49 ಅರಣ್ಯ ಅಧಿಕಾರಿ, ಸಿಬ್ಬಂದಿಗೆ ಮಂಗಳವಾರ ಮುಖ್ಯಮಂತ್ರಿ ಪದಕ ಪ್ರದಾನ: ಸಚಿವ ಈಶ್ವರ ಖಂಡ್ರೆ

Date:

Advertisements

ಅರಣ್ಯ ಇಲಾಖೆಗೆ ಹೊಸದಾಗಿ ಆಯ್ಕೆಯಾಗಿರುವ 267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಾಗೂ ಗಣನೀಯ ಸೇವೆ ಸಲ್ಲಿಸಿದ 49 ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕವನ್ನು ಮಂಗಳವಾರ (ಸೆ.3) ಸಿಎಂ ಸಿದ್ದರಾಮಯ್ಯ ವಿತರಿಸಿಲಿದ್ದಾರೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. 2023-24ನೇ ಸಾಲಿನಲ್ಲಿ 310 ಅರಣ್ಯ ವೀಕ್ಷಕರ ಹುದ್ದೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿತ್ತು. ಒಟ್ಟು 1,94,007 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಈ ಪೈಕಿ ಎಸ್.ಎಸ್.ಎಲ್.ಸಿ. ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಗಳಿಸಿದ ಅತಿ ಹೆಚ್ಚು ಅಂಕ ಮತ್ತು ದೈಹಿಕ ಸಾಮರ್ಥ್ಯ ಪರೀಕ್ಷೆ ಮೂಲಕ ಪಾರದರ್ಶಕವಾಗಿ 267 ಅರ್ಹ ಅಭ್ಯರ್ಥಿಗಳು ಎಲ್ಲ ವೃತ್ತದಿಂದ ಆಯ್ಕೆಯಾಗಿದ್ದಾರೆ” ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು ಮತ್ತು ಚಿಕ್ಕಮಗಳೂರು ವೃತ್ತದಲ್ಲಿ ಸ್ಥಳೀಯ ಮೂಲ ಆದಿವಾಸಿ ಜನಾಂಗದ ಅಭ್ಯರ್ಥಿಗಳಿಗೆ ಮೀಸಲಾತಿ ಇದ್ದು, ಈ ಸಮುದಾಯದ ಅಭ್ಯರ್ಥಿಗಳು ಅರ್ಜಿ ಸಲ್ಲಿಸದ ಕಾರಣ ಮತ್ತು ಇನ್ನಿತರ ತಾಂತ್ರಿಕ ಕಾರಣಗಳಿಂದ 43 ಹುದ್ದೆಗಳಿಗೆ ಸದ್ಯಕ್ಕೆ ನೇಮಕಾತಿ ಪತ್ರ ನೀಡಲಾಗುತ್ತಿಲ್ಲ ಎಂದು ಸಷ್ಟಪಡಿಸಿದ್ದಾರೆ.

Advertisements

2022-23ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ

ಅರಣ್ಯ ಸಂರಕ್ಷಣೆ, ವನ್ಯಜೀವಿ ಸಂರಕ್ಷಣೆ, ಅರಣ್ಯ ಕೃಷಿ, ಅರಣ್ಯ ನಿರ್ವಹಣೆ, ತರಬೇತಿ, ಸಂಶೋಧನೆ, ಕಾರ್ಯಯೋಜನೆ, ಜನರ ಪಾಲ್ಗೊಳ್ಳುವಿಕೆ, ಅಭಿವೃದ್ಧಿ ಕಾರ್ಯ, ಮಾನವ- ಪ್ರಾಣಿ ಸಂಘರ್ಷ ನಿಯಂತ್ರಣ, ನಾವೀನ್ಯಪೂರ್ಣ ಉಪಕ್ರಮ ಅಳವಡಿಕೆ ಇತ್ಯಾದಿ ಕ್ಷೇತ್ರದಲ್ಲಿ ಗಣನೀಯ ಸೇವೆ ಮಾಡಿದ 25 ಅರಣ್ಯ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಪ್ರತಿವರ್ಷ ಗುರುತಿಸಿ 2017ರಿಂದ ಮುಖ್ಯಮಂತ್ರಿಗಳ ಪದಕ ನೀಡಲಾಗುತ್ತಿದೆ.

2022 ಮತ್ತು 2023ನೇ ಸಾಲಿನಲ್ಲಿ ಒಟ್ಟು 49 ಅಧಿಕಾರಿ, ಸಿಬ್ಬಂದಿಗೆ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X