ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರ, 40ಕ್ಕೂ ಅಧಿಕ ವಿಡಿಯೋಗಳಿತ್ತು: ಸಾಕ್ಷಿ ನುಡಿದ ಕಾರು ಚಾಲಕ

Date:

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರಗಳು ಮತ್ತು 40ಕ್ಕೂ ಅಧಿಕ ವಿಡಿಯೋಗಳಿತ್ತು ಎಂದು ಈ ಹಿಂದೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ನುಡಿದಿದ್ದಾರೆ.

- Advertisement -

ಪ್ರಜ್ವಲ್ ಅನ್ನು ಕಳೆದ ವರ್ಷ ಮೇ 31ರಂದು ಬಂಧಿಸಲಾಗಿದ್ದು ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮೇ 26ರಂದು ನಡೆದ ವಿಚಾರಣೆ ವೇಳೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ಅತ್ಯಾಚಾರದ ದೂರು ಕೊಟ್ಟರೂ ಆರೋಪಿಗಳ ರಕ್ಷಣೆಗೆ ಹಾಸನ ಪೊಲೀಸರ ಯತ್ನ ಆರೋಪ: ಡಿಜಿಪಿಗೆ ದೂರು

2018ರಿಂದ ಕಾರ್ತಿಕ್ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಕಾರಿನಲ್ಲಿ ಪ್ರಜ್ವಲ್ ಮೊಬೈಲ್ ಬಿಟ್ಟು ಹೋಗಿದ್ದಾಗ ಅದನ್ನು ಪರಿಶೀಲಿಸಿರುವುದಾಗಿ ಕಾರ್ತಿಕ್ ತಿಳಿಸಿದ್ದಾರೆ. ಕಾರಿನಲ್ಲಿ ತನಗೆ ತಿಳಿಯದಂತೆ ಪ್ರಜ್ವಲ್ ಅಶ್ಲೀಲ ದೃಶ್ಯಗಳನ್ನು ನೋಡುತ್ತಿದ್ದರು. ಜಯನಗರದ ಗೆಳತಿ ಮನೆಗೆ ಹೋದಾಗ ಮೊಬೈಲ್ ಕಾರಿನಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಮೊಬೈಲ್‌ನಲ್ಲಿದ್ದ ಅಶ್ಲೀಲ ಚಿತ್ರ, ವಿಡಿಯೋಗಳನ್ನು ನೋಡಿ ತನ್ನ ಮೊಬೈಲ್‌ಗೆ ವರ್ಗಾಯಿಸಿದ್ದೆ. ಬಳಿಕ ಮಗನಿಗೆ ಬುದ್ಧಿ ಹೇಳಲಿ ಎಂಬ ಉದ್ದೇಶದಿಂದ ಪ್ರಜ್ವಲ್ ತಾಯಿ ಭವಾನಿಗೆ ಈ ಚಿತ್ರ, ವಿಡಿಯೋಗಳನ್ನು ತೋರಿಸಿದ್ದೆ ಎಂದು ಕಾರ್ತಿಕ್ ತಿಳಿಸಿದ್ದಾರೆ ಎನ್ನಲಾಗಿದೆ.

“ಈ ಬಗ್ಗೆ ಭವಾನಿ ಅವರು ಮಗನ ಜೊತೆ ಮಾತನಾಡಿದಾಗ ವಿಡಿಯೋ ಬಗ್ಗೆ ತಿಳಿಸಿದ್ದು ನಾನು ಎಂದು ಹೇಳಿದ್ದರು. ಹಾಗಾಗಿ ಪ್ರಜ್ವಲ್​​ ನನಗೆ ಫೋನ್ ಮಾಡಿ ಬೈದಿದ್ದರು. ಅಂದಿನಿಂದ ನಾನು ಕೆಲಸ ಬಿಟ್ಟೆ. ಬಳಿಕ ಪ್ರಜ್ವಲ್​ ಕುಟುಂಬ ವಿಡಿಯೋ ಬಹಿರಂಗವಾಗದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರು” ಎಂದು ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಈ ವಿಡಿಯೋಗಳು ವೈರಲ್ ಆದಾಗ ಕರ್ನಾಟಕ ಮಾತ್ರವಲ್ಲ ದೇಶದಲ್ಲೇ ಭಾರೀ ಸಂಚಲನ ಉಂಟಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...