4,860 ಕೋಟಿ ರೂ. ಬೆಳೆ ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಾಯ: ಸಿಎಂ ಸಿದ್ದರಾಮಯ್ಯ

Date:

  • ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ
  • 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಣೆ

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ವಾಸ್ತವಿಕವಾಗಿ ಸುಮಾರು 30 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ. ಎನ್‌ಡಿಆರ್‍ಎಫ್ ಮಾರ್ಗಸೂಚಿಯಂತೆ 4,860 ಕೋಟಿ ರೂ. ಪರಿಹಾರವನ್ನು ಕೋರಲಾಗಿದ್ದು, ಈ ಮೊತ್ತವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರವನ್ನು ಒತ್ತಾಯಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಚಿತ್ರದುರ್ಗದ ಮುರುಘಾಮಠದ ಆವರಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಕೇಂದ್ರದ ಅಧ್ಯಯನ ತಂಡಕ್ಕೆ ರಾಜ್ಯದಲ್ಲಿ ತಲೆದೋರಿರುವ ಬರಪರಿಸ್ಥಿತಿಯ ವಸ್ತುಸ್ಥಿತಿಯನ್ನು ಈಗಾಗಲೇ ವಿವರಿಸಲಾಗಿದೆ. ಒಟ್ಟು 236 ತಾಲ್ಲೂಕುಗಳಲ್ಲಿ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಸುಮಾರು 30 ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಬೆಳೆಹಾನಿ ಸಂಭವಿಸಿದೆ. 42 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ಶೇ. 52 ರಷ್ಟು ಬೆಳೆಹಾನಿಯಾಗಿದೆ. ಕೃಷ್ಣಾ ಮೇಲ್ದಂಡೆ ಹಾಗೂ ನಾರಾಯಣಪುರ ಜಲಾಶಯಗಳನ್ನು ಹೊರತುಪಡಿಸಿ, ಕಾವೇರಿ ಸೇರಿದಂತೆ ಇನ್ನುಳಿದ ಜಲಾನಯನ ಪ್ರದೇಶದಗಳಲ್ಲಿ ನೀರಿರುವುದಿಲ್ಲ. ಕೇಂದ್ರದ ಮಾರ್ಗಸೂಚಿಯಂತೆ 4,860 ಕೋಟಿ ರೂ.ಗಳ ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ” ಎಂದು ಹೇಳಿದರು.

“ಈ ಬಾರಿ ಹಸಿರು ಬರ ಉಂಟಾಗಿದೆ. ಕೇಂದ್ರದ ಅಧ್ಯಯನ ತಂಡ ಮೂರು ತಂಡಗಳಲ್ಲಿ ರಾಜ್ಯದ 11 ಜಿಲ್ಲೆಗಳಿಗೆ ಭೇಟಿ ನೀಡುತ್ತಿದೆ. ಅವರು ಕೇಂದ್ರಕ್ಕೆ ವರದಿ ಸಲ್ಲಿಸಿದ ನಂತರ, ವರದಿ ಆಧರಿಸಿದಂತೆ ಕೇಂದ್ರ ಪರಿಹಾರ ನೀಡಲಿದೆ” ಎಂದು ತಿಳಿಸಿದರು.

ಭದ್ರಾ ಮೇಲ್ದಂಡೆ ಯೋಜನೆಗೆ ಪ್ರಾಧಾನ್ಯತೆ 

“ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನದಲ್ಲಿನ ವಿಳಂಬವಾಗುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಹಿಂದಿನ ಸರ್ಕಾರದವರು ಈ ಯೋಜನೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ಯೋಜನೆಯೆಂದು ಘೋಷಿಸಿ, 5,300 ಕೋಟಿ ರೂ. ಬಿಡುಗಡೆ ಮಾಡಲಿದೆ ಎಂದಿದ್ದರು. ಆದರೆ ಇದುವರೆಗೆ ಕೇಂದ್ರದಿಂದ ಯಾವುದೇ ಹಣ ಬಿಡುಗಡೆಯಾಗಿಲ್ಲ. ಈ ಮೊತ್ತವನ್ನು ಆದಷ್ಟು ಬೇಗನೆ ಬಿಡುಗಡೆಗೊಳಿಸುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಕೋರಲಾಗಿದೆ” ಎಂದು ಹೇಳಿದರು.

“ನಮ್ಮ ಸರ್ಕಾರವು ನೀರಾವರಿ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತದೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ ವಿಶೇಷ ಪ್ರಾಧಾನ್ಯತೆ ನೀಡಲಾಗುವುದು. ಪ್ರಸಕ್ತ ವರ್ಷ ಹಾಗೂ ಮುಂದಿನ ವರ್ಷವೂ ಕೂಡ ಈ ಯೋಜನೆಗೆ ಅನುದಾನ ಬಿಡುಗಡೆ ಮಾಡಲಾಗುವುದು” ಎಂದರು.

7ನೇ ವೇತನ ಆಯೋಗದ ಅಧ್ಯಕ್ಷರೊಂದಿಗೆ ಮಾತನಾಡಿದ್ದು, ವರದಿ ಸಲ್ಲಿಕೆಯಾದ ನಂತರ ತೀರ್ಮಾನ ಕೈಗೊಳ್ಳಲಾಗುವುದು. ನಿಗಮ ಮಂಡಳಿಗಳ ಅಧ್ಯಕ್ಷರನ್ನು ನೇಮಕ ಮಾಡಲಾಗುತ್ತಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಹವಾಮಾನ ವರದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ

ಬಂಗಾಳಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ...