ. ಈ ಪೈಕಿ 7 ಶವ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. 2026ರ ಆರಂಭದಿಂದ ಫೆಬ್ರವರಿ 2ರವರೆಗೆ 11 ಅಸ್ವಾಭಾವಿಕ ಸಾವು ಸಂಭವಿಸಿದೆ. 2 ಅಪರಿಚಿತ ಶವ ಪತ್ತೆಯಾಗಿದ್ದು, ಇವೆರಡೂ ಶವಗಳನ್ನು ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ಸಂಪಾದಕೀಯ | ದೇಶಕ್ಕೆ ಆರ್ಥಿಕ ಬಿಕ್ಕಟ್ಟು ಎದುರಾಗಲಿದೆಯೇ, ನಾಯಕರ ಮಾತು ಎಚ್ಚರಿಕೆಯ ಗಂಟೆಯೇ?

ವಿದೇಶಾಂಗ ನೀತಿ ಗೊತ್ತಿಲ್ಲದ ಜೈಶಂಕರ್‌, ಬಡವರು ಹೇಗೆ ಬದುಕುತ್ತಿದ್ದಾರೆ ಎಂದು ಅರಿಯದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ನೋಂದಣಿಯೇ ಆಗದ RSSನಿಂದ ಪೌರತ್ವ ನೋಂದಣಿ ಜಾರಿಗೆ ಆಗ್ರಹ: ಜನಗಣತಿ, SIR ನಡುವೆ ಹೊಸ ವಿವಾದ

ದೇಶದಲ್ಲಿ ಮುಂಬರುವ ಜನಗಣತಿ ಪ್ರಕ್ರಿಯೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ತನಿಖೆಯ ನೆಪ, ನನೆಗುದಿಗೆ ಬಿಲ್: ₹38,000 ಕೋಟಿ ಪಾವತಿಗೆ ಗಡುವು ನೀಡಿದ ಗುತ್ತಿಗೆದಾರರು

ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಯ ಬೆನ್ನೆಲುಬಾಗಿರುವ ಸರ್ಕಾರಿ ಗುತ್ತಿಗೆದಾರರು ಸದ್ಯ ಸರ್ಕಾರದ ವಿರುದ್ಧ...