ಫುಲೆ ಅವರ ‘ಗುಲಾಮಗಿರಿ’ಗೆ 150 ವರ್ಷ; ನ.14ರಂದು ಉಪನ್ಯಾಸ ಕಾರ್ಯಕ್ರಮ

Date:

ಆಧುನಿಕ ಭಾರತದ ಮೊದಲ ಜಾತಿ ವಿರೋಧಿ ಹೋರಾಟಗಾರ ಜೋತಿಬಾ ಫುಲೆಯವರ ಪ್ರಮುಖ ಕೃತಿ ‘ಗುಲಾಮಗಿರಿ’ ಬಿಡುಗಡೆಯಾಗಿ 150 ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ನವಯಾನ ಟ್ರಸ್ಟ್ ಬೆಂಗಳೂರಿನಲ್ಲಿ ‘ಗುಲಾಮಗಿರಿ’ಗೆ 150 ವರ್ಷಗಳು ಹೆಸರಿನಲ್ಲಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿದೆ.

- Advertisement -

ಉಪನ್ಯಾಸ ಕಾರ್ಯಕ್ರಮದ ಬಗ್ಗೆ ನವಯಾನ ಟ್ರಸ್ಟ್‌ ಪತ್ರಿಕಾ ಪ್ರಕಟಣೆ ನೀಡಿದೆ. “ಜಾತಿ ವಿನಾಶ, ಲಿಂಗ ಸಮಾನತೆ ಕುರಿತ ಹೋರಾಟಕ್ಕೆ ಸ್ಪಷ್ಟ ಮಾರ್ಗವನ್ನು ಹಾಕಿಕೊಟ್ಟ ಪುಲೆಯವರ ‘ಗುಲಾಮಗಿರಿ’ ಕೃತಿ ಇವತ್ತಿಗೂ ಪ್ರಸ್ತುತ. ಈ ಬಗ್ಗೆ ಚರ್ಚಿಸಲು ಬೆಂಗಳೂರಿನ ಕರ್ನಾಟಕ ಚಿತ್ರಕಲಾ ಪರಿಷತ್‌ನಲ್ಲಿರುವ ದೇವರಾಜ ಅರಸು ಆರ್ಟ್‌ ಗ್ಯಾಲರಿಯಲ್ಲಿ ನವೆಂಬರ್ 14ರ ಸಂಜೆ 5 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ರಾಜ್ಯಶಾಸ್ತ್ರಜ್ಞ ಪ್ರೊ. ವೆಲೇರಿಯನ್ ರಾಡ್ರಿಗಸ್ ಅವರು ಉಪನ್ಯಾಸ ನೀಡಲಿದ್ದಾರೆ. ಹಾಡುಗಾರ್ತಿ ಮುಡುಬಿ, ಚಿಂತಕ ಪ್ರವೀಣ್ ತೆಲ್ಲೆಪಲ್ಲಿ ಹಾಗೂ ರಂಗಕರ್ಮಿ ಕೆ.ಪಿ ಲಕ್ಷ್ಮಣ್ ಪ್ರತಿಕ್ರಿಯೆ ನೀಡಲಿದ್ದಾರೆ. ರಾಜಕೀಯ ಚಿಂತಕ ವಿ.ಎಲ್ ನರಸಿಂಹ ಮೂರ್ತಿ ಉಪಸ್ಥಿತರಿರುತ್ತಾರೆ” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಅಮೆರಿಕದ ಆಫ್ರಿಕನ್‌ ಅಮೆರಿಕನ್ನರು ಜನಾಂಗೀಯವಾದದ ವಿರುದ್ಧ ನಡೆಸುತ್ತಿದ್ದ ಹೋರಾಟದ ಮಾದರಿಯಲ್ಲಿಯೇ ಭಾರತದ ಶೂದ್ರ ಮತ್ತು ಅತಿಶೂದ್ರರು ಜಾತಿ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡುವ ಅಗತ್ಯವನ್ನು ಫುಲೆ ಒತ್ತಿ ಹೇಳಿದ್ದರು. ವೇದಗಳು, ಗೀತೆ, ಸ್ಮೃತಿಗಳನ್ನು ಬಳಸಿಕೊಂಡು ಬ್ರಾಹ್ಮಣ್ಯದ ಯಜಮಾನಿಕೆ, ಶೂದ್ರ ಮತ್ತು ಅತಿ ಶೂದ್ರರ ಮೇಲಿನ ಶೋಷಣೆ, ಅಪಮಾನಕ್ಕೆ ಗುರಿಪಡಿಸಿರುವ ಕುತಂತ್ರವನ್ನು ತೀವ್ರವಾಗಿ ತಮ್ಮ ‘ಗುಲಾಮಗಿರಿ’ ಕೃತಿಯಲ್ಲಿ ಫುಲೆ ವಿಮರ್ಶೆಗೆ ಒಳಪಡಿಸಿದ್ದಾರೆ. ಫುಲೆಯವರ ‘ಗುಲಾಮಗಿರಿ’ ಕೃತಿ ಜಾತಿ ವ್ಯವಸ್ಥೆಯನ್ನು ಆಧುನಿಕ ಸಂದರ್ಭದಲ್ಲಿ ಕಟು ವಿಮರ್ಶೆ, ವಿಶ್ಲೇಷಣೆ ಮಾಡಿದ ಮೊದಲ ವೈಚಾರಿಕ ಕೃತಿಯಾಗಿದೆ” ಎಂದು ಟ್ರಸ್ಟ್‌ ಹೇಳಿದೆ.

“ಫುಲೆಯವರು ವಸಾಹತುಶಾಹಿ ಸಂದರ್ಭದಲ್ಲಿ ತಳಸಮುದಾಯಗಳ ವಿಮೋಚನೆಗಾಗಿ ಹೋರಾಟಗಳನ್ನು ರೂಪಿಸಿದ್ದಾರೆ. ಅವರ ಚಿಂತನೆಯ ಕಾರಣಕ್ಕಾಗಿಯೇ ಫುಲೆ ಅವರನ್ನು ಬಾಬಾಸಾಹೇಬ್ ಅಂಬೇಡ್ಕರ್ ಅವರು ತಮ್ಮ ಗುರು ಎಂದು ಒಪ್ಪಿಕೊಂಡಿದ್ದರು” ಎಂದು ಟ್ರಸ್ಟ್‌ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...