ಸಿಎಂ ಸಿದ್ದರಾಮಯ್ಯ ಕೈಯಲ್ಲಿ ಪಾಕಿಸ್ತಾನ ಧ್ವಜ; ‘ನಮ್ಮ ಮೋದಿ’ ಫೇಸ್‌ಬುಕ್‌ ಪೇಜಿನಲ್ಲಿ ವಿಕೃತಿ

Date:

ಕಾಶ್ಮೀರದ ಪಹಲ್ಗಾಮ್‌ ದಾಳಿಯ ನಂತರ ಸಾಮಾಜಿಕ ಮಾಧ್ಯಮಗಳಲ್ಲಿ ಕೆಲ ವಿಕೃತ ವ್ಯಕ್ತಿಗಳು ಕುಚೇಷ್ಟೆಗಳನ್ನು ಆರಂಭಿಸಿದ್ದಾರೆ. ಮೊನ್ನೆ ಕಲಬುರಗಿಯಲ್ಲಿ ಪಾಕಿಸ್ತಾನದ ಧ್ವಜವನ್ನು ರಸ್ತೆಯಲ್ಲಿ ಅಂಟಿಸಿದ ಭಜರಂಗದಳದ ಕಾರ್ಯಕರ್ತರೆನ್ನಲಾದ ಕೆಲವು ಪುಂಡರನ್ನು ಪೊಲೀಸರು ಬಂಧಿಸಿದ್ದರು. ಈಗ ಫೇಸ್‌ಬುಕ್‌ನಲ್ಲಿ ಕುಚೇಷ್ಟೆಗಳು ಶುರುವಾಗಿವೆ.

- Advertisement -

”ನಮ್ಮ ಮೋದಿ” ಎಂಬ ಫೇಸ್‌ಬುಕ್‌ ಪುಟದಲ್ಲಿ ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಪೋಸ್ಟ್ ಮಾಡಲಾಗಿದೆ. ಇದನ್ನು ಬಿಜೆಪಿಯ ಐಟಿ ಸೆಲ್ ಸೃಷ್ಟಿಸಿರುವ ಅನುಮಾನವಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಒಂದು ರಾಜ್ಯದ ಮುಖ್ಯಮಂತ್ರಿಯ ಕೈಯಲ್ಲಿ ಪಾಕಿಸ್ತಾನದ ಬಾವುಟ ಕೊಟ್ಟು ನೃತ್ಯ ಮಾಡುವ ವಿಡಿಯೋ ಮಾಡುವುದು ಅದರಲ್ಲೂ ಕಾಶ್ಮೀರದಲ್ಲಿ ಭಯೋತ್ಪಾದನೆಯ ಕೃತ್ಯ ನಡೆದಿರುವ ಸಂದರ್ಭದಲ್ಲಿ ಇಂತಹ ವಿಕೃತಿ ತೋರಿರುವುದು ತೀವ್ರ ಖಂಡನೆಗೆ ಕಾರಣವಾಗಿದೆ.

2 ಲಕ್ಷ ಚಂದಾದಾರರು ಇರುವ ಈ ”ನಮ್ಮ ಮೋದಿ” ಪುಟದಲ್ಲಿ ಹಾಕಿರುವ ಈ ವಿಡಿಯೋವನ್ನು ಹಲವರು ಹಂಚಿಕೊಂಡು ಲೈಕ್ ಮಾಡಿದ್ದಾರೆ. ಇದಕ್ಕೆ ಬಂದಿರುವ ಕಮೆಂಟುಗಳಲ್ಲಿ ಹೆಚ್ಚಿನವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಕಾಶ್ಮೀರದಲ್ಲಿ ಭಯೋತ್ಪಾದಕ ಘಟನೆ ನಡೆದ ಕೂಡಲೇ ಅತ್ಯಂತ ತ್ವರಿತಗತಿಯಲ್ಲಿ ಸ್ಪಂದಿಸಿ, ಅಲ್ಲಿ ಸಿಲುಕಿಕೊಂಡಿರುವ ಕರ್ನಾಟಕದ ಪ್ರವಾಸಿಗರ ರಕ್ಷಣೆಗೆ ಕೂಡಲೇ ಸಚಿವರೊಬ್ಬರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಕಳಿಸಿ ಸುರಕ್ಷಿತವಾಗಿ ಬೆಂಗಳೂರು ತಲುಪುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಡಿದ್ದು ಎಲ್ಲಡೆ ಮೆಚ್ಚುಗೆಗೆ ಕಾರಣವಾಗಿತ್ತು.

ಇದೇ ಸಂದರ್ಭದಲ್ಲಿ ಈ ದುಷ್ಕೃತ್ಯಕ್ಕೆ ಕೇಂದ್ರ ಸರ್ಕಾರದ ಭದ್ರತಾ ವೈಫಲ್ಯ ಹೊಣೆ ಕಾರಣವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಅದೇ ರೀತಿ ಕೇಂದ್ರ ಸರ್ಕಾರ ಕೂಡ ವೈಫಲ್ಯವನ್ನು ಒಪ್ಪಿಕೊಂಡಿತ್ತು. ಹೀಗಿರುವಾಗ ಸಿದ್ದರಾಮಯ್ಯ ಅವರನ್ನು ಇಷ್ಟು ವಿಕೃತ ರೀತಿಯಲ್ಲಿ ಬಿಂಬಿಸಲಾಗಿದೆ. ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ಇಲಾಖೆಗಳಿಗೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.

SIddu pak flag
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...