KPCC ಹುದ್ದೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ: ಕೆಪಿಸಿಸಿ ಅಧ್ಯಕ್ಷ ಹರಿಪ್ರಸಾದ್

Date:

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಭಾನುವಾರ ಅಧಿಕಾರ ವಹಿಸಿಕೊಂಡ ಬಿ ಕೆ ಹರಿಪ್ರಸಾದ್, KPCC ಹುದ್ದೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ನೀಡಲಾಗುವುದು ಎಂದು ಘೋಷಿಸಿದ್ದಾರೆ.

- Advertisement -

ಭಾನುವಾರ ಬಿ.ಕೆ. ಹರಿಪ್ರಸಾದ್ ಅವರು ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಪದಗ್ರಹಣ ಸಮಾರಂಭದಲ್ಲಿ ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ತತ್ವಗಳಿಗೆ ಬದ್ಧರಾಗಿರುವುದಾಗಿ ಹರಿಪ್ರಸಾದ್ ಪ್ರತಿಜ್ಞೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದನ್ನೂ ಓದಿ: ಮಹಿಳಾ ಮೀಸಲಾತಿ | ಧ್ವನಿ ಕಳೆದುಕೊಂಡ ರಾಜ್ಯ ಕಾಂಗ್ರೆಸ್‌ ಮಹಿಳಾ ಘಟಕ!

“ಜನಸಂಖ್ಯೆಯ ಅರ್ಧದಷ್ಟಿರುವ ಮಹಿಳೆಯರಿಗೆ ಸಮಾನ ರಾಜಕೀಯ ಪ್ರಾತಿನಿಧ್ಯ ನೀಡದಿದ್ದರೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಸಾಂಸ್ಥಿಕ ಹುದ್ದೆಗಳಲ್ಲಿ ಶೇ. 33ರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು” ಎಂದು ಘೋಷಿಸಿದರು.

ಹಾಗೆಯೇ ಈ ಸಂದರ್ಭದಲ್ಲೇ ಕಳೆದ ಎರಡೂವರೆ ವರ್ಷಗಳಿಂದ ಮಂಡಳಿಗಳು ಮತ್ತು ನಿಗಮಗಳಲ್ಲಿ ಅಧಿಕಾರ ಹೊಂದಿರುವವರನ್ನು ಬದಲಿಸಿ, ತಮ್ಮ ಸರದಿಗಾಗಿ ಕಾಯುತ್ತಿರುವ ಪಕ್ಷದ ಕಾರ್ಯಕರ್ತರನ್ನು ನೇಮಿಸಬೇಕೆಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಒತ್ತಾಯಿಸಿದರು.

“ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನನಗೆ ಸೇವೆ ಸಲ್ಲಿಸಲು ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ಗೆ ತಮ್ಮ ಜೀವನವನ್ನು ಮುಡಿಪಾಗಿಟ್ಟು, ಪಕ್ಷದ ತತ್ವಗಳನ್ನು ತಮ್ಮ ರಕ್ತದಲ್ಲಿ ಅಳವಡಿಸಿಕೊಂಡ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಿದ್ದಾರೆ. ಅದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ನಾನು ಧನ್ಯವಾದ ಹೇಳುತ್ತೇನೆ” ಎಂದು ತಿಳಿಸಿದರು.

“ನಮ್ಮ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಮತ್ತು ಕಾರ್ಯಕರ್ತರ ಬೆಂಬಲದೊಂದಿಗೆ ನಾನು ಕಾಂಗ್ರೆಸ್ ಅನ್ನು ಸೈದ್ಧಾಂತಿಕವಾಗಿ ಬಲಪಡಿಸುತ್ತೇನೆ. ಈ ಜವಾಬ್ದಾರಿ ನನಗೆ ಅಧಿಕಾರವಲ್ಲ, ಆದರೆ ಪಕ್ಷ ಮತ್ತು ಜನರಿಗೆ ಸೇವೆ ಸಲ್ಲಿಸಲು ಒಂದು ಪವಿತ್ರ ಅವಕಾಶ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಾರಂ-7 ದುರುಪಯೋಗ, ಮತಗಳ್ಳತನದ ವಿರುದ್ಧ ಪೊಲೀಸ್ ತನಿಖೆ: ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...

ಶ್ವೇತಭವನ ಗೆಲ್ಲಲು 2028ರ ತನಕ ಕಾಯಬೇಕು ಡೆಮಾಕ್ರಟ್ಸ್!

ನವೆಂಬರ್ 3ರ ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ ಡೆಮಾಕ್ರಟರು ಭರ್ಜರಿ ಗೆಲುವು ಸಾಧಿಸಿದ್ದಾರೆ....

3 ತಿಂಗಳ ಬಳಿಕ ಐಟಿ ವಿಭಾಗದ ಮೇಲುಸ್ತುವಾರಿ ಹಿಂಪಡೆದ ಚು. ಆಯೋಗ!

ಕೇಂದ್ರ ಚುನಾವಣಾ ಆಯೋಗದಲ್ಲಿ (ECI) ಕಾರ್ಯ ಹಂಚಿಕೆ ಆದೇಶಕ್ಕೆ ಸಂಬಂಧಿಸಿದಂತೆ ಮುಖ್ಯ...

‘ಚಾಯ್ ಪೇ ಚರ್ಚಾ’ – ಕಾಂಗ್ರೆಸ್‌ನ ಹಿರಿಯ ನಾಯಕರಿಗೆ ರಾಹುಲ್ ಗಾಂಧಿ ಆಹ್ವಾನ

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕಾಂಗ್ರೆಸ್‌ನ ಪ್ರಮುಖ ಹಿರಿಯ...