ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ ₹2,249 ಕೋಟಿ ಪರಿಹಾರ ಜಮೆ: ಕೃಷ್ಣ ಬೈರೇಗೌಡ

Date:

ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

- Advertisement -

ಶುಕ್ರವಾರದ ವಿಧಾನ ಪರಿಷತ್‌ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್‌ಡಿಆರ್‌ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ 257.90 ಕೋಟಿ ರೂ. ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 245.75 ಕೋಟಿ ರೂ. ಪರಿಹಾರ ಹಣ ಸೇರಿ ಒಟ್ಟಾರೆ 498.73 ಕೋಟಿ ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

“ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, “ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ ಎಸ್‌ಡಿಆರ್‌ಎಫ್ ನಿಯಮದ ಪ್ರಕಾರ 1,218 ಕೋಟಿ ರೂ. ಹಣ ಪರಿಹಾರ ರೂಪದಲ್ಲಿ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 1,033 ಕೋಟಿ ರೂ. ಸೇರಿ ಒಟ್ಟಾರೆಯಾಗಿ 2249 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ 14.21 ಲಕ್ಷ ರೈತರಿಗೆ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ” ಎಂದರು.

“ಜಾನುವಾರಗಳ ಹಾನಿಗೆ 1.89 ಕೋಟಿ ರೂ., ಮನೆಹಾನಿಗೆ 40.86 ಕೋಟಿ ರೂ., ಅಲ್ಪ ಪ್ರಮಾಣದ ಮನೆಹಾನಿಗಳಿಗೆ 5.79 ಕೋಟಿ ರೂ., ಕಾಳಜಿ ಕೇಂದ್ರಗಳಿಗೆ 1.20 ಕೋಟಿ ರೂ. ಹಾಗೂ ಮಳೆಯಿಂದ ಉಂಟಾದ ಎಲ್ಲ ಪ್ರಾಣಹಾನಿಗಳನ್ನೂ ಸೇರಿಸಿದರೆ ಒಟ್ಟಾರೆಯಾಗಿ 2,300 ಕೋಟಿ ರೂ. ಹಣವನ್ನು ಪರಿಹಾರವಾಗಿ ನೀಡಲಾಗಿದೆ” ಎಂದು ಹೇಳಿದರು.

“ರಾಜ್ಯಾದ್ಯಂತ ಕೇವಲ ಶೇ.03 ರಷ್ಟು ರೈತರಿಗೆ ಪರಿಹಾರ ಹಣ ಪಾವತಿಯಾಗಿಲ್ಲ ಎಂಬುದು ನಿಜ. ಕೆಲವು ರೈತರ ಆಧಾರ್ ಹೆಸರು ಮತ್ತು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿನ ಹೆಸರು ತಾಳೆಯಾಗುತ್ತಿಲ್ಲ. ಮತ್ತೂ ಕೆಲವರದ್ದು ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಲ್ಲ. ಹೀಗಾಗಿ 26,394 ರೈತರಿಗೆ ಪರಿಹಾರದ ಹಣ ಪಾವತಿ ಆಗಿಲ್ಲ. ಇದಲ್ಲದೆ, ಸರ್ಕಾರದವರು ಎನ್ಪಿಸಿಐ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ 8,000 ರೈತರಿಗೆ ಹಣ ಪಾವತಿಯಾಗಿಲ್ಲ. ಈ ಎಲ್ಲಾ ಕಾರಣದಿಂದ ಒಟ್ಟಾರೆ 14,21,000 ರೈತರ ಪೈಕಿ 44,208 ರೈತರದ್ದು ಬಾಕಿ ಇದೆ. ಸರ್ಕಾರ ಈಗಾಗಲೇ ಹಣ ಪಾವತಿ ಮಾಡಿಯಾಗಿದ್ದು, ರೈತರ ಈ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದ ಕೂಡಲೇ ರೈತರ ಖಾತೆಗೆ ಹಣ ಜಮೆ ಆಗಲಿದೆ” ಎಂದು ವಿವರಿಸಿದರು.

ಕೃಷಿ ವಿಮೆ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, “ವಿಮೆ ಕೂಡ ಈ ವರ್ಷ ನಾವು ತ್ವರಿತ ಪಾವತಿ ಮಾಡುವ ಕೆಲಸ ಮಾಡಿದ್ದೇವೆ. ಕೃಷಿ ಇಲಾಖೆ ಜೊತೆ ಮಾತನಾಡಿ ಎಷ್ಟು ಶೀಘ್ರ ಸಾಧ್ಯವೋ ಅಷ್ಟು ಶೀಘ್ರ ರೈತರ ಖಾತೆಗೆ ಬೆಳೆ ವಿಮೆ ಪಾವತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯ ಸಚಿವ ಸಂಪುಟ ಸಭೆ: 12 ಮಹತ್ವದ ಯೋಜನೆಗಳಿಗೆ ಅನುಮೋದನೆ

ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಇಂದು (ಅ.29) ನಡೆದ ಕರ್ನಾಟಕ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ನಂದಿನಿ ಹಾಲಿನ ದರ ಲೀಟರ್‌ಗೆ 8 ರೂ. ಹೆಚ್ಚಳ: ನವೆಂಬರ್ 1ರಿಂದಲೇ ಜಾರಿ

ರಾಜ್ಯದ ಹಾಲು ಗ್ರಾಹಕರಿಗೆ ರಾಜ್ಯ ಸರ್ಕಾರವು ಬೆಲೆ ಏರಿಕೆಯ ಹೊರ ಹೇರಿದೆ....

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...