ಕೊಪ್ಪಳ | ‘ಜೈ ಶ್ರೀರಾಮ್’ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧನ ಗಡ್ಡಕ್ಕೆ ಬೆಂಕಿ ಇಟ್ಟ ಕಿಡಿಗೇಡಿಗಳು

Date:

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ ಅಂಧ ಮುಸ್ಲಿಂ ವೃದ್ಧರೊಬ್ಬರ ಮೇಲೆ ನ. 25ರಂದು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

‘ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಕೊಲೆ ಬೆದರಿಕೆ ಒಡ್ಡಿದ್ದಾರೆ. ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಮೆಹಬೂಬ್‌ ನಗರದ ಅಂಧ ವ್ಯಕ್ತಿಯಾಗಿರುವ ಹುಸೇನ್ ಸಾಬ್(65) ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯ ಸಂಬಂಧ ಪೊಲೀಸರು ಅಪರಿಚಿತರ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.

ಕೆಲಸದ ನಿಮಿತ್ತ ಹೊಸಪೇಟೆಗೆ ಹೋಗಿ ನ. 25ರಂದು ಮಧ್ಯರಾತ್ರಿ ಗಂಗಾವತಿಗೆ ಬಂದು ಮನೆಗೆ ಹೋಗಲು ಆಟೊ ನಿಲ್ದಾಣದ ಬಳಿ ಕಾಯುತ್ತಿದ್ದೆ. ಆಗ ಬೈಕ್ ಮೇಲೆ ಬಂದ ಕೆಲವು ಯುವಕರು ಎಲ್ಲಿಗೆ ಹೋಗುತ್ತಿದ್ದಿಯಾ? ಎಂದು ಪ್ರಶ್ನಿಸಿದರು. ಬಲವಂತವಾಗಿ ಬೈಕ್‌ ಮೇಲೆ ಕೂರಿಸಿಕೊಂಡು ಪಂಪಾನಗರ ಬಳಿ ಕರೆದುಕೊಂಡು ಹೋದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಸಿದ್ದಿಕೇರಿಗೆ ಹೋಗುವ ಮಾರ್ಗದಲ್ಲಿನ ರೈಲ್ವೆ ಸೇತುವೆ ಕೆಳಗಡೆ ಕರೆದುಕೊಂಡು ಹೋಗಿ ಜೈ ಶ್ರೀರಾಮ್ ಎನ್ನುವಂತೆ ಒತ್ತಾಯಿಸಿ ಹಲ್ಲೆ ಮಾಡಿದ್ದಾರೆ. ನೆಲದ ಮೇಲೆ ಬೀಳಿಸಿ ಹಲ್ಲೆ ಮಾಡಿದ ಯುವಕರ ಗುಂಪು, ನನ್ನ ಗಡ್ಡಕ್ಕೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

‘ನನಗೆ ಕಣ್ಣು ಕೂಡ ಕಾಣುವುದಿಲ್ಲ. ನನ್ನ ಬಳಿಯಿದ್ದ ಹಣ ದೋಚಿಕೊಂಡು ಹೋಗಿದ್ದಾರೆ. ಬಳಿಕ ಬೆಳಗಿನ ಜಾವ ಕುರಿ ಕಾಯುವ ಹುಡುಗರು ನನ್ನ ಮನೆಯ ವಿಳಾಸ ಕೇಳಿ ರಕ್ಷಣೆ ಮಾಡಿ, ಮನೆಗೆ ತಲುಪಿಸಿದ್ದಾರೆ’ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಘಟನೆಯ ಕುರಿತು ಗುರುವಾರ ರಾತ್ರಿ ಗಂಗಾವತಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ ಸ್ಥಳೀಯ ಮುಸ್ಲಿಂ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಹಲ್ಲೆಯಿಂದ ಹುಸೇನ್ ಸಾಬ್ ಅವರ ಮೇಲೆ ಆಗಿರುವ ಗಾಯಗಳ ವಿಡಿಯೋ ಮಾಡಿಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುತ್ತಿಗೆದಾರರಿಂದ ಐದು ಪೈಸೆ ಲಂಚ ಪಡೆದಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ

ಸಣ್ಣ ಗುತ್ತಿಗೆದಾರರ ಅನುಕೂಲಕ್ಕಾಗಿ 4 ಸಾವಿರ ಕೋಟಿ ರೂಪಾಯಿಯ ಕಾಮಗಾರಿಯನ್ನು ಪ್ಯಾಕೇಜ್...

ಕಡಬ | ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ; ಕಿಡಗೇಡಿ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ಮುಸುಕುದಾರಿ ಯುವಕನೊಬ್ಬ...

ನಕಲಿ ಎಫ್‌ಎಸ್‌ಎಲ್ ವರದಿ: ಯಾರು ಈ ಫಣೀಂದ್ರ? ಆತನ ಹಿನ್ನೆಲೆಯೇನು?

ವಿಧಾನಸೌಧದ ಆವರಣದಲ್ಲಿ ʻಪಾಕಿಸ್ತಾನ್ ಜಿಂದಾಬಾದ್ʼ ಎಂದೇ ಕೂಗಲಾಗಿತ್ತು ಎಂದು ಬಿಂಬಿಸಲು ಬಲಪಂಥೀಯ...

ಖಾಸಗಿ ಸಂಸ್ಥೆ ನೀಡಿರುವ ಎಫ್​ಎಸ್​ಎಲ್ ವರದಿ ಗಣನೆಗೆ ತೆಗೆದುಕೊಳ್ಳಲ್ಲ: ಸಚಿವ ಪರಮೇಶ್ವರ್

ಖಾಸಗಿ ಸಂಸ್ಥೆಯವರು ನೀಡಿರುವ ಎಫ್​ಎಸ್​ಎಲ್ ವರದಿಯನ್ನು ಗಣನೆಗೆ ತೆಗೆದುಕೊಳ್ಳಲ್ಲ ಎಂದು ಗೃಹ...