2 ತಿಂಗಳ ʼಗೃಹಲಕ್ಷ್ಮಿʼ ಕಂತು ಬಾಕಿ; ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್

Date:

ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿರುವ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಕೊಡಿಸುವಂತೆ ಇಬ್ಬರು ಮಹಿಳೆಯರು ಹೈಕೋರ್ಟ್ ಮೊರೆ ಹೋಗಿದ್ದು, ಈ ಸಂಬಂಧ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

- Advertisement -

ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ ಆರ್ ‌ಗಂಗಾ ಮತ್ತು‌ ನಂದಿನಿ‌ ಲೇಔಟ್ ನಿವಾಸಿ ಜಿ ಡಿ ‌ಪವಿತ್ರಾ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಅರ್ಜಿಯಲ್ಲಿ ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

2024ರ ಏಪ್ರಿಲ್‌ರಿಂದ 2025ರ ಜನವರಿವರೆಗೆ ಹಣ ಬಿಡುಗಡೆ ಮಾಡಿದ ಸರ್ಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬದಲಿಗೆ ತಾಲೂಕು ಪಂಚಾಯಿತಿ ಮೂಲಕ‌ ಪಾವತಿ ಮಾಡಲು ನಿರ್ಧಾರ ಕೈಗೊಂಡ ಹಿನ್ನೆಲೆ 2025ರ ಫೆಬ್ರವರಿ ಹಾಗೂ ಮಾರ್ಚ್ ತಿಂಗಳ‌ ಹಣ ಪಾವತಿ ಮಾಡಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ಇದನ್ನೂ ಓದಿ: ಲಂಚಗುಳಿತನದಲ್ಲಿ ಕರ್ನಾಟಕಕ್ಕೆ 5ನೇ ಸ್ಥಾನ: ಭ್ರಷ್ಟಾಚಾರದ ವಿರುದ್ಧ ನ್ಯಾ. ವೀರಪ್ಪ ತೀವ್ರ ಕಳವಳ

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಡಾ. ಕೆ ಮನ್ಮಥ ರಾವ್‌ ಅವರ ರಜಾಕಾಲೀನ ವಿಭಾಗೀಯ ಪೀಠವು, ಯೋಜನೆಯ ಅನುಷ್ಠಾನದಲ್ಲಿ ಆಗುತ್ತಿರುವ ವಿಳಂಬದ ಕುರಿತು ವಿವರಣೆ ಕೇಳಿ ರಾಜ್ಯ ಹಣಕಾಸು ಇಲಾಖೆಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಪಂಚಾಯತ್ ರಾಜ್ ಇಲಾಖೆ,‌ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಈ ಕುರಿತು ಸರ್ಕಾರದ ನಿಲುವೇನು ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿ ಸೂಚಿಸಿ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...

ವಿಜಯಪುರ | ಮತದಾರರ ಹೆಸರಳಿಸಲು ನಕಲಿ ಮರಣ ಪ್ರಮಾಣಪತ್ರ ಬಳಕೆ; ತನಿಖೆಗೆ ಕಾಂಗ್ರೆಸ್ ಒತ್ತಾಯ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ಜೀವಂತ ಮತದಾರರನ್ನು ಮೃತಪಟ್ಟಿದ್ದಾರೆಂದು ತೋರಿಸಿ ಮತದಾರರ...