ಕಾಶ್ಮೀರದಿಂದ ಬೆಂಗಳೂರಿಗೆ ಆಗಮಿಸಿದ ಪ್ರವಾಸಕ್ಕೆ ತೆರಳಿದ್ದ 178 ಕನ್ನಡಿಗರು

Date:

ಕಾಶ್ಮೀರದ ಪಹಲ್ಗಾಮ್‌ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ 178 ಕನ್ನಡಿಗರು ಬೆಂಗಳೂರಿಗೆ ಆಗಮಿಸಿದ್ದಾರೆ. ಇವರೆಲ್ಲರು ರಾಜ್ಯದ ವಿವಿಧಡೆಯಿಂದ ಕಾಶ್ಮೀರಕ್ಕೆ ಪ್ರವಾಸಕ್ಕೆ ತೆರಳಿದ್ದರು. 

- Advertisement -

ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿತ್ತು. ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿಯ ಸೂಚನೆ ಮೇರೆಗೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್ ಸಕಲ ವ್ಯವಸ್ಥೆಗಳನ್ನು ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮತ್ತೆ ಅಬ್ಬರಿಸಿದ ಭಯೋತ್ಪಾದನೆ- ಮೋಶಾರತ್ತ ದಿಟ್ಟಿ ನೆಟ್ಟ ದೇಶ

ಅದರಂತೆ 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ(ಇಂಡಿಗೋ-6E 9198) ಮೂಲಕ ಇಂದು ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಇಂದು ಬೆಳಗ್ಗೆ 8.45ಕ್ಕೆ ಶ್ರೀನಗರ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿತ್ತು.

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡಿದ್ದರು.

ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು, ಬುಧವಾರ ಬೆಳಗ್ಗೆಯಿಂದ ಸಂತ್ರಸ್ತ ಕನ್ನಡಿಗರನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದರು. ಮೃತ ಕನ್ನಡಿಗರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ಒದಗಿಸಿದ್ದಾರೆ. ಕರ್ನಾಟಕಕ್ಕೆ ಮರಳುವ ಪ್ರವಾಸಿಗರಿಗೆ ವಿಶೇಷ ವಿಮಾನದ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಮಾಡಿತ್ತು.

ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಪರ್ಕ ಸಂಖ್ಯೆ ಸಂಗ್ರಹಿಸಿ ಗುರುವಾರ ಹೊರಡಲಿರುವ ವಿಮಾನಕ್ಕೆ ಸಜ್ಜಾಗಿ ಎಂದು ಸಂತೋಷ್ ಲಾಡ್ ಅವರೇ ತಿಳಿಸುತ್ತಿದ್ದಾರೆ. ಎಷ್ಟು ಪ್ರವಾಸಿಗರು ಇದ್ದೀರಿ? ಎಲ್ಲಿಯವರು ಎಂಬೆಲ್ಲ ವಿವರಗಳನ್ನು ಸಚಿವರು ಕಲೆ ಹಾಕಿ ರಾಜ್ಯಕ್ಕೆ ಮರಳಲು ಕೈ ಜೋಡಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...