ತಮ್ಮದೇ ಪೋಸ್ಟರ್‌ ಅಂಟಿಸಿದ್ದಕ್ಕೆ 3 ಎಫ್‌ಐಆರ್: ‘ಕಾನೂನು ಎಲ್ಲರಿಗೂ ಒಂದೇ’ ಎಂದ ಕೃಷ್ಣ ಬೈರೇಗೌಡ

Date:

ಬೆಂಗಳೂರು ನಗರದ ಸಾರ್ವಜನಿಕ ಸ್ಥಳಗಳಲ್ಲಿ ನಿಯಮ ಬಾಹಿರವಾಗಿ ಬ್ಯಾನರ್, ಫ್ಲೆಕ್ಸ್ ಹಾಗೂ ಪೋಸ್ಟರ್‌ಗಳನ್ನು ಅಳವಡಿಸುವುದರ ವಿರುದ್ಧ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತೀವ್ರ ಕಾರ್ಯಾಚರಣೆ ಮುಂದುವರಿಸಿದೆ. ಈ ನಡುವೆ ಸ್ವತಃ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ವಿರುದ್ಧವೇ 3 ಎಫ್‌ಐಆರ್‌ಗಳು ದಾಖಲಾಗಿವೆ.

- Advertisement -

ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಪೋಸ್ಟರ್‌ಗಳನ್ನು ಅಂಟಿಸಿದ್ದಕ್ಕೆ ಬಿಬಿಎಂಪಿ ಅಧಿಕಾರಿಗಳು ದೂರು ನೀಡಿದ್ದರು. ಈ ದೂರಿನನ್ವಯ ಪೊಲೀಸರು ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವೈಯಕ್ತಿಕ...

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ ಬಾರಿ ನಿರೀಕ್ಷಿತ ಮಟ್ಟದಲ್ಲಿ ಮಿಂಚದೆ ಹಿನ್ನಡೆ ಅನುಭವಿಸಿವೆ. ಕಳೆದ ಹಾಂಗ್‌ಝೌ ಏಷ್ಯನ್ ಗೇಮ್ಸ್‌ನಲ್ಲಿ ಈ ಎರಡು ವಿಭಾಗಗಳಿಂದ ಬರೋಬ್ಬರಿ 51...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಇದನ್ನೂ ಓದಿ: ಕಳಪೆ ಕಾಮಗಾರಿ ವಿರುದ್ಧ ಸಚಿವ ಕೃಷ್ಣ ಬೈರೇಗೌಡ ಕಠಿಣ ಕ್ರಮ; ಅಧಿಕಾರಿ ಅಮಾನತು

ಈ ಘಟನೆಯ ಬಗ್ಗೆ ಸಚಿವ ಕೃಷ್ಣ ಬೈರೇಗೌಡ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. “ಎಲ್ಲರಿಗೂ ಕಾನೂನು ಒಂದೇ ಆಗಿರುತ್ತದೆ. ನಾನಾಗಲಿ ಅಥವಾ ಬೇರೆ ಯಾರೇ ಆಗಲಿ ಕಾನೂನಿಗಿಂತ ಯಾರೂ ದೊಡ್ಡವರಲ್ಲ” ಎಂದು ತಿಳಿಸಿದ್ದಾರೆ.

ಹಾಗೆಯೇ, “ಅನುಮತಿ ಇಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಪೋಸ್ಟರ್ ಅಂಟಿಸುವುದು ನಿಯಯಬಾಹಿರವಾಗಿದ್ದರೆ, ಅಧಿಕಾರಿಗಳಿಗೆ ಅದರ ವಿರುದ್ಧ ಕ್ರಮಕೈಗೊಳ್ಳುವ ಹಕ್ಕಿದೆ. ಈ ವಿಷಯದಲ್ಲಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ನನ್ನ ಸಂಪೂರ್ಣ ಸಹಮತವಿದೆ” ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.

ಹೈಕೋರ್ಟ್ ಈ ಹಿಂದೆ ನಗರದ ಸೌಂದರ್ಯೀಕರಣ ಕಾಪಾಡಲು ಮತ್ತು ಸಾರ್ವಜನಿಕ ಆಸ್ತಿಪಾಸ್ತಿಗಳ ವಿರೂಪ ತಡೆಯಲು ಪೋಸ್ಟರ್ ಹಚ್ಚುವುದನ್ನು ತಡೆಯಲು ನಿರ್ದೇಶಿಸಿದೆ. ಇದರಂತೆ ಬಿಬಿಎಂಪಿ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ. ಸಚಿವರ ವಿರುದ್ಧವೇ ಎಫ್‌ಐಆರ್ ದಾಖಲಾಗಿರುವುದು ಮತ್ತು ಅದಕ್ಕೆ ಸಚಿವರು ನೀಡಿರುವ ಸಕಾರಾತ್ಮಕ ಸ್ಪಂದನೆ ಸದ್ಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...