13 ಕಂಪನಿಗಳಿಂದ ₹27 ಸಾವಿರ ಕೋಟಿ ಹೂಡಿಕೆ, 8 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ.

- Advertisement -

ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Bhalki Ground Report | ಮುಸ್ಲಿಮರ ಮತ ಹಕ್ಕಿಗೆ ಕನ್ನ: ಬಗೆದಷ್ಟು ಬಯಲಾಗ್ತಿದೆ ‘ಫಾರ್ಮ್-7’ರ ಸಂಚು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಈಶ್ವರ ಬಿ.ಖಂಡ್ರೆ ಅವರು ಪ್ರತಿನಿಧಿಸುವ...

KPSC ಹಗರಣ | ಅಮಾನತಿನಲ್ಲಿರುವ ಐಎಎಸ್‌ ಗಂಗ್ವಾರ್‌ಗೆ ಜಾಮೀನು ನಿರಾಕರಣೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ...

ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು: ಜನವಾದಿ ಮಹಿಳಾ ಸಂಘಟನೆ ಆಗ್ರಹ

ದೇಶದ ಚುನಾವಣಾ ಪ್ರಜಾಪ್ರಭುತ್ವದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಪುನಃಸ್ಥಾಪಿಸಲು ಮುಖ್ಯ ಚುನಾವಣಾ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದೆ. ಪರಿಣಾಮ, ಕರ್ನಾಟಕದ 17 ಜಿಲ್ಲೆಗಳಲ್ಲಿ ಮುಂದಿನ ನಾಲ್ಕು...