ಬಾಪೂಜಿ ಸೇವಾ ಕೇಂದ್ರಗಳಲ್ಲಿ ಶೀಘ್ರದಲ್ಲೇ ಇನ್ನೂ 208 ಸೇವೆಗಳು ಲಭ್ಯ: ಸಚಿವ ಪ್ರಿಯಾಂಕ್ ಖರ್ಗೆ

Date:

ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ ನೀಡಲಾಗುತ್ತಿರುವ 81 ಸೇವೆಗಳ ಜೊತೆ ಇನ್ನೂ 208 ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳ ಸೇವಾಸಿಂಧು ಪೋರ್ಟಲ್ ಮೂಲಕ ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

- Advertisement -

2024-25 ನೇ ಸಾಲಿನ ಆಯವ್ಯಯದಲ್ಲಿ ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ ಎಲ್ಲಾ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರಗಳಲ್ಲೂ ಪ್ರಾರಂಭಿಸಲಾಗುವುದು ಎಂದು ಘೋಷಿಸಲಾಗಿತ್ತು, ಅದರಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು, ಗ್ರಾಮೀಣ ಭಾಗದ ನಾಗರಿಕರಿಗೆ ಅನುಕೂಲವಾಗುವಂತೆ ಮೊದಲ ಹಂತದಲ್ಲಿ 208 ಸೇವೆಗಳನ್ನು ಬಳಸುವ ಸೌಲಭ್ಯವನ್ನು ನೀಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೇವಾ ಸಿಂಧು ಪೋರ್ಟಲ್ ಮೂಲಕ ಒದಗಿಸಲಾಗುತ್ತಿರುವ 46 ವಿವಿಧ ಇಲಾಖೆಗಳ 800ಕ್ಕಿಂತಲೂ ಹೆಚ್ಚು ಸೇವೆಗಳಲ್ಲಿ ಗ್ರಾಮೀಣ ಜನತೆಗೆ ಉಪಯೋಗವಾಗುವಂತಹ ಸೇವೆಗಳನ್ನು ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ಒದಗಿಸಲಿರುವುದರಿಂದ ಗ್ರಾಮೀಣ ಜನತೆಗೆ ಒಂದೇ ಸೂರಿನಡಿ ಎಲ್ಲಾ ಇಲಾಖೆಗಳ ಸೇವೆಗಳನ್ನು ನೀಡಿದಂತಾಗುತ್ತದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಇ-ಆಡಳಿತ) ಆಧೀನದಲ್ಲಿ ಬರುವ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ಮೂಲಕ ಸೇವಾ ಸಿಂಧು ಪೋರ್ಟಲ್ ನಲ್ಲಿ 800 ಕ್ಕಿಂತ ಹೆಚ್ಚು ಸೇವೆಗಳನ್ನುಈಗ ಒದಗಿಸಲಾಗುತ್ತಿದೆ. ಗ್ರಾಮ ಪಂಚಾಯತಿಗಳ ಬಾಪೂಜಿ ಸೇವಾ ಕೇಂದ್ರಗಳ ಮೂಲಕ ವಿವಿಧ ಇಲಾಖೆಗಳ ಸುಮಾರು 300 ಸೇವೆಗಳನ್ನು ಒದಗಿಸಿದಂತಾಗುವುದು ಎಂದು ಸಚಿವರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....