ಬೆಂಗಳೂರು | 24 ಗಂಟೆಗಳಲ್ಲಿ 87 ಕೆಜಿ ಚಿನ್ನ ವಶ: ಚುನಾವಣಾ ಆಯೋಗ

Date:

ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 87.78 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಅಧಿಕಾರಿಗಳು ಶನಿವಾರ ಹೇಳಿದ್ದಾರೆ. ಚಿನ್ನದ ಮೌಲ್ಯವು 32,58,68,623 ರೂ. ಆಗಿದ್ದು, ರಾಜ್ಯದಲ್ಲಿ ಇದುವರೆಗೆ ವಶಕ್ಕೆ ಪಡೆಲಾದ ಅತ್ಯಧಿಕ ಪ್ರಮಾಣದ ಚಿನ್ನವಾಗಿದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ (ಸಿಇಒ) ಕಚೇರಿ ಹೇಳಿದೆ.

- Advertisement -

ಏಪ್ರಿಲ್‌ 4ರಂದು ನಂಜನಗೂಡಿನಲ್ಲಿ 98.52 ಕೋಟಿ ಮೌಲ್ಯದ 23,160 ಲೀಟರ್ ಮದ್ಯದ 6.03 ಲಕ್ಷ ಬಾಕ್ಸ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಇದೀಗ, 32.58 ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏಪ್ರಿಲ್ 12 ರ ಬೆಳಿಗ್ಗೆ 9ರಿಂದ ಏಪ್ರಿಲ್ 13 ರ ಬೆಳಿಗ್ಗೆ 9 ಗಂಟೆಯವರೆಗೆ ಒಟ್ಟು 87.78 ಕೆಜಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಚಿನ್ನದ ಜೊತೆಗೆ, ಅದೇ ಸಮಯದಲ್ಲಿ 27,82,000 ಮೌಲ್ಯದ 35.59 ಕೆಜಿ ಬೆಳ್ಳಿಯನ್ನು ಕೂಡ ವಶಪಡಿಸಿಕೊಂಡಿದೆ ಎಂದು ಆಯೋಗ ತಿಳಿಸಿದೆ.

ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಾದ ಬಳಿಕ, ಏಪ್ರಿಲ್ 13ರವರೆಗೆ ವಶಪಡಿಸಿಕೊಂಡಿರುವ ಒಟ್ಟು ಚಿನ್ನ ಮತ್ತು ಬೆಳ್ಳಿ 101.65 ಕೋಟಿ ರೂ. ಮೌಲ್ಯದ್ದಾಗಿದೆ ಎಂದು ಆಯೋಗ ಹೇಳಿದೆ.

ಬೆಂಗಳೂರು ಸೆಂಟ್ರಲ್ ಕ್ಷೇತ್ರದಲ್ಲಿ 10,06,985 ರೂ. ಮೌಲ್ಯದ 22.96 ಕೆಜಿ ಬೆಳ್ಳಿಯನ್ನು ಎಫ್‌ಎಸ್‌ಟಿ ತಂಡ ವಶಪಡಿಸಿಕೊಂಡಿತ್ತು. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ರಾಮನಗರ ಜಿಲ್ಲೆಯ ಹೆಜ್ಜಾಲ ಚೆಕ್‌ಪೋಸ್ಟ್‌ನಲ್ಲಿ 19,02,61,638 ರೂ. ಮೌಲ್ಯದ 28.5 ಕೆಜಿ ಚಿನ್ನ ಮತ್ತು 21,84,000 ರೂ. ಮೌಲ್ಯದ 28 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ವ್ಯಾಪ್ತಿಯ ಚಿಕ್ಕಮಗಳೂರು ಜಿಲ್ಲೆಯ ಬೀರೂರು ರಸ್ತೆಯ ಅಜ್ಜಂಪುರದಲ್ಲಿ ವಾಣಿಜ್ಯ ತೆರಿಗೆ ಇಲಾಖೆ 9,35,00,000 ರೂ. ಮೌಲ್ಯದ 30 ಕೆಜಿ ಚಿನ್ನ ಮತ್ತು 5,98,000 ರೂ. ಮೌಲ್ಯದ 7.59 ಕೆಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....