ಬೆಂಗಳೂರು | ಇಂದು 22ನೇ ಚಿತ್ರ ಸಂತೆ: ಕುಮಾರಕೃಪಾ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧ

Date:

Advertisements

ಕರ್ನಾಟಕ ಚಿತ್ರಕಲಾ ಪರಿಷತ್ತು ವತಿಯಿಂದ ಪ್ರತಿವರ್ಷದಂತೆ ಈ ವರ್ಷವೂ ಕೂಡ ಕುಮಾರಕೃಪ ರಸ್ತೆಯಲ್ಲಿ ಭಾನುವಾರ(ಜ.5)ದಂದು 22ನೇ ಚಿತ್ರ ಸಂತೆಯನ್ನು ಆಯೋಜಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 9ರವರೆಗೆ ಕುಮಾರಕೃಪಾ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.5ರ ಬೆಳಗ್ಗೆ 10.30ಕ್ಕೆ ಚಿತ್ರಸಂತೆಯನ್ನು ಉದ್ಘಾಟನೆ ನಡೆಸಲಿದ್ದು, ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕಲಾ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಚಿತ್ರಕಲಾ ಪರಿಷತ್‌ನ ಅಧ್ಯಕ್ಷರಾದ ಡಾ. ಜಿ. ಎಲ್. ಶಂಕರ್ ಸೇರಿದಂತೆ ಮತ್ತಿತತರು ಉಪಸ್ಥಿತರಿರಲಿದ್ದಾರೆ.

ಪ್ರವೇಶ ದ್ವಾರದಲ್ಲಿ ರಟ್ಟಿನ ಹಾಳೆ ಬಳಸಿ, ಪ್ರತಿಕೃತಿ ನಿರ್ಮಾಣ

Advertisements

ಈ ಬಾರಿಯ ಚಿತ್ರಸಂತೆಯ ಪ್ರವೇಶದ್ವಾರದಲ್ಲಿ ಚಿತ್ರಕಲಾ ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಸೇರಿಕೊಂಡು ರಟ್ಟಿನ ಹಾಳೆಗಳನ್ನು ಬಳಸಿ ಸುಮಾರು 35 ಅಡಿ ಎತ್ತರದ ಮಾನವನ ಮುಖದ ಪ್ರತಿಕೃತಿಯನ್ನು ರಚಿಸಲಾಗಿದೆ. ಕಳೆದ ಏಳು ದಿನಗಳಲ್ಲಿ ಈ ಪ್ರತಿಕೃತಿಯನ್ನು ರಚಿಸಲಾಗಿದೆ.

WhatsApp Image 2025 01 04 at 4.13.08 PM

ವಾಹನಗಳ ಸಂಚಾರ ನಿಷೇಧ

ಕುಮಾರಕೃಪಾ ರಸ್ತೆಯಲ್ಲಿ ಈ ಭಾನುವಾರ (ಜನವರಿ 5) 22ನೇ ಚಿತ್ರಸಂತೆ ನಡೆಯುವ ಕಾರಣ, ಕುಮಾರಕೃಪಾ ರಸ್ತೆಯ ವಿಂಡ್ಸ್ರ್‌ ಮ್ಯಾನರ್ ವೃತ್ತದಿಂದ ಶಿವಾನಂದ ವೃತ್ತದವರೆಗೆ (ಈಶಾನ್ಯ ದಿಕ್ಕಿನಿಂದ ನೈಋತ್ಯ ದಿಕ್ಕಿನ ಕಡೆಗೆ) ಅಂದು ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದ್ದು, ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ ಎಂದು ಬೆಂಗಳೂರು ನಗರ ಸಂಚಾರಿ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ, ಚಿತ್ರಸಂತೆಗೆ ಬರುವವರಿಗೆ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಾಧ್ಯವಾದಷ್ಟು ಎಲ್ಲರೂ ಸಾರ್ವಜನಿಕ ಸಾರಿಗೆ ಬಳಸಬೇಕು ಎಂದು ಬೆಂಗಳೂರು ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

ಪರ್ಯಾಯ ಸಂಚಾರ ಮಾರ್ಗ

ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಕುಮಾರಕೃಪಾ ರಸ್ತೆಯ ಕಡೆಗೆ ತೆರಳುವ ವಾಹನಗಳು ರೇಸ್ ವ್ಯೂ ಜಂಕ್ಷನ್‌ನಲ್ಲಿ ಬಸವೇಶ್ವರ ವೃತ್ತಕ್ಕೆ ಸಾಗಿ ಅಲ್ಲಿಂದ ಬಸವೇಶ್ವರ ವೃತ್ತದಲ್ಲಿ ಎಡಕ್ಕೆ ತಿರುವು ಪಡೆದುಕೊಳ್ಳಬೇಕು. ಹಳೇ ಹೈಗ್ರೆಂಡ್ಸ್‌ ಜಂಕ್ಷನ್ ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಸಾಗಬಹುದು.

ಟಿ.ಚೌಡಯ್ಯ ರಸ್ತೆಯಿಂದ ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು, ಹಳೇ ಹೈಗೌಂಡ್ಸ್‌ ಜಂಕ್ಷನ್‌ಗೆ ನೇರವಾಗಿ ಸಾಗಿ, ಎಲ್‌ಆರ್‌ಡಿಇ ಬಳಿ ಬಲಕ್ಕೆ ತಿರುವು ಪಡೆದು ಬಸವೇಶ್ವರ ವೃತ್ತ ದಾಟಿ ರೇಸ್ ಕೋರ್ಸ್ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.

ಟಿ.ಚೌಡಯ್ಯ ರಸ್ತೆಯಲ್ಲಿ ಹೈಗ್ರೆಂಡ್ ಜಂಕ್ಷನ್‌ನಿಂದ ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಕುಮಾರಕೃಪಾ ರಸ್ತೆಗೆ ಪ್ರವೇಶ ಪಡೆಯುವ ವಾಹನಗಳು ನೇರವಾಗಿ ಆರ್‌ಪಿ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.

ನೆಹರೂ ವೃತ್ತದಿಂದ ಸ್ಟೀಲ್ ಬ್ರಿಡ್ಜ್ ಕೆಳಭಾಗದಲ್ಲಿ ಶಿವಾನಂದ ವೃತ್ತದ ಮೂಲಕ ಟ್ರಿಲೈಟ್ ಜಂಕ್ಷನ್ ಮತ್ತು ರೇಸ್ ಕೋರ್ಸ್ ಕಡೆಗೆ ಸಾಗುವ ವಾಹನಗಳು ನೆಹರು ವೃತ್ತದಿಂದ ಸ್ಟೀಲ್ ಬ್ರಿಡ್ಜ್‌ ಮೂಲಕ ಸಾಗಿ ಟ್ರಿಲೈಟ್ ಜಂಕ್ಷನ್ ಹಾಗೂ ರೇಸ್ ಕೋರ್ಸ್‌ ರಸ್ತೆ ಕಡೆಗೆ ತೆರಳಬಹುದು.

ಮೌರ್ಯ ವೃತ್ತ ಮತ್ತು ಆನಂದರಾವ್ ವೃತ್ತದ ಕಡೆಯಿಂದ ಬರುವ ವಾಹನಗಳು ಟ್ರಿಲೈಟ್ ಜಂಕ್ಷನ್ – ಬಸವೇಶ್ವರ ವೃತ್ತ – ಹಳೇ ಹೈಗ್ರೆಂಡ್ಸ್ ಜಂಕ್ಷನ್ – ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಮುಂದಕ್ಕೆ ಸಾಗಬೇಕು.

ಇದನ್ನು ಓದಿದ್ದೀರಾ? ದಾವಣಗೆರೆ | ರಾಜ್ಯಮಟ್ಟದ ಯುವಜನೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಂದ ಬೃಹತ್ ಜಾಥಾ

ಟಿ.ಚೌಡಯ್ಯ ರಸ್ತೆಯಿಂದ ಬಂದು ವಿಂಡ್ಸರ್‌ ಮ್ಯಾನರ್‌ ವೃತ್ತದ ಮೂಲಕ ಕೆ.ಕೆ.ರಸ್ತೆ ಪ್ರವೇಶಿಸುವ ವಾಹನಗಳು ಟಿ.ಚೌಡಯ್ಯ ರಸ್ತೆ ಹಳೇ ಹೈಗೌಂಡ್‌ ಜಂಕ್ಷನ್ – ಎಲ್‌ಅರ್‌ಡಿಇ- ಬಸವೇಶ್ವರ ವೃತ್ತ ರೇಸ್ ಕೋರ್ಸ್ ರಸ್ತೆ ಮೂಲಕ ಮುಂದಕ್ಕೆ ಸಾಗಬಹುದು.

ಪಾರ್ಕಿಂಗ್ ವ್ಯವಸ್ಥೆ:

ರೈಲ್ವೆ ಪ್ಯಾರಲಲ್ ರಸ್ತೆಯಲ್ಲಿ ನಾಲ್ಕು ಚಕ್ರಗಳ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಕ್ರೆಸೆಂಟ್‌ ರಸ್ತೆಯಲ್ಲಿ, ಗುರುರಾಜ ಕಲ್ಯಾಣ ಮಂಟಪದಿಂದ ಹೋಟೆಲ್ ಜನಾರ್ದನದವರೆಗೆ ರಸ್ತೆಯ ಪಶ್ಚಿಮಕ್ಕೆ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ.

ರೇಸ್‌ಕೋರ್ಸ್ ರಸ್ತೆ, ಟ್ರಿಲೈಟ್ ಜಂಕ್ಷನ್‌ನಿಂದ ಮೌರ್ಯ ಜಂಕ್ಷನ್‌ವರೆಗೆ, ರಸ್ತೆಯ ಪೂರ್ವ ಭಾಗಕ್ಕೆ ನಾಲ್ಕು ಚಕ್ರ ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X