₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

Date:

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ, ಸರ್ಕಾರಿ ಶಾಲೆಗಳ ಅಭಿವೃದ್ಧಿ, ಕೃತಕ ಬುದ್ಧಿಮತ್ತೆ (AI) ಶಿಕ್ಷಣ ಹಾಗೂ ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಯೋಜನೆಗಳಿಗೆ ವೇಗದ ನೀಡಲು ಸಿಎಂ ಡಿಕೆಶಿ ಸೂಚಿಸಿದ್ದಾರೆ. ಜತೆಗೆ ₹50 ಸಾವಿರ ಕೋಟಿ ಹೂಡಿಕೆ ಮಾಡಿ, ಸುಮಾರು 1 ಲಕ್ಷ ಉದ್ಯೋಗ ಸೃಷ್ಟಿಸುವ ಪ್ರಕ್ರಿಯೆಗೂ ವೇಗ ನೀಡಲು ಸರ್ಕಾರ ಮುಂದಾಗಿದೆ.

- Advertisement -

ಕೃಷಿ, ಶಿಕ್ಷಣ, ಪಶುಸಂಗೋಪನೆ, ಎಂಎಸ್‌ಎಂಇ, ಜವಳಿ, ಕೈಗಾರಿಕೆ, ಅರಣ್ಯ ಹಾಗೂ ಪರಿಸರ ಕ್ಷೇತ್ರಗಳ ಹಲವು ಯೋಜನೆಗಳ ಅನುಷ್ಠಾನದ ಕುರಿತು ನಡೆದ ʼಮುಖ್ಯಮಂತ್ರಿ ಅವರ 100 ದಿನಗಳ ಕಾರ್ಯ, ನೇಮಕಾತಿ ಹಾಗೂ ಆದ್ಯತೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆʼಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಮುಖ್ಯಮಂತ್ರಿ ರೈತ ಚೈತನ್ಯ ಅಗ್ರಿಟೆಕ್ ಮಿಷನ್ ಯೋಜನೆಯಡಿ ಈಗಾಗಲೇ ರೈತರಿಗೆ 25 ಲಕ್ಷ SMS ಕಳುಹಿಸಲಾಗಿದೆ. ರೈತರಿಗೆ ಸುಲಭವಾಗಿ ಅರ್ಥವಾಗುವಂತೆ ವಿಡಿಯೋ ಸಂದೇಶಗಳ ಮೂಲಕವೂ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಚಾಟ್‌ಬಾಟ್ ಸಂಯೋಜನೆ ಪ್ರಗತಿಯಲ್ಲಿದ್ದು, ಡ್ರೋನ್ ಹಾಗೂ ಉಪಗ್ರಹ ಆಧಾರಿತ ಬೆಳೆ ಅಂದಾಜು ಮತ್ತು ಡಿಜಿಟಲ್ ಬೆಳೆ ಸಮೀಕ್ಷೆಗೆ ಟೆಂಡರ್ ಕರೆಯಲು ಸಿದ್ಧತೆ ನಡೆಯುತ್ತಿದೆ. ಕೃಷಿ ಯಾಂತ್ರೀಕರಣ ಉತ್ತೇಜಿಸಲು ಮುಖ್ಯಮಂತ್ರಿ ನೇಗಿಲ ಯೋಗಿ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಇದಕ್ಕಾಗಿ JFarm ಆ್ಯಪ್ ಸಿದ್ಧವಾಗಿದೆ. ಈಗಾಗಲೇ 2.5 ಲಕ್ಷ ಮಂದಿ ಸೇವೆ ಪಡೆಯಲು ನೋಂದಾಯಿಸಿಕೊಂಡಿದ್ದು, ನವೆಂಬರ್ 1ರಿಂದ ಸೇವೆ ಆರಂಭಿಸುವಂತೆ ಸೂಚಿಸಲಾಗಿದೆ. ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ರಫ್ತು ಉತ್ತೇಜಿಸಲು 2027ರ ಮಾರ್ಚ್ ಅಂತ್ಯದೊಳಗೆ 2,000 ರೈತರಿಗೆ ರಫ್ತುದಾರರಾಗಲು ಅಗತ್ಯ ತರಬೇತಿ ಹಾಗೂ ಪ್ರಮಾಣೀಕರಣದ ಮಾರ್ಗದರ್ಶನ ನೀಡುವ ಗುರಿ ಹೊಂದಲಾಗಿದೆ. ಸಮೂಹ ಕೃಷಿ, ವೈಜ್ಞಾನಿಕ ಸಂಸ್ಕರಣೆ ಮತ್ತು ಸಂಗ್ರಹಣೆಗೆ ರೈತರನ್ನು ಪ್ರೋತ್ಸಾಹಿಸುವಂತೆ ಸೂಚಿಸಲಾಗಿದ್ದು, ಪುಷ್ಪೋದ್ಯಮಕ್ಕೆ ಉತ್ತೇಜನ ನೀಡಲು ಮಾರುಕಟ್ಟೆಗಾಗಿ ಕನಿಷ್ಠ 5 ಎಕರೆ ಜಾಗ ಗುರುತಿಸಲು ಸೂಚಿಸಲಾಗಿದೆ.

ನಗರ ಪ್ರದೇಶದ 941 ಶಾಲೆಗಳ 9ನೇ ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಗತಿಪರ ರೈತರ ಹೊಲಗಳಿಗೆ ಭೇಟಿ ನೀಡುವ ಕಾರ್ಯಕ್ರಮ ರೂಪಿಸಲಾಗಿದೆ. ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶದಲ್ಲಿ ರಾತ್ರಿ ವಾಸ್ತವ್ಯ ಹೂಡಲು ಸಮುದಾಯ ಭವನ ಹಾಗೂ ಹಾಸ್ಟೆಲ್‌ಗಳಲ್ಲಿ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಖಾಸಗಿ ಶಾಲೆಗಳೂ ಈ ಕಾರ್ಯಕ್ರಮ ಕಡ್ಡಾಯವಾಗಿ ಅನುಷ್ಠಾನಗೊಳಿಸುವಂತೆ ಸೂಚಿಸಲಾಗಿದ್ದು, ಡಿಸೆಂಬರ್‌ ಒಳಗೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.

ರಾಜ್ಯದಲ್ಲಿ 1,000 ಕೆಪಿಎಸ್ ಶಾಲೆಗಳ ಅಭಿವೃದ್ಧಿ ಯೋಜನೆಗೂ ವೇಗ ನೀಡಲಾಗಿದೆ. ಶಾಲೆಗಳ ಡಿಪಿಆರ್‌ ಅನುಮೋದನೆ ಹಾಗೂ ಟೆಂಡರ್‌ ಕರೆಯುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡುವ ಮೂಲಕ ಪ್ರಕ್ರಿಯೆ ಸರಳಗೊಳಿಸಲಾಗಿದೆ. ನವೆಂಬರ್ 14ರೊಳಗೆ ಶಂಕುಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ. CSR ಅಡಿ 100 KPS ಶಾಲೆಗಳ ಅಭಿವೃದ್ಧಿ ಕೈಗೊಳ್ಳಲು ಉದ್ದೇಶಿಸಲಾಗಿದ್ದು, 60 ಶಾಲೆಗಳ ಅಭಿವೃದ್ಧಿಗೆ ಕಂಪನಿಗಳು ಆಸಕ್ತಿ ತೋರಿಸಿವೆ.

ಸರ್ಕಾರಿ ಶಾಲೆಗಳ 9ನೇ ತರಗತಿಯಲ್ಲಿ AI ತರಬೇತಿ ಈಗಾಗಲೇ ಆರಂಭಿಸಲಾಗಿದ್ದು, 6ನೇ ತರಗತಿಯಿಂದಲೇ AI ಶಿಕ್ಷಣ ಆರಂಭಿಸುವ ಕುರಿತು ಮಾಹಿತಿ ತಂತ್ರಜ್ಞಾನ ಇಲಾಖೆಯ ಬೆಂಬಲದೊಂದಿಗೆ ಖಾಸಗಿ ನೆರವು ಪಡೆಯಲು ಸೂಚಿಸಲಾಗಿದೆ. ಗೂಗಲ್‌ ಸಂಸ್ಥೆಯೂ ಶಾಲೆಗಳಲ್ಲಿ AI ತರಬೇತಿ ನೀಡಲು ಆಸಕ್ತಿ ತೋರಿಸಿದ್ದು, ತೆಲಂಗಾಣದಲ್ಲಿ ಸಂಸ್ಥೆ ಕೈಗೊಂಡಿರುವ ಮಾದರಿಯನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ. AI ವಿಶ್ವವಿದ್ಯಾಲಯ ಸ್ಥಾಪನೆಗೆ ಜಾಗ ಗುರುತಿಸುವಂತೆ ಸೂಚಿಸಲಾಗಿದ್ದು, 956 ಶಿಕ್ಷಕರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ.

ಪ್ರೊಟೀನ್ ಮಿಷನ್ ಅಡಿಯಲ್ಲಿ ಚಾಮರಾಜನಗರ, ಚಿತ್ರದುರ್ಗ, ಹಾವೇರಿ ಹಾಗೂ ಕೊಪ್ಪಳದಲ್ಲಿ ನಾಲ್ಕು ಪ್ರೊಟೀನ್ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಜಾನುವಾರು ಮತ್ತು ಕುಕ್ಕುಟ ಉತ್ಪಾದನೆ ಹೆಚ್ಚಿಸುವ ಗುರಿ ಹೊಂದಲಾಗಿದ್ದು, ಮೊಟ್ಟೆ ಉತ್ಪಾದನೆಯನ್ನು 1,058 ಕೋಟಿ ರೂ.ನಿಂದ 1,137 ಕೋಟಿ ರೂ.ಗೆ ಹೆಚ್ಚಿಸುವ ಗುರಿ ನಿಗದಿಪಡಿಸಲಾಗಿದೆ. ವಿದ್ಯುತ್ ಸಮಸ್ಯೆ ನಿವಾರಣೆಗೆ ಸೋಲಾರ್ ಅಳವಡಿಕೆಗೆ ಶೇ.50ರಷ್ಟು ಸಬ್ಸಿಡಿ ನೀಡುವ ಪ್ರಸ್ತಾವನೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲು ಉದ್ದೇಶಿಸಲಾಗಿದೆ.

ಎಂಎಸ್‌ಎಂಇ ಕ್ಷೇತ್ರದ ಉದ್ಯೋಗ ನಿಧಿ ಯೋಜನೆಯಡಿ ಅತ್ಯಂತ ಹಿಂದುಳಿದ 11 ಜಿಲ್ಲೆಗಳಲ್ಲಿ ಹೊಸ ಕಾರ್ಮಿಕರ ನೇಮಕಕ್ಕೆ ಉದ್ಯೋಗದಾತರಿಗೆ ಪ್ರತಿ ಕಾರ್ಮಿಕನಿಗೆ ತಿಂಗಳಿಗೆ 2,500 ರೂ.ನಂತೆ ಎರಡು ವರ್ಷಗಳ ಕಾಲ ಪ್ರೋತ್ಸಾಹಧನ ನೀಡಲಾಗುವುದು. ಜವಳಿ ನೀತಿಯಡಿ 20 ಸಾವಿರ ಕೋಟಿ ರೂ. ಹೂಡಿಕೆ ಹಾಗೂ 5 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ. ರೇಷ್ಮೆಯನ್ನು ಜವಳಿ ನೀತಿಯ ವ್ಯಾಪ್ತಿಗೆ ತರಲಾಗಿದ್ದು, ಕಲಬುರಗಿ PM ಮಿತ್ರ ಜವಳಿ ಪಾರ್ಕ್ ಉದ್ಘಾಟನೆಗೆ ದಿನಾಂಕ ನಿಗದಿಪಡಿಸಲು ಸೂಚಿಸಲಾಗಿದೆ. 2,821 ಕೋಟಿ ರೂ. ಮೊತ್ತದ 15 ಯೋಜನಾ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ.

ವಾಣಿಜ್ಯ ಮತ್ತು ಕೈಗಾರಿಕಾ ಕ್ಷೇತ್ರದಲ್ಲಿ 100 ದಿನಗಳಲ್ಲಿ 25 ಸಾವಿರ ಕೋಟಿ ರೂ. ಹೂಡಿಕೆಯ ಗುರಿ ಹೊಂದಲಾಗಿತ್ತು. ಈಗಾಗಲೇ 43,214 ಕೋಟಿ ರೂ. ಮೌಲ್ಯದ 150 ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. 2027ರ ಮಾರ್ಚ್‌ವರೆಗೆ 50 ಸಾವಿರ ಕೋಟಿ ರೂ. ಹೂಡಿಕೆ ಹಾಗೂ 200 ಕೈಗಾರಿಕೆಗಳ ಮೂಲಕ 1 ಲಕ್ಷ ಉದ್ಯೋಗ ಸೃಷ್ಟಿಯ ಗುರಿ ಹೊಂದಲಾಗಿದೆ.

ಹಿಂದುಳಿದ ಪ್ರದೇಶಗಳಲ್ಲಿ ಕೈಗಾರಿಕೆಗಳಿಗೆ ಉತ್ತೇಜನ ನೀಡಲು ವರ್ಷಕ್ಕೆ 200 ಕೋಟಿ ರೂ. ಸಹಾಯಧನದ ಪ್ಯಾಕೇಜ್‌ಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಇದರ ಮೂಲಕ ಸುಮಾರು 1,000 ಕೋಟಿ ರೂ. ಹೂಡಿಕೆ ಹಾಗೂ 50 ಸಾವಿರ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದೆ. ಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿಗೂ ಅನುಮೋದನೆ ನೀಡಲಾಗಿದ್ದು, ಶೀಘ್ರ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು.

ಕೆಲಸದ ಸ್ಥಳದ ಸಮೀಪವೇ ಕಾರ್ಮಿಕರಿಗೆ ವಸತಿ ಒದಗಿಸುವ ಕಂಪನಿಗಳಿಗೆ ರಿಯಾಯಿತಿ ದರದಲ್ಲಿ ಜಮೀನು ಹಾಗೂ ಬಂಡವಾಳ ಸಹಾಯಧನ ನೀಡುವ ಶ್ರಮಿಕ ನಿವಾಸ ನೀತಿ ಜಾರಿಗೊಳಿಸಲಾಗಿದೆ. ಘಟಕ ವೆಚ್ಚದ ಶೇ.20ರಷ್ಟು, ಪ್ರತಿ ಘಟಕಕ್ಕೆ ಗರಿಷ್ಠ 1 ಲಕ್ಷ ರೂ. ಸಹಾಯಧನ ನೀಡಲು ಅವಕಾಶ ಕಲ್ಪಿಸಲಾಗಿದೆ.

ದೊಡ್ಡಬಳ್ಳಾಪುರದಲ್ಲಿ 4,513 ಎಕರೆ ಪ್ರದೇಶದಲ್ಲಿ ಸುಧಾರಿತ ಉತ್ಪಾದನಾ ಕ್ಲಸ್ಟರ್ ಸ್ಥಾಪನೆಗೆ ಅಧಿಸೂಚನೆ ಹೊರಡಿಸಲಾಗಿದ್ದು, 2,479 ಎಕರೆ ಹಂಚಿಕೆಗೆ ಲಭ್ಯವಿದೆ. ಬಳ್ಳಾರಿ ಜೀನ್ಸ್ ಪಾರ್ಕ್‌ಗೆ ಚಾಲನೆ ನೀಡಲಾಗಿದ್ದು, ನಿವೇಶನ ಹಂಚಿಕೆ ಮಾಡಲಾಗಿದೆ. 50 ಕೋಟಿ ರೂ. ವೆಚ್ಚದಲ್ಲಿ ಸಾಮಾನ್ಯ ತ್ಯಾಜ್ಯ ಸಂಸ್ಕರಣಾ ಘಟಕ (CETP) ಸ್ಥಾಪನೆಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ.

ರಾಜ್ಯದ 228 KIADB ಕೈಗಾರಿಕಾ ಪ್ರದೇಶಗಳನ್ನು ಒಳಗೊಂಡ GIS ಆಧಾರಿತ ಡಿಜಿಟಲ್ ಕೈಗಾರಿಕಾ ಭೂ ಬ್ಯಾಂಕ್ ಪೋರ್ಟಲ್ ಸಿದ್ಧವಾಗಿದೆ. ಪೋರ್ಟಲ್‌ ಅನ್ನು ನಾಗರಿಕ ಸ್ನೇಹಿಯಾಗಿಸುವಂತೆ ಸೂಚಿಸಲಾಗಿದೆ. ದ್ವೀಪ ಪ್ರವಾಸೋದ್ಯಮ ಯೋಜನೆಗೂ ಸಚಿವ ಸಂಪುಟ ಅನುಮೋದನೆ ದೊರೆತಿದ್ದು, ಶೀಘ್ರ ಟೆಂಡರ್ ಕರೆಯಲು ಸೂಚಿಸಲಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಅರಣ್ಯ ಇಲಾಖೆಯ ‘ತೇಗದ ಸಿರಿ’ ಯೋಜನೆಗೆ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ರಸ್ತೆ ಬದಿಗಳಲ್ಲಿ 10 ಕೋಟಿ ತೇಗ ಹಾಗೂ ಇತರ ಬೆಲೆಬಾಳುವ ಜಾತಿಯ ಸಸಿಗಳನ್ನು ನೆಡುವ ಗುರಿ ಹೊಂದಲಾಗಿದೆ. ರಸ್ತೆ ಬದಿಗೆ ಹೊಂದಿಕೊಂಡಿರುವ ಜಮೀನಿನ ರೈತರು ಸಸಿಗಳ ಪೋಷಣೆ ಮಾಡಲಿದ್ದು, ಮರಗಳ ಕಟಾವಿನ ಆದಾಯದಲ್ಲಿ ರೈತರಿಗೆ ಶೇ.70ರಷ್ಟು ಪಾಲು ನೀಡಲಾಗುವುದು.

ಯೋಜನೆ ಅನುಷ್ಠಾನಕ್ಕಾಗಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಸಸಿ ನೆಡುವ ಸ್ಥಳ ಹಾಗೂ ರೈತರನ್ನು ಗುರುತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಮುಂದಿನ ಮುಂಗಾರಿಗೆ ಸಸಿ ನೆಡುವ ಎಲ್ಲ ಸಿದ್ಧತೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ಯೋಜನೆಯಲ್ಲಿ ಭಾಗಿಯಾಗುವ ರೈತರಿಗೆ ಪ್ರಮಾಣಪತ್ರ ನೀಡುವುದು ಹಾಗೂ ಸಸಿ ನೆಡುವ ಪ್ರಕ್ರಿಯೆಯನ್ನು ಛಾಯಾಚಿತ್ರಗಳ ಮೂಲಕ ದಾಖಲಿಸುವಂತೆಯೂ ಸೂಚಿಸಲಾಗಿದೆ.

ಹೆಚ್ಚಿನ ಸಾಮರ್ಥ್ಯದ ಡೀಸೆಲ್ ಜನರೇಟರ್‌ಗಳಿಗೆ ಹೊರಸೂಸುವಿಕೆ ನಿಯಂತ್ರಣ ಸಾಧನ (ರೆಟ್ರೋ-ಫಿಟ್ಟಿಂಗ್) ಅಳವಡಿಸುವ ಕುರಿತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸುತ್ತೋಲೆ ಹೊರಡಿಸಿದೆ. ಹೆಚ್ಚಿನ ಸಾಮರ್ಥ್ಯದ ಎಲ್ಲ ಡೀಸೆಲ್ ಜನರೇಟರ್‌ಗಳನ್ನು 2027ರ ಮಾರ್ಚ್‌ ಒಳಗಾಗಿ ಇದರ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ನಿಯಮದ ಕುರಿತು ಸಂಬಂಧಿತ ಸಂಸ್ಥೆಗಳು ಹಾಗೂ ಸಾರ್ವಜನಿಕರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಮುಖ್ಯಮಂತ್ರಿ ನಿರ್ದೇಶನ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಹಾವು ಕಡಿತದಿಂದ ರೈತ ಅಸ್ವಸ್ಥ: ಆಸ್ಪತ್ರೆಗೆ ಸಾಗಿಸಲು ʻ108ʼ ಸಿಬ್ಬಂದಿ ನಕಾರ

ಶಿವಮೊಗ್ಗ ಜಿಲ್ಲೆಯ ನಗರ ಸಮೀಪದ ಕರಿಮನೆಯ ಕಾಡಿಗೆರೆ ಗ್ರಾಮದ ರೈತ ಜಮೀನಿನಲ್ಲಿ...

ಯುಪಿ ರಾಜ್ಯಸಭೆ ಚುನಾವಣೆ | ಬಿಜೆಪಿಯ 8 ಅಭ್ಯರ್ಥಿಗಳ ಪಟ್ಟಿ ಪ್ರಕಟ; ಕೇಂದ್ರ ಸಚಿವ ಹರ್ದೀಪ್‌ ಪುರಿ ಔಟ್‌

ಮುಂದಿನ ಅಕ್ಟೋಬರ್ 16ರಂದು ನಡೆಯಲಿರುವ ಉತ್ತರ ಪ್ರದೇಶ ರಾಜ್ಯಸಭಾ ಚುನಾವಣೆಗೆ ಬಿಜೆಪಿ...

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಶಿವಮೊಗ್ಗ | ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಸೈಕಲ್ ಜಾಥಾ

ಶಿವಮೊಗ್ಗ ವನ್ಯಜೀವಿ ವಿಭಾಗದ ವತಿಯಿಂದ 72ನೇ ವನ್ಯಜೀವಿ ಸಪ್ತಾಹ-2026ರ ಅಂಗವಾಗಿ ಅಕ್ಟೋಬರ್...