30 ವರ್ಷಗಳ ಒಳಮೀಸಲಾತಿ ಹೋರಾಟಕ್ಕೆ ಮತ್ತೊಂದು ಸಮಿತಿ, EWS ಜಾರಿಗೆ ಬರೇ ಮೂರೇ ದಿನ: ದೇವನೂರು ಬೇಸರ

Date:

“ಹೀಗೆ ಎಷ್ಟು ದಿನ ಪ್ರಧಾನಿಯವರ ಮಾತುಗಳನ್ನು ತಿಂದು ಉಂಟು ಅನುಭವಿಸೋಣ?” ಎಂದು ದೇವನೂರರು ಪ್ರಶ್ನಿಸಿದ್ದಾರೆ

- Advertisement -

“30 ವರ್ಷಗಳ ತಳಸಮುದಾಯದ ಹೋರಾಟಕ್ಕೆ ’ವರದಿ’ಗೆ ಆಜ್ಞೆ ಮಾಡಿದ ಮೋದಿಯವರು ಇನ್ನೊಂದು ಕಡೆ, ಮೇಲ್ಜಾತಿಯವರಿಗೆ 3 ದಿನಗಳಲ್ಲೇ EWS ಮೀಸಲಾತಿ ನೀಡಿಬಿಟ್ಟರು. ಇದು ಮೋದಿಯವರ ಮನಸ್ಸಿನ ಮರ್ಮ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಎಸ್‌ಕೆಎಂ ಜೆಸಿಟಿಯು ಜಂಟಿಯಾಗಿ ಕರೆ ನೀಡಿರುವ ‘ರಾಜಭವನ್ ಚಲೋ- ಜನವಿರೋಧಿ ಮತ್ತು ಕಾರ್ಪೊರೇಟ್‌ ನೀತಿಗಳ ವಿರುದ್ಧ ದುಡಿಯುವ ಜನರ ಮಹಾಧರಣಿ’ಯ ಆನ್‌ಲೈನ್ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿಯವರು ಹೈದರಾಬಾದ್‌ಗೆ ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಮಾದಿಗ ದಂಡೋರ ನಾಯಕ ಕೃಷ್ಣ ಮಾದಿಗ ಅವರು ಆಯೋಜಿಸಿದ್ದ ಬೃಹತ್‌ ಸಭೆಗೆ ಪ್ರಧಾನಿಯೂ ಬಂದರು. ಕೃಷ್ಣ ಮಾದಿಗ ಅವರು ಕಳೆದ 30 ವರ್ಷಗಳಿಂದ ಹೋರಾಡುತ್ತಿರುವ ಒಳಮೀಸಲಾತಿ ವೇದನೆಗೆ ಕಣ್ಣೀರಿಟ್ಟರು. ಮೋದಿಯವರು ಕೃಷ್ಣ ಅವರನ್ನು ಆಲಂಗಿಸಿ, ಸಂತೈಸಿ ಒಳಮೀಸಲಾತಿಗೆ ’ವರದಿ’ ತಯಾರಿಸುವಂತೆ ’ಆದೇಶ’ ನೀಡಿ ನಿರ್ಗಮಿಸಿದರು. ಇದು ಅವರ ಮನ್‌ ಕಿ ಬಾತ್‌. ಹೀಗೆ 30 ವರ್ಷಗಳ ತಳಸಮುದಾಯದ ಹೋರಾಟಕ್ಕೆ ’ವರದಿ’ಗೆ ಆಜ್ಞೆ ಮಾಡಿದ ಮೋದಿಯವರು ಇನ್ನೊಂದು ಕಡೆ, ಮೇಲ್ಜಾತಿಯವರಿಗೆ 3 ದಿನಗಳಲ್ಲೇ EWS ಮೀಸಲಾತಿ ನೀಡಿಬಿಟ್ಟರು. ಇದು ಮೋದಿಯವರ ಮನಸ್ಸಿನ ಮರ್ಮ” ಎಂದು ಟೀಕಿಸಿದ್ದಾರೆ.

ದೇವನೂರ ಮಹಾದೇವ ಅವರ ಭಾಷಣದ ಪೂರ್ಣ ಪಠ್ಯ:

ಸ್ನೇಹಿತರೇ,

ರೈತ, ದಲಿತ, ಕಾರ್ಮಿಕ, ವಿದ್ಯಾರ್ಥಿ- ಯುವಜನ, ಮಹಿಳಾ ಸಂಘಟನೆಗಳ/ಸಮನ್ವಯ ಸಮಿತಿಯಾದ ’ಸಂಯುಕ್ತ ಹೋರಾಟ- ಕರ್ನಾಟಕ’ವು ರಾಷ್ಟ್ರಮಟ್ಟದ ಕಿಸಾನ್ ಮೋರ್ಚಾ, ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆಗೆ ಓಗೊಟ್ಟು ’72 ಗಂಟೆಗಳ ಮಹಾಧರಣಿ’ಯಲ್ಲಿ ಜೊತೆಗೂಡುತ್ತಿದೆ. ಹೋರಾಟ ಎಲ್ಲಾ ಸಂಘಟನೆಗಳು ವಿಶಾಲವಾಗುತ್ತ ಹೀಗೆ ಜೊತೆಗೂಡುವುದೇ ಭಾರತದ ಉಳಿವಿಗೆ ಇರುವ ಏಕೈಕ ಮಾರ್ಗ ಅನಿಸುತ್ತಿದೆ.

ನಾನೀಗ ರೈತ, ದಲಿತ, ಕಾರ್ಮಿಕ, ಮಹಿಳಾ, ವಿದ್ಯಾರ್ಥಿ- ಯುವಜನರ ಬವಣೆಗಳ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಈ ಸಂಘಟನೆಗಳ ನಾಯಕರುಗಳಿಗೆ ಕಾರ್ಯಕರ್ತರಿಗೆ ಹಾಗೂ ಎಲ್ಲಕ್ಕಿಂತ ಮಿಗಿಲಾಗಿ ಈ ಸಂಘಟನೆಗಳು ಪ್ರತಿನಿಧಿಸುವ ಜನಸ್ತೋಮಕ್ಕೆ ನನಗಿಂತಲೂ ನಿಕಟವಾಗಿ ಅವರಿಗೆ ತಾವು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಅದಕ್ಕೆ ಪರಿಹಾರಗಳು ಚೆನ್ನಾಗಿ ಗೊತ್ತು. ಯಾಕೆಂದರೆ ಅವರು ಅದರಲ್ಲೇ ಬೆಂದು ನೊಂದು ದಿನನಿತ್ಯ ಬೇಯುತ್ತಿದ್ದಾರೆ.

ಈಗ ನನ್ನ ಚಿಂತೆ ಅಥವಾ ಚಿಂತನೆ ಏನಪ್ಪ ಅಂದರೆ ಇಂದು ಭಾರತದ ಕೇಂದ್ರ ಸರ್ಕಾರವು ಧರ್ಮ- ಧರ್ಮಗಳ ನಡುವೆ, ಬಡವ- ಬಲ್ಲಿದರ ನಡುವೆ, ಜಾತಿ- ಜಾತಿಗಳ ನಡುವೆ ಕಂದಕ ತೋಡುತ್ತಿದೆ. ಇದು ಭಾರತವನ್ನು ಎಲ್ಲಿಗೆ ಕರೆದೊಯ್ಯುತ್ತದೆ? ಅರ್ಥ ಮಾಡಿಕೊಳ್ಳಲು ಒದ್ದಾಡುತ್ತಿರುವೆ.

ಹೌದು, ಇಂದು ಚಾತುರ್ವರ್ಣ ಹಿಂದುತ್ವವು, ’ವಿಶಾಲ ಹಿಂದೂ ಸಮುದಾಯ’, ಇತರ ಧರ್ಮಗಳು, ಪಂಥಗಳು ನಂಬಿಕೆಗಳ ಮೇಲೆ ಯುದ್ಧ ಸಾರಿದೆ.  10% ಇರುವ ಮೇಲ್ಜಾತಿ, ಮೇಲ್ವರ್ಗವ ರಕ್ಷಿಸುತ್ತ ಉಳಿದ 90% ಜನಸ್ತೋಮವನ್ನು ತುಳಿಯುತ್ತಿದೆ. ಬಡವರ ಹೊಟ್ಟೆಗೆ ಹೊಡೆದು ಉಳ್ಳವರ ಬಾಯಿಗೆ ಹಾಕುತ್ತಿದೆ. ಈ ರೀತಿ ರಾಜ್ಯಭಾರ ನಡೆಯುತ್ತಿರುವುದರಿಂದಲೇ, ಕೃಷಿ, ಕಾರ್ಮಿಕ, ಅರಣ್ಯ, ಶಿಕ್ಷಣ ಕಾಯ್ದೆಗಳನ್ನು ವಿಕಾರವಾಗಿ ತಿರುಚಿಬಿಟ್ಟಿತು. ಸಾರ್ವಜನಿಕ ಸಂಪತ್ತನ್ನು ಕಾರ್ಪೋರೇಟ್ ಬಾಯಿಗೆ ಹಾಕುತ್ತಿದೆ. ಸ್ವಾಯತ್ತ ಸಂಸ್ಥೆಗಳನ್ನು ಅರೆಜೀವ ಮಾಡಿ ಬಿಸಾಕಿದೆ.

ಇದೆಲ್ಲದರ ಫಲವಾಗಿ ಕೃಷಿಕರು ಇದ್ದಬದ್ಧ ಭೂಮಿಯನ್ನು ಕಳೆದುಕೊಂಡು ಹೊಟ್ಟೆಯಾಪ್ತಿಗೆ ನಗರಗಳ ಬೀದಿಗೆ ಬೀಳುತ್ತಿದ್ದಾರೆ. ಮಾನವ ಸಂಪತ್ತಾಗಬೇಕಿದ್ದ ಯುವಜನತೆಯು ನಿರುದ್ಯೋಗದಿಂದ ಬಳಲುತ್ತ Waste Bodyಗಳಾಗುತ್ತಿದ್ದಾರೆ. ಕಾರ್ಮಿಕರ ರಕ್ಷಣೆಗಿದ್ದ ಕಾನೂನುಗಳೂ ಕಣ್ಮರೆಯಾಗುತ್ತಿವೆ. ಇನ್ನು ದಲಿತರು ಆದಿವಾಸಿಗಳು ಮಹಿಳೆಯರು ಹೊಸ ಹೊಸ ಶೋಷಣೆಯ ಸವಾಲುಗಳನ್ನು ಎದುರಿಸಬೇಕಾಗಿ ಬರುತ್ತಿದೆ.

ಇಲ್ಲಿಗೆ ತಂದಿದ್ದಾರೆ- ಮನ್ ಕಿ ಬಾತ್‌ನ ನಮ್ಮ ಪ್ರಧಾನಿಗಳು. ಇವರು ತಮ್ಮ ಪರಮಾಪ್ತ ಅದಾನಿ, ಅಂಬಾನಿ ಮುಂತಾದ ಶತಕೋಟಿ ಮೇಲೆ ಕುಳಿತಿರುವ ಕುಟುಂಬಗಳಿಗೆ ಎಷ್ಟೆಷ್ಟು ಲಕ್ಷ ಲಕ್ಷ ಕೋಟಿ Write off ಎಂದರೆ ಹೆಚ್ಚು ಕಮ್ಮಿ ಸಾಲ ಮನ್ನ ತೆರಿಗೆ ಮತ್ತಿತರ ರಿಯಾಯಿತಿಗಳನ್ನು ನೀಡಿದರು ಎಂಬುದನ್ನು ಒಂದು ಸಲ ನೋಡಿ ಸಾಕು. ಮೋದಿಯವರ ಮನಸ್ಸು ಏನು ಎಂದು ಅರ್ಥವಾಗುತ್ತದೆ.

ಇನ್ನೊಂದು ಕಡೆ- ಪ್ರಧಾನಿ ನರೇಂದ್ರ ಮೋದಿಯವರು ಹೈದರಾಬಾದ್‌ಗೆ ಭೇಟಿ ಕೊಟ್ಟಿದ್ದ ಸಂದರ್ಭದಲ್ಲಿ ಮಾದಿಗ ದಂಡೋರ ನಾಯಕ ಕೃಷ್ಣ ಮಾದಿಗ ಅವರು ಆಯೋಜಿಸಿದ್ದ ಬೃಹತ್‌ ಸಭೆಗೆ ಪ್ರಧಾನಿಯೂ ಬಂದರು. ಕೃಷ್ಣ ಮಾದಿಗ ಅವರು ಕಳೆದ 30 ವರ್ಷಗಳಿಂದ ಹೋರಾಡುತ್ತಿರುವ ಒಳಮೀಸಲಾತಿ ವೇದನೆಗೆ ಕಣ್ಣೀರಿಟ್ಟರು. ಮೋದಿಯವರು ಕೃಷ್ಣ ಅವರನ್ನು ಆಲಂಗಿಸಿ, ಸಂತೈಸಿ ಒಳಮೀಸಲಾತಿಗೆ ’ವರದಿ’ ತಯಾರಿಸುವಂತೆ ’ಆದೇಶ’ ನೀಡಿ ನಿರ್ಗಮಿಸಿದರು. ಇದು ಅವರ ಮನ್‌ ಕಿ ಬಾತ್‌. ಹೀಗೆ 30 ವರ್ಷಗಳ ತಳಸಮುದಾಯದ ಹೋರಾಟಕ್ಕೆ ’ವರದಿ’ಗೆ ಆಜ್ಞೆ ಮಾಡಿದ ಮೋದಿಯವರು ಇನ್ನೊಂದು ಕಡೆ, ಮೇಲ್ಜಾತಿಯವರಿಗೆ 3 ದಿನಗಳಲ್ಲೇ EWS ಮೀಸಲಾತಿ ನೀಡಿಬಿಟ್ಟರು. ಇದು ಮೋದಿಯವರ ಮನಸ್ಸಿನ ಮರ್ಮ.

ಹೀಗಿದೆ ನಮ್ಮ ಪ್ರಧಾನಿಗಳ ನಡೆ ಮತ್ತು ನುಡಿ. ಎಲ್ಲವೂ ಹೀಗೆ ಹೀಗೆ. ಒಳಗೊಂದು ಹೊರಗೊಂದು. ಹೀಗೆ ಎಷ್ಟು ದಿನ ಪ್ರಧಾನಿಯವರ ಮಾತುಗಳನ್ನು ತಿಂದು ಉಂಟು ಅನುಭವಿಸೋಣ? ಇವರದು ಮುನ್ನಡೆಯ ನುಡಿಗಳು; ಆದರೆ ಹಿನ್ನಡೆಯ ನಡೆಗಳು. ಇನ್ನೂ ಬೇಕೆ? ಈಗಾಗಲೇ ಅತಿಗೆ ಹೋಗಿದೆ, ಸಾಕು ಅನಿಸುತ್ತಿದೆ. ಸಂಘ ಪರಿವಾರದ ಹಿಂದುತ್ವದ ಬಿಜೆಪಿ ಆಳ್ವಿಕೆಯನ್ನು ಕೊನೆಗಾಣಿಸಬೇಕಿದೆ. ಈಗ 2024ರ ಚುನಾವಣೆ ನಮ್ಮ ಮುಂದಿದೆ. ಈಗಲಿಂದಲೇ ಜನಾಂದೋಲನಗಳು ಅರಳಿಮರದ ಕೆಳಗೆ, ಛಾವಡಿಯಲ್ಲಿ ಮಾತುಕತೆ ಆರಂಭಿಸಬೇಕಾಗಿದೆ. ಉಳಿಯಬೇಕು ಅಂದರೆ ಹಿಂದುತ್ವದ ಬಿಜೆಪಿ ಸೋಲಲೇಬೇಕಾಗಿದೆ.

ಕೊನೆಯದಾಗಿ, ನಮ್ಮ ರಾಜ್ಯದಲ್ಲಿ ಆಳ್ವಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರವು ತನ್ನ ಹಿಂದಿನ ಬಿಜೆಪಿ ಸರ್ಕಾರದ ಜನವಿರೋಧಿ ಕೃಷಿ ಕಾಯ್ದೆ ಮುಂತಾದವುಗಳನ್ನು ಮುಂದುವರಿಸಿಕೊಂಡು ಹೋಗುತ್ತಿರುವುದಂತು ನನಗೆ ಅರ್ಥವಾಗುತ್ತಿಲ್ಲ. ರಾಜ್ಯ ಸರ್ಕಾರ ಈ ಕಡೆ ಕಣ್ಣೆತ್ತಿ ನೋಡಬೇಕು. ಇಲ್ಲದಿದ್ದರೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಈಗ ಬಿಜೆಪಿಗೆ ಹೇಳುತ್ತಿರುವ ಮಾತನ್ನೇ ಕಾಂಗ್ರೆಸ್ ಸರ್ಕಾರಕ್ಕೆ ಹೇಳಬೇಕಾಗಿ ಬರುತ್ತದೆ.

ಹಾಗೇ ಹೋರಾಟದ ಗೆಳೆಯರಿಗೆ ಒಂದು ಕಿವಿಮಾತು- ಭಾರತದ ಸುಪ್ತ ಮನಸ್ಸಲ್ಲಿ ನೆಲೆಸಿರುವ ಗಾಂಧಿ, ಅಂಬೇಡ್ಕರರನ್ನು ಮತ್ತು ಸಂವಿಧಾನವನ್ನು ಚಾತುರ್ವರ್ಣ ಹಿಂದುತ್ವದ ನೂರೆಂಟು ಸಂಘಟನೆಗಳು ಹಾಗೂ ಬಿಜೆಪಿ ಸರ್ಕಾರ ದಿನನಿತ್ಯ ಕತ್ತರಿಸುತ್ತ ನಿರ್ನಾಮ ಮಾಡಲು ಸತತವಾಗಿ ಪ್ರಯತ್ನಿಸುತ್ತಿದ್ದವು. ಆದರೂ CAA ಅಂದರೆ ಪೌರತ್ವ ಕಾಯ್ದೆ ಬದಲಾವಣೆ ಸಂದರ್ಭದಲ್ಲಿ ಸರ್ಕಾರದ ವಿರುದ್ಧ ಭುಗಿಲೆದ್ದ ಹೋರಾಟಗಳಲ್ಲಿ ಈ ಗಾಂಧಿ ಅಂಬೇಡ್ಕರ್‌ ಸಂವಿಧಾನ ಈ ಮೂವರು ಜೀವಂತವಾಗಿರುವಂತೆ ಎಲ್ಲಾ ಪ್ರತಿಭಟನಾ ಸಭೆಗಳಲ್ಲೂ ಪ್ರತ್ಯಕ್ಷರಾದರು. ಕತ್ತರಿಸಿದರೂ ಮತ್ತಷ್ಟು ಚಿಗುರುವ ಬೃಹತ್ ವೃಕ್ಷಗಳಂತೆ! ಈ ಸೋಜಿಗವು ಚಾತುರ್ವರ್ಣದ ಹಿಂದುತ್ವದ ನೂರಾರು ಸಂಘಟನೆಗಳು ಮತ್ತು ಸರ್ಕಾರವನ್ನು ಬೆಚ್ಚುವಂತೆ ಮಾಡಿತು. ಭಾರತದ ಎಲ್ಲಾ ಜನಾಂದೋಲನಗಳು ಈ ಮೂರು ಶಕ್ತಿಗಳನ್ನು ಗಮನಿಸಿ ಮುನ್ನಡೆಯಬೇಕು ಅನಿಸುತ್ತಿದೆ.

  • ದೇವನೂರ ಮಹಾದೇವ, ಹಿರಿಯ ಸಾಹಿತಿ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಸಿಜೆಪಿಯ ಶಾಂತಿಯುತ ಪ್ರತಿಭಟನೆ ಹತೋಟಿಗೆ ಕೇಂದ್ರದ ಸರ್ವಾಧಿಕಾರ ಧೋರಣೆ: ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಆಕ್ರೋಶ

ಶಾಂತಿಯುತವಾಗಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಹತೋಟಿಗೆ ತರಲು ಮತ್ತು ಜನರ ಧ್ವನಿಯನ್ನು ಅಡಗಿಸಲು...

ಉಜಿರೆಯಲ್ಲಿ ಸೌಜನ್ಯ ನ್ಯಾಯ ಯಾತ್ರೆ: ನೈಜ ಅಪರಾಧಿಗಳ ಬಂಧನಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನೈಜ ಆರೋಪಿಗಳನ್ನು...

ಸಿಜೆಪಿ ಪ್ರತಿಭಟನೆ ವೇಳೆ ವಕೀಲರ ಬಂಧನ: ಮಧ್ಯಪ್ರವೇಶಿಸಿ ಬಿಡುಗಡೆಗೆ ಸೂಚಿಸಿದ ಸುಪ್ರೀಂ ಕೋರ್ಟ್

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ನ್ಯಾಯಮೂರ್ತಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ...