ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 100 ನೂತನ ಕರ್ನಾಟಕ ಸಾರಿಗೆ, 40 ಹವಾ ನಿಯಂತ್ರಣ ರಹಿತ ಸ್ಲೀಪರ್ (ಪಲ್ಲಕ್ಕಿ) ಬಸ್ಸುಗಳು ಹಾಗೂ ಪಾಯಿಂಟ್ ಟು ಪಾಯಿಂಟ್ (Point to Point) ಕಾರ್ಯಾಚರಣೆಗೆ ನೂತನ ಮಾದರಿಯ ಮೇಲ್ದರ್ಜೆಗೇರಿಸಿದ ಕರ್ನಾಟಕ ಸಾರಿಗೆ ಬಸ್ಸುಗಳಿಗೆ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.
ಈ ನೂತನ ಬಸ್ ಗಳು ಅ. 7ರಿಂದ ಕಾರ್ಯಾಚರಿಸಲಿವೆ ಎಂದು ಸಾರಿಗೆ ನಿಗಮ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಮುನಿಯಪ್ಪ, ಅರಣ್ಯ ಸಚಿವ ಈಶ್ವರ್ ಖಂಡ್ರೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರ ಗೋವಿಂದರಾಜು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಪಲ್ಲಕ್ಕಿ ಬಸ್ ವಿಶೇಷತೆಗಳು
- 11.3 ಮೀಟರ್ ಉದ್ದದ ನಾನ್ ಎಸಿ ಬಸ್
- ಬಿಎಸ್-6 ತಂತ್ರಜ್ಞಾನದ ಮಾದರಿಯ ಹೆಚ್.ಪಿ. ಇಂಜಿನ್
- ಹೈಟೆಕ್ ವಿನ್ಯಾಸದ 30 ಸ್ಲೀಪರ್ ಬರ್ತ್ ಸೀಟ್ಗಳು
- ಪ್ರತಿ ಸೀಟಿಗೆ ಮೊಬೈಲ್ ಹಾಗೂ ಲ್ಯಾಪ್ ಟಾಪ್ಗಳ ಚಾರ್ಜಿಂಗ್ ಹಾಗೂ ಮೊಬೈಲ್ ಸ್ಟ್ಯಾಂಡ್ ವ್ಯವಸ್ಥೆ
- ಸೀಟ್ ನಂಬರ್ ಮೇಲೆ ಎಲ್ಇಡಿ ಅಳವಡಿಕೆ
- ಓದಲು ಉತ್ತಮ ಬೆಳಕಿನ ಎಲ್ಇಡಿ ಲೈಟ್ ಅಳವಡಿಕೆ
- ಬಸ್ನಲ್ಲಿ ಅಡಿಯೋ ಸ್ವೀಕರ್ಗಳ ಮೂಲಕ ಜನರಿಗೆ ಮಾಹಿತಿ ನೀಡುವ ವ್ಯವಸ್ಥೆ
- ಡಿಜಿಟಲ್ ಗಡಿಯಾರ, ಹಾಗೆ ಎಲ್ಇಡಿ ಫ್ಲೋರ್
- ಪ್ರತಿ ಪ್ರಯಾಣಿಕರಿಗೆ ಚಪ್ಪಳಿ ಇಡಲು ಸ್ಥಳಾವಕಾಶದ ವ್ಯವಸ್ಥೆ
- ಪ್ರಯಾಣಿಕರಿಗೆ ತಲೆದಿಂಬಿನ ವ್ಯವಸ್ಥೆ
- ಚಾಲಕರಿಗೆ ಸಹಾಯವಾಗಲೂ ಬಸ್ ಹಿಂಭಾಗದಲ್ಲಿ ಹೈಟೆಕ್ ಕ್ಯಾಮರಾ ಅಳವಡಿಕೆ
- 40 ಬಸ್‌ಗಳ ಪೈಕಿ 30 ಬಸ್‌ಗಳು ರಾಜ್ಯದೊಳಗೆ ಸಂಚರಿಸಲಿವೆ
- ಉಳಿದ 10 ಬಸ್‌ಗಳು ಬೆಂಗಳೂರಿನಿಂದ ಹೊರರಾಜ್ಯಗಳಿಗೆ ಸಂಚರಿಸಲಿವೆ.
- ಈ ಬಸ್ ಸೇವೆಯು ಇಂದಿನಿಂದಲೇ ಆರಂಭವಾಗಲಿದೆ
- ಕೆಎಸ್‌ಆರ್‌ಟಿಸಿಯಲ್ಲಿ ನಾನ್ ಎಸಿ ಸ್ಲೀಪರ್ ಬಸ್‌ಗಳು ಆರಂಭವಾಗಿ ಸಾಕಷ್ಟು ವರ್ಷಗಳಾಗಿವೆ
- ನಾನ್ ಎಸಿ ಸ್ಲೀಪರ್ ಬಸ್‌ಗಳಿಗೆ ಯಾವುದೇ ಹೆಸರಿಟ್ಟು ಬ್ರ್ಯಾಂಡಿಂಗ್ ಮಾಡಿರಲಿಲ್ಲ
- ಸದ್ಯ ಪಲ್ಲಕ್ಕಿ (‘ಸಂತೋಷವು ಪ್ರಯಾಣಿಸುತ್ತಿದೆ’ ಎಂಬ ಉಪಶೀರ್ಷಿಕೆ) ಎಂಬ ಬ್ರ್ಯಾಂಡ್ ನೇಮ್ ಇಡಲಾಗಿದೆ.
- ಈ ಹೆಸರನ್ನು ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚಿಸಿದ್ದಾರೆ