39 ಮಸೂದೆ ಅಂಗೀಕಾರ, 32 ಮಸೂದೆಗಳಿಗೆ ರಾಜ್ಯಪಾಲರಿಂದ ಅಂಕಿತ: ಸಚಿವ ಹೆಚ್‌ ಕೆ ಪಾಟೀಲ್

Date:

ಆಗಸ್ಟ್‌ ತಿಂಗಳಲ್ಲಿ ಎರಡು ವಾರಗಳ ಕಾಲ ನಡೆದ ವಿಧಾನಸಭೆಯ ಮುಂಗಾರು ಅಧಿವೇಶನದಲ್ಲಿ ಪ್ರತಿಪಕ್ಷಗಳ ವಿರೋಧದ ನಡವೆಯೂ ಒಟ್ಟು 39 ಮಸೂದೆಗಳನ್ನು ಅಂಗೀಕರಿಸಲಾಗಿದ್ದು, 32 ಮಸೂದೆಗಳಿಗೆ ರಾಜ್ಯಪಾಲರು ಅಂಕಿತ
ನೀಡಿದ್ದಾರೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗ ಸಚಿವ ಹೆಚ್‌ ಕೆ ಪಾಟೀಲ್ ತಿಳಿಸಿದ್ದಾರೆ.

- Advertisement -

ಈ ಕುರಿತು ‌ಹೆಚ್‌ ಕೆ ಪಾಟೀಲ್ ಅವರು ಹೊರಡಿಸಿರುವ ಪತ್ರಿಕಾ ಪ್ರಕಟಣೆಯನ್ನು ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಒಟ್ಟು 39 ಮಸೂದೆಗಳನ್ನು ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾಗಿದೆ. 39 ಮಸೂದೆಗಳಲ್ಲಿ 2 ಮಸೂದೆಗಳನ್ನು ಜಂಟಿ ಆಯ್ಕೆ ಸಮಿತಿಯ ಪರಿಶೀಲನೆಗೆ ಒಪ್ಪಿಸಲಾಗಿದೆ. ವಿಧಾನಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲಾದ 37 ಮಸೂದೆಗಳಲ್ಲಿ, 32 ಮಸೂದೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಅಂಕಿತ ಹಾಕಿದ್ದಾರೆ. ಅವುಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ ಎಂದು ತಿಳಿಸಲಾಗಿದೆ.

3 ಮಸೂದೆಗಳನ್ನು ಕೇಂದ್ರ ಸರ್ಕಾರದ ಕಾನೂನುಗಳಿಗೆ ತಿದ್ದುಪಡಿಯಾಗಿರುವುದರಿಂದ ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ರಾಜ್ಯಪಾಲರು ಭಾರತದ ರಾಷ್ಟ್ರಪತಿಗಳ ಅಂಕಿತಕ್ಕಾಗಿ ಸಲ್ಲಿಸಿದ್ದಾರೆ. 1 ಮಸೂದೆ ರಾಜ್ಯಪಾಲರ ಬಳಿ ಬಾಕಿ ಇದೆ ಮತ್ತು 1 ಮಸೂದೆಯನ್ನು ರಾಜ್ಯಪಾಲರಿಗೆ ಸಲ್ಲಿಸಲಾಗುತ್ತಿದೆ. ಒಂದೇ ದಿನದಲ್ಲಿ 15 ಮಸೂದೆಗಳನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಿಸಿರುವುದು ದಾಖಲೆಯಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕನ್ನಡಿಗರಿಗೆ ಉದ್ಯೋಗ ತಾರತಮ್ಯ: ಖಾಸಗಿ ಸಂಸ್ಥೆಗಳಿಗೆ ಸಿಎಂ ಎಚ್ಚರಿಕೆ, ಕನ್ನಡಪರ ಸಂಘಟನೆಗಳಿಗೆ ಶಾಂತಿ ಕಾಪಾಡಲು ಮನವಿ

ಐಟಿ-ಬಿಟಿ ಕಂಪನಿಗಳಲ್ಲಿ ನೇಮಕಾತಿ ವೇಳೆ ಸ್ಥಳೀಯ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ತಾರತಮ್ಯ ಮಾಡಲಾಗುತ್ತಿದೆ...

ಖಾಲಿ ಜೇಬಿನ ಸರ್ಕಾರ, ಪಟ್ಟು ಬಿಡದ ಕಬ್ಬು ಬೆಳೆಗಾರರು; ಹೋರಾಟದ ನಡುವೆ ಒಣಗುತ್ತಿದೆ ಕಬ್ಬು

ಚೂನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ...

ಬೆಂಗಳೂರಿನ ಪಂಚತಾರಾ ಹೋಟೆಲ್ ಈಜುಕೊಳದಲ್ಲಿ ವಿದ್ಯುತ್ ಸ್ಪರ್ಶ: ಇಬ್ಬರು ವಿದೇಶಿ ಪ್ರಜೆಗಳ ಸಾವು

ಬೆಂಗಳೂರಿನ ಹಲಸೂರಿನಲ್ಲಿರುವ ಪಂಚತಾರಾ ಹೋಟೆಲ್‌ನ ಈಜುಕೊಳದಲ್ಲಿ ಶುಕ್ರವಾರ ಸಂಜೆ ಈಜುತ್ತಿದ್ದ ವೇಳೆ...

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ

ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ...