ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 3 ವರ್ಷದಲ್ಲಿ ₹13,000 ಕೋಟಿ ಅನುದಾನ: ಸಿಎಂ ಸಿದ್ದರಾಮಯ್ಯ

Date:

Advertisements

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳ ಅಭಿವೃದ್ಧಿಗೆ ಮೂರು ವರ್ಷದಲ್ಲಿ 13,000 ಕೋಟಿ ರೂಪಾಯಿ ಅನುದಾನ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಆಯೋಜಿಸಿರುವ ‘ಆರೋಗ್ಯ ಆವಿಷ್ಕಾರ’ ಯೋಜನೆಯ ಅಡಿಯಲ್ಲಿ 440.63 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

“ವರ್ಷಕ್ಕೆ 5,000 ಕೋಟಿ ರೂ. KKRDB ಗೆ ಕೊಡುವುದಾಗಿ ನಾವು ಚುನಾವಣೆ ವೇಳೆ ಭರವಸೆ ನೀಡಿದ್ದೆವು. ಕಾಂಗ್ರೆಸ್ ಕೊಟ್ಟ ನಮ್ಮ ಭರವಸೆಯಂತೆ ಇಲ್ಲಿಯವರೆಗೂ 13,000 ಕೋಟಿ ರೂಪಾಯಿ ಹಣ ನೀಡಿದ್ದೇವೆ. ಇಲ್ಲಿಯವರೆಗೂ 5,300 ಕೋಟಿ ರೂ. ಮೊತ್ತ ಖರ್ಚಾಗಿದ್ದು ಕಾಮಗಾರಿ ಜನರಿಗೆ ತಲುಪಿದೆ. ಈ ಅನುದಾನದ ಹೊರತಾಗಿ ಸರ್ಕಾರ ಇಲಾಖಾವಾರು ಕಾರ್ಯಕ್ರಮಗಳಿಗಾಗಿ ಅನುದಾನ ನೀಡುತ್ತಲೇ ಇದೆ” ಎಂದರು.

Advertisements

“ನಂಜುಂಡಪ್ಪ ಅವರ ವರದಿಯ ಆಶಯಗಳನ್ನು ನಮ್ಮ ಸರ್ಕಾರ ಈಡೇರಿಸುತ್ತಿದೆ. ಆರೋಗ್ಯ, ಶಿಕ್ಷಣ, ಉದ್ಯೋಗದಲ್ಲಿ ಕಲ್ಯಾಣ ಕರ್ನಾಟಕ ಪ್ರಗತಿ ಸಾಧಿಸುವ ಜೊತೆಗೆ ಮೂಲ ಸೌಕರ್ಯಗಳ ಈಡೇರಿಕೆಗೆ ಹಣ ವಿನಿಯೋಗ ಮಾಡಲು ಸೂಚನೆ ನೀಡಿದ್ದೇನೆ. ಇದರ ಪ್ರಕಾರ ಅಕ್ಷರ ಆವಿಷ್ಕಾರ ನಡೆದು ಇಂದು 440.63 ಕೋಟಿ ರೂ. ವೆಚ್ಚದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮ ಇಂದು ಉದ್ಘಾಟನೆ ಮಾಡಿದ್ದೇವೆ. ಕೊಲ್ಲೂರು ಮಲ್ಲಪ್ಪ ಅವರ ಸ್ಮಾರಕಕ್ಕೆ ಪುಕ್ಕಟೆಯಾಗಿ ಜಗ ಕೊಟ್ಟಿದ್ಸೇವೆ. ಮಲ್ಲಪ್ಪ ಅವರು ಕಲ್ಯಾಣ ಕರ್ನಾಟಕದ ಗಾಂಧಿ ಎಂದು ಕರೆಸಿಕೊಂಡಿದ್ದವರು. ಸ್ವಾತಂತ್ರ್ಯ ಹೋರಾಟಗಾರರಾದ ಇವರ ಸ್ಮಾರಕ ಕೂಡಲೇ ಆಗಬೇಕು” ಎಂದು ಸಿಎಂ ಸೂಚನೆ ನೀಡಿದರು.

“42 ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸುವುದು, ಹೊಸ ಆಸ್ಪತ್ರೆಗಳ ನಿರ್ಮಾಣ ಆಗುತ್ತಿದೆ. ಈ ಭಾಗದ ಆರೋಗ್ಯ ಸವಲತ್ತು ವಿಸ್ತರಿಸಲು ಒಟ್ಟು 847 ಕೋಟಿ ರೂ. ಕೊಡಲು ಸರ್ಕಾರ ಯೋಜನೆ ರೂಪಿಸಿದೆ. ರಾಜ್ಯದಲ್ಲಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಎಲ್ಲ ಸುಳ್ಳುಗಳಿಗೆ ಜನರೇ ಉತ್ತರ ನೀಡುತ್ತಿದ್ದಾರೆ. ಏಕೆಂದರೆ ನಾವು ಅಭಿವೃದ್ಧಿಗೆ ಕೊಟ್ಟಿರುವ ಹಣ ರಾಜ್ಯದ ಜನರ ಮನೆ ಬಾಗಿಲಿಗೆ ತಲುಪಿದೆ” ಎಂದರು.

ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ

“ಬೆಲೆ ಏರಿಕೆಗೆ ಕಾರಣವಾಗಿರುವುದು ಕೇಂದ್ರದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ. ಮೋದಿ ಬರುವ ಮೊದಲು ಚಿನ್ನ, ಪೆಟ್ರೋಲ್, ಡೀಸೆಲ್, ಔಷಧ, ರಸಗೊಬ್ಬರ, ಅಡುಗೆ ಎಣ್ಣೆ, ಅಡುಗೆ ಅನಿಲದ ಬೆಲೆ ಎಷ್ಟಿತ್ತು ? ಮೋದಿ ಬಂದ ಬಳಿಕ ಎಷ್ಟು ಏರಿಕೆಯಾಗಿದೆ ನೋಡಿ. ಬೆಲೆ ಏರಿಕೆಯ ಸೃಷ್ಟಿಕರ್ತ ಪ್ರಧಾನಿ ಮೋದಿ” ಎಂದು ಟೀಕಿಸಿದರು.

“ಸುಳ್ಳೇ ಬಿಜೆಪಿಯ ಮನೆ ದೇವರು. ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ. ಬಿಜೆಪಿ 371 ಜೆ ಗೆ ವಿರುದ್ಧವಿತ್ತು. ಉಪ ಪ್ರಧಾನಿ ಆಗಿದ್ದ ಎಲ್.ಕೆ.ಅಡ್ವಾಣಿ ಅವರು 371ಜೆ ಜಾರಿ ಮಾಡುವುದಿಲ್ಲ ಎಂದು ಪತ್ರ ಬರೆದಿದ್ದರು. ಕೊನೆಗೆ ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂ‌ಸಿಂಗ್ ಅವ್ ಹೋರಾಟಕ್ಕೆ ಮಾನ್ಯತೆ ನೀಡಿ 371ಜೆ ಜಾರಿ ಮಾಡಿದರು” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X