ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

Date:

  • ‘ಬಿ ಎ ಮೊಯ್ದೀನ್ ಅಪ್ಪಟ ಜಾತ್ಯತೀತ ಮೌಲ್ಯಗಳುಳ್ಳ ಆದರ್ಶ ವ್ಯಕ್ತಿತ್ವ ಹೊಂದಿದ್ದರು’
  • ‘ಸಂವಿಧಾನದ ಮೌಲ್ಯಗಳನ್ನು ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್’

ಭಾರತದ ವೈವಿಧ್ಯತೆಯನ್ನು ಮತ್ತು ಏಕತೆಯನ್ನು ಇತರೆ ದೇಶಗಳಲ್ಲಿ ಕಾಣಲು ಸಾಧ್ಯವಿಲ್ಲ. ಭಿನ್ನ ಸಂಸ್ಕೃತಿಗಳ ನಡುವೆ ಸಮನ್ವಯ, ಸೌಹಾರ್ದ ಇಲ್ಲದೇ ಹೋದರೆ ಆ ದೇಶದಲ್ಲಿ, ಆ ಸಮಾಜದಲ್ಲಿ ನೆಮ್ಮದಿ ಇರಲು ಸಾಧ್ಯವಿಲ್ಲ. ನೆಮ್ಮದಿ ಇಲ್ಲದ ದೇಶ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಹೆಚ್ ಬಿ ಆರ್ ಲೇಔಟ್‌ನಲ್ಲಿ ನೂತನವಾಗಿ ನಿರ್ಮಿಸಿರುವ ಬ್ಯಾರೀಸ್ ಸೌಹಾರ್ದ ಭವನ ಉದ್ಘಾಟಿಸಿ ಮಾತನಾಡಿದ ಅವರು, ಬಿ ಎ ಮೊಯ್ದೀನ್ ಅವರು ಸೌಹಾರ್ದತೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದರು. ಪರಸ್ಪರ ಅಪನಂಬಿಕೆ ಮತ್ತು ದ್ವೇಷವನ್ನು ಬಿತ್ತುವವರು ಈ ದೇಶದ ಅವನತಿಗೆ ಕಾರಣ ಆಗುತ್ತಾರೆ. ನಮ್ಮ ಸಂವಿಧಾನ ಜಾತ್ಯತೀತತೆಯನ್ನು, ಸೌಹಾರ್ದತೆಯನ್ನು ಎತ್ತಿ ಹಿಡಿದಿದೆ. ಭಾರತದಲ್ಲಿ ಜಾತ್ಯತೀತ ಮೌಲ್ಯವನ್ನು ಮತ್ತು ಸಂವಿಧಾನದ ಮೌಲ್ಯವನ್ನು ತನ್ನ ಮೌಲ್ಯವಾಗಿ ಆಚರಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷ ಕಾಂಗ್ರೆಸ್” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಜಾತ್ಯತೀತ ಜನತಾದಳದ ಸಂಸ್ಥಾಪಕ ಸದಸ್ಯ ನಾನು. ಬದುಕಿರುವವರೆಗೂ ಬಿಜೆಪಿ ಜತೆ ಸೇರುವುದಿಲ್ಲ ಎಂದು ದೇವೇಗೌಡರು ಹೇಳಿದ್ದರು. ಈಗ ಇದೇ ದೇವೇಗೌಡರು ಬಿಜೆಪಿ ಜತೆ ಕೈಜೋಡಿಸುತ್ತಿದ್ದಾರೆ. ಎಲ್ಲಿ ಹೋಯಿತು ಜಾತ್ಯತೀತ ಮೌಲ್ಯ” ಎಂದು ಪ್ರಶ್ನಿಸಿದರು.

“ನಾನು ಮತ್ತು ಡಿ ಕೆ ಶಿವಕುಮಾರ್ ಇಬ್ಬರೂ ಸೇರಿ ಫಾರೂಕ್‌ಗೆ ಜೆಡಿಎಸ್ ಕಡೆ ಹೋಗಬೇಡ, ಕಾಂಗ್ರೆಸ್ ನಿಂದ ರಾಜ್ಯಸಭೆಗೆ ಹೋಗು ಎಂದು ಎಷ್ಟು ಹೇಳಿದರೂ ಕೇಳಲಿಲ್ಲ. ಈಗ ಏನಾಗಿದೆ ನೋಡಿ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಷ್ಟು ಮದ್ಯದಂಗಡಿಗಳ ಸಿದ್ದು ಕ್ರಮ ಸಮಾಜಘಾತಕ- ಕೈಬಿಡುತ್ತೇವೆಂದು ಆರನೆಯ ‘ಗ್ಯಾರಂಟಿ’ ನೀಡಲಿ

ಕಾನೂನು ಕೈಗೆತ್ತಿಕೊಂಡರೆ ಕ್ರಮ

“ನಮ್ಮ ಆಡಳಿತದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಎಷ್ಟೇ ರಾಜಕೀಯ ಶಕ್ತಿ ಹೊಂದಿದ್ದರೂ ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದು ಖಚಿತ. ಎಲ್ಲಾ ಜಾತಿ, ಧರ್ಮದವರಿಗೂ ಅವರ ಸಂವಿಧಾನಬದ್ದ ಹಕ್ಕುಗಳನ್ನು ಆಚರಿಸಲು ಅವಕಾಶವಿದೆ. ಇದಕ್ಕೆ ಯಾರೇ ತೊಂದರೆ ಕೊಟ್ಟರೂ ಕ್ರಮ ಖಚಿತ” ಎಂದು ಎಚ್ಚರಿಸಿದರು.

ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಸಲೀಂ ಅಹಮದ್, ಬ್ಯಾರೀಸ್ ಸೌಹಾರ್ದ ಭವನ ಸಮಿತಿಯ ಅಧ್ಯಕ್ಷರಾದ ಸಯ್ಯದ್ ಮಹಮದ್ ಬ್ಯಾರಿ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ನೀವು ಮತ್ತು ನಿಮ್ಮ ಪೊಲೀಸರು ಮಹಿಳೆಯರಿಗೆ ಹೆದರುವುದೇಕೆ: ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ವೇಳೆ ಮಹಿಳಾ ಪತ್ರಕರ್ತರು ಹಾಗೂ ಮಹಿಳಾ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...