ಸಿದ್ದರಾಮಯ್ಯ ಸಂಪುಟದಲ್ಲಿದ್ದ 9 ಸಚಿವರಿಗೆ ಡಿಕೆಶಿ ಕ್ಯಾಬಿನೆಟ್‌ನಲ್ಲಿ ಕೊಕ್; ಮಂತ್ರಿಗಿರಿ ಕಳೆದುಕೊಂಡವರ ಪಟ್ಟಿ ಇಲ್ಲಿದೆ!

Date:

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಮತ್ತು ಪೂರ್ಣ ಸಚಿವ ಸಂಪುಟ ಇಂದು (ಸೋಮವಾರ-ಆ.3) ರಚನೆಯಾಗಿದೆ. ಸಂಪುಟದಲ್ಲಿ ಹೊಸ ಮುಖಗಳಿಗೆ ಹೆಚ್ಚು ಅವಕಾಶ ನೀಡಲಾಗಿದೆ. ಈ ಹಿಂದೆ, ಸಿದ್ದರಾಮಯ್ಯ ನೇತೃತ್ವದ 2023–2026ರ ಸರ್ಕಾರದಲ್ಲಿ ಸಚಿವರಾಗಿದ್ದ ಒಂಬತ್ತು ಮಂದಿಯನ್ನು ಹೊಸ ಸಂಪುಟದಲ್ಲಿ ಕೈಬಿಡಲಾಗಿದೆ.

- Advertisement -

ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಎಚ್.ಕೆ ಪಾಟೀಲ, ಕೆ.ಎನ್ ರಾಜಣ್ಣ, ಎನ್.ಎಸ್ ಬೋಸರಾಜು, ದಿನೇಶ್ ಗುಂಡೂರಾವ್, ಶಿವಾನಂದ ಪಾಟೀಲ, ಎಸ್. ಎಸ್. ಮಲ್ಲಿಕಾರ್ಜುನ, ರಹೀಂ ಖಾನ್, ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಕೆ. ವೆಂಕಟೇಶ್ ಅವರಿಗೆ ಹೊಸ ಸಂಪುಟದಲ್ಲಿ ಸ್ಥಾನ ನೀಡಲಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಈ ಪೈಕಿ, ಕೆ.ಎನ್ ರಾಜಣ್ಣ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಲ್ಲಿ 2025ರಿಂದ ಸಂಪುಟದಿಂದ ಕೈಬಿಡಲಾಗಿತ್ತು.

ಕೆ.ಎನ್ ರಾಜಣ್ಣ ಸೇರಿದಂತೆ, ಎಚ್.ಕೆ. ಪಾಟೀಲ, ದಿನೇಶ್ ಗುಂಡೂರಾವ್, ಲಕ್ಷ್ಮೀ ಹೆಬ್ಬಾಳ್ಕರ್, ಹಾಗೂ ಶಿವಾನಂದ ಪಾಟೀಲ ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಪ್ರಮುಖ ಇಲಾಖೆಗಳ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಹಲವು ಮಹತ್ವದ ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಸಕ್ರಿಯ ಪಾತ್ರ ವಹಿಸಿದ್ದರು.

Advertisements

ಆದಾಗ್ಯೂ, ಇದೇ ವರ್ಷದ ಮೇ ಅಂತ್ಯದಲ್ಲಿ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿ, ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಬಳಿಕ, ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾಯಿತು. ಆ ವೇಳೆ, ಮೊದಲ ಹಂತದಲ್ಲಿ 13 ಸಚಿವರೊಂದಿಗೆ ಸಂಪುಟ ರಚಿಸಿದ್ದರು. ಇದೀಗ, ಸಂಪುಟವನ್ನು ವಿಸ್ತರಣೆ ಮಾಡಲಾಗಿದೆ. 20 ಮಂದಿ ಸಚಿವರ ನೇಮಕದೊಂದಿಗೆ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗಿದೆ. ಈ ವಿಸ್ತರಣೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸೂತ್ರದಂತೆ ಹಲವು ಹೊಸ ಮುಖಗಳು, ಪ್ರಾದೇಶಿಕ ಸಮೀಕರಣಗಳು, ಸಮುದಾಯಗಳ ಪ್ರಾತಿನಿಧ್ಯ ಹಾಗೂ ರಾಜಕೀಯ ಸಮತೋಲನಕ್ಕೆ ಆದ್ಯತೆ ನೀಡಲಾಗಿದೆ.

ಈ ಲೇಖನ ಓದಿದ್ದೀರಾ?: ಸುದ್ದಿ ವಿವರ | ಹೊಸ ‘ಪರೀಕ್ಷೆ ತಿದ್ದುಪಡಿ ಮಸೂದೆ’ಯಲ್ಲಿ ಏನಿದೆ?

ಹೊಸ ಸಂಪುಟದಲ್ಲಿ ಪಿ.ಎಂ ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್ ಬಸವಂತಪ್ಪ, ರಿಜ್ವಾನ್ ಅರ್ಷದ್, ಟಿ ರಘುಮೂರ್ತಿ, ಪುಟ್ಟರಂಗಶೆಟ್ಟಿ, ಡಾ. ಅಜಯ್ ಸಿಂಗ್, ಕೆ.ಎಂ ಶಿವಲಿಂಗೇಗೌಡ, ಎಚ್.ಸಿ ಬಾಲಕೃಷ್ಣ, ಗಾಯತ್ರಿ ಶಾಂತೇಗೌಡ, ಬಸವರಾಜ್ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಮಣ ಸವದಿ ಸೇರಿದಂತೆ ಹಲವು ಹೊಸ ಮುಖಗಳಿಗೆ ಅವಕಾಶ ಕಲ್ಪಿಸಲಾಗಿದೆ.

ಗಮನಾರ್ಹವಾಗಿ, ಬಿ. ನಾಗೇಂದ್ರ ಅವರ ವಿರುದ್ಧ ‘ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ’ ನಿಧಿ ಅವ್ಯವಹಾರದ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು 2024ರಲ್ಲಿ ರಾಜೀನಾಮೆ ನೀಡಿದ್ದರು. ಇದೀಗ, ಸಂಪುಟದಲ್ಲಿ ಅವರಿಗೆ ಮರಳಿ ಸ್ಥಾನ ನೀಡಲಾಗಿದೆ.

ಆದರೆ, ಸಂಪುಟದಿಂದ ಹೊರಗುಳಿದ 10 ಮಂದಿ ಮಾಜಿ ಸಚಿವರ ಭವಿಷ್ಯದ ರಾಜಕೀಯ ಪಾತ್ರದ ಬಗ್ಗೆ ಕಾಂಗ್ರೆಸ್ ನಾಯಕತ್ವ ಇನ್ನೂ ಯಾವುದೇ ಅಧಿಕೃತ ಸ್ಪಷ್ಟನೆ ನೀಡಿಲ್ಲ. ಇವರಲ್ಲಿ ಕೆಲವರಿಗೆ ಪಕ್ಷದ ಸಂಘಟನೆ, ನಿಗಮ-ಮಂಡಳಿಗಳು ಸೇರಿದಂತೆ ಪ್ರಮುಖ ಹುದ್ದೆಗಳನ್ನು ನೀಡುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ದವಡೆ ಜಜ್ಜಿಸಿಕೊಂಡ ಆಪರೇಷನ್ ಎಪಿಕ್ ಫ್ಯೂರಿ: ಇರಾನ್ ಕಾಳಗದಲ್ಲಿ ಅಮೆರಿಕಕ್ಕೆ ಆದ ನಷ್ಟಗಳೇನೇನು?

ಬೃಹತ್ ಮೊತ್ತದ ಬಜೆಟ್, ದುಬಾರಿ ಬೆಲೆಯ ಯುದ್ಧ ವಿಮಾನಗಳು ಮತ್ತು ಅತ್ಯಾಧುನಿಕ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...