500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋಟಿ ರೂ. ಯೋಜನೆ; ಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಒಪ್ಪಂದ

Date:

ರಾಜ್ಯದ 500 ಕರ್ನಾಟಕ ಪಬ್ಲಿಕ್ ಶಾಲೆಗಳ (ಕೆಪಿಎಸ್) ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ಎಡಿಬಿ) ಸಹಯೋಗದೊಂದಿಗೆ ರೂಪಿಸಿರುವ ₹2,500 ಕೋಟಿ ಮೊತ್ತದ ಮಹತ್ವಾಕಾಂಕ್ಷಿ ಯೋಜನೆಗೆ ಶುಕ್ರವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಅಂಕಿತ ಹಾಕಲಾಯಿತು. 2030ರೊಳಗೆ ರಾಜ್ಯದಲ್ಲಿ ಶಿಕ್ಷಣ ಕ್ರಾಂತಿ ತರುವ ನಿಟ್ಟಿನಲ್ಲಿ ಸರ್ಕಾರ ಈ ಪ್ರಮುಖ ಹೆಜ್ಜೆ ಇಟ್ಟಿದೆ.

- Advertisement -

​ವಿಧಾನಸೌಧದಲ್ಲಿ ನಡೆದ ಈ ಮಹತ್ವದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ ಮಹೇಶ್ ಉಪಸ್ಥಿತರಿದ್ದರು. ಎಡಿಬಿ ಪರವಾಗಿ ಉಪ ಕಾರ್ಯದರ್ಶಿ ಸೌರಭ್ ಸಿಂಗ್, ಎಡಿಬಿ ರಾಷ್ಟ್ರೀಯ ನಿರ್ದೇಶಕಿ ಮಿಯೋ ಓಕಾ, ಪ್ರಧಾನ ಪೋರ್ಟ್‌ಫೋಲಿಯೊ ನಿರ್ವಹಣಾ ತಜ್ಞ ಕೈ ವೇಯ್ ಯಿಯೋ, ಪ್ರಧಾನ ಯೋಜನಾ ಅಧಿಕಾರಿ (ಶಿಕ್ಷಣ) ಪೂನಂ ಎಸ್. ಭಾಂಬ್ರಿ ಹಾಗೂ ಇತರ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

​ಯೋಜನೆಯ ಸ್ವರೂಪ ಮತ್ತು ಅನುದಾನ:

ಒಟ್ಟು ₹2,500 ಕೋಟಿ ಮೊತ್ತದ ಈ ಬೃಹತ್ ಯೋಜನೆಯಲ್ಲಿ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ₹1,750 ಕೋಟಿಗಳ ಆರ್ಥಿಕ ನೆರವು ಒದಗಿಸಲಿದ್ದು, ಉಳಿದ ₹750 ಕೋಟಿಗಳನ್ನು ರಾಜ್ಯ ಸರ್ಕಾರ ಭರಿಸಲಿದೆ. 2026ರಿಂದ 2030ರ ಅವಧಿಯಲ್ಲಿ ಈ ಯೋಜನೆ ಹಂತ ಹಂತವಾಗಿ ಅನುಷ್ಠಾನಗೊಳ್ಳಲಿದೆ. ಪ್ರತಿ ಕೆಪಿಎಸ್ ಶಾಲೆಯಲ್ಲಿ ಕನಿಷ್ಠ 1,200 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕಲ್ಪಿಸುವ ಗುರಿ ಹೊಂದಲಾಗಿದೆ. ಇದೊಂದು ಕೇವಲ ಶಾಲಾ ಕಟ್ಟಡಗಳ ಅಭಿವೃದ್ಧಿ ಯೋಜನೆಯಲ್ಲ, ಬದಲಾಗಿ ಮುಂದಿನ 50 ವರ್ಷಗಳ ಕರ್ನಾಟಕದ ಭವಿಷ್ಯವನ್ನು ನಿರ್ಮಿಸುವ ಬುನಾದಿಯಾಗಿದೆ ಎಂದು ಸರ್ಕಾರ ಬಣ್ಣಿಸಿದೆ.

​ಕೆಪಿಎಸ್ ಶಾಲೆಗಳಿಗೆ ‘ಎಂಟು ಗ್ಯಾರಂಟಿ’:

ಯೋಜನೆಯ ಭಾಗವಾಗಿ ಕೆಪಿಎಸ್ ಶಾಲೆಗಳಲ್ಲಿ ಎಲ್‌ಕೆಜಿಯಿಂದ 12ನೇ ತರಗತಿವರೆಗೆ ಒಂದೇ ಆವರಣದಲ್ಲಿ ಉಚಿತ ಹಾಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಒದಗಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ಸೌಲಭ್ಯ, ದ್ವಿಭಾಷಾ ಬೋಧನಾ ವ್ಯವಸ್ಥೆ, ಕಂಪ್ಯೂಟರ್ ಹಾಗೂ ಕೃತಕ ಬುದ್ಧಿಮತ್ತೆ (AI) ಆಧಾರಿತ ಆಧುನಿಕ ಶಿಕ್ಷಣವನ್ನು ನೀಡಲಾಗುವುದು. 6ನೇ ತರಗತಿಯಿಂದಲೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ಮತ್ತು ವೃತ್ತಿಪರ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳನ್ನು ಭವಿಷ್ಯಕ್ಕೆ ಸಜ್ಜುಗೊಳಿಸಲಾಗುತ್ತದೆ.

​ಸರ್ವಾಂಗೀಣ ವಿಕಾಸಕ್ಕೆ ಒತ್ತು:

ಪಠ್ಯದ ಜೊತೆಗೆ ಕ್ರೀಡೆ, ಸಂಗೀತ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗುತ್ತದೆ. ಶೈಕ್ಷಣಿಕ ಪ್ರಗತಿಯ ನಿರಂತರ ಮೇಲ್ವಿಚಾರಣೆಗಾಗಿ, ಪ್ರತಿ ಎರಡು ತಿಂಗಳಿಗೊಮ್ಮೆ ಪೋಷಕರ ಸಭೆ (ಪಿಟಿಎಂ) ಕಡ್ಡಾಯಗೊಳಿಸಿ ಶಾಲೆ ಮತ್ತು ಪೋಷಕರ ನಡುವಿನ ಸಂಪರ್ಕವನ್ನು ಬಲಪಡಿಸಲಾಗುತ್ತದೆ. 10 ಮತ್ತು 12ನೇ ತರಗತಿಯ ಫಲಿತಾಂಶವನ್ನು ಸುಧಾರಿಸಲು ವಿಶೇಷ ಗಮನ ಹರಿಸುವುದರ ಜೊತೆಗೆ, ಶಿಕ್ಷಕರ ಬೋಧನಾ ಸಾಮರ್ಥ್ಯ ವೃದ್ಧಿಗೂ ವಿಶೇಷ ಕಾರ್ಯಯೋಜನೆ ರೂಪಿಸಲಾಗಿದೆ.

​ಗ್ರಾಮೀಣ ಮಕ್ಕಳಿಗೆ ಜಾಗತಿಕ ವೇದಿಕೆ:

21ನೇ ಶತಮಾನದ ಅಗತ್ಯ ಕೌಶಲ್ಯಗಳನ್ನು ಶಾಲಾ ಶಿಕ್ಷಣದ ಅವಿಭಾಜ್ಯ ಅಂಗವನ್ನಾಗಿಸಿ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಶಕ್ತರನ್ನಾಗಿಸುವುದು ಈ ಯೋಜನೆಯ ಪ್ರಧಾನ ಉದ್ದೇಶವಾಗಿದೆ. ಡಿಜಿಟಲ್ ಕಲಿಕಾ ವಿಧಾನಗಳು, ಕೌಶಲ್ಯಾಭಿವೃದ್ಧಿ ಮತ್ತು ಅತ್ಯುತ್ತಮ ಶೈಕ್ಷಣಿಕ ಫಲಿತಾಂಶಗಳ ಮೇಲೆ ವಿಶೇಷ ಒತ್ತು ನೀಡುವ ಮೂಲಕ ರಾಜ್ಯದ ಶೈಕ್ಷಣಿಕ ವ್ಯವಸ್ಥೆಯ ಚಿತ್ರಣವನ್ನೇ ಬದಲಾಯಿಸುವ ವಿಶ್ವಾಸವನ್ನು ಸರ್ಕಾರ ವ್ಯಕ್ತಪಡಿಸಿದೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | SIR : ನೈಜ ಮತದಾರರನ್ನೇ ಗುರಿಯಾಗಿಸಿ ಫಾರ್ಮ್-7 ಸಲ್ಲಿಕೆ, ಎಸ್‌ಐಟಿ ತನಿಖೆಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ,...

ಮಕ್ಕಾ ಒಪ್ಪಂದದಡಿ ಸೌದಿ ಅರೇಬಿಯಾಗೆ ಸೇನಾ ಪಡೆಗಳನ್ನು ಕಳುಹಿಸಲು ಪಾಕಿಸ್ತಾನ, ಟರ್ಕಿ ಒಪ್ಪಿಗೆ

ರಿಯಾದ್‌ : ಮಕ್ಕಾ ಒಪ್ಪಂದದಡಿ ಟರ್ಕಿ, ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...

ಪಂಚಾಯತ್ ಚುನಾವಣೆಗೆ ಕರಡು ಮೀಸಲು ಸಿದ್ಧ: ಈಶ್ವರ ಖಂಡ್ರೆ

ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ...