ಪ್ರಧಾನಿ ಸ್ಥಾನದಿಂದ ಮೋದಿ ಕೆಳಗಿಳಿಸಲು ಹೈ ವೊಲ್ಟೋಜ್‌ ಸಭೆ ನಡೆದಿದೆ: ಸಂತೋಷ್‌ ಲಾಡ್‌

Date:

ನರೇಂದ್ರ ಮೋದಿ ಅವರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಲು ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂ ಸೇವಕ ಸಂಘ) ಹೈ ವೊಲ್ಟೋಜ್‌ ಸಭೆ ನಡೆಸಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಹೇಳಿದರು.

- Advertisement -

ಬಸವಕಲ್ಯಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, “ಚುನಾವಣಾ ಬಾಂಡ್‌ ವಿಚಾರದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕೆಂಬ ಕೂಗಿದೆ. ಆದಕಾರಣ ಮೋದಿ ಅವರನ್ನು ಕೆಳಗಿಳಿಸಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಪ್ರಧಾನಿ ಮಾಡಲು ಚಿಂತನೆ ನಡೆದಿದೆ” ಎಂದು ಸ್ಫೋಟಕ ಸಂಗತಿ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸತೀಶ ಜಾರಕಿಹೊಳಿ ವಿಚಾರವಾಗಿ ಮಾತನಾಡಿ, “ಮೈಸೂರಿನಲ್ಲಿ ಸಚಿವ ಸತೀಶ ಜಾರಕಿಹೊಳಿ ಸೇರಿದಂತೆ ಕಾಂಗ್ರೆಸ್‌ ಪಕ್ಷದ ಇತರೆ ಮುಖಂಡರು ಸಭೆ ನಡೆಸಿರುವುದರಲ್ಲಿ ವಿಶೇಷತೆ ಇಲ್ಲ. ಮೋದಿಯವರನ್ನು ಆರ್‌ಎಸ್‌ಎಸ್‌ ಬದಲಿಸಲು ಸಭೆ ನಡೆಸಿರುವ ಬಗ್ಗೆ ಮಾತನಾಡಿ” ಎಂದು ಸುದ್ದಿಗಾರರಿಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

ಜಾತಿ ಗಣತಿ ವರದಿ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾವುದೇ ವಿಷಯಕ್ಕೆ ಯಾವಾಗಲೂ ಪರ ವಿರೋಧ ಇದ್ದೇ ಇರುತ್ತದೆ. ಜಾತಿ ಗಣತಿ ವರದಿಯನ್ನು ಮುಖ್ಯಮಂತ್ರಿಗಳು ಬಿಡುಗಡೆಗೊಳಿಸುತ್ತಾರೆ. ಅದು ಅವರ ಕನಸು. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುತ್ತೇವೆ ಎಂದಿದ್ದಾರೆ” ಎಂದರು.

ಮುಡಾ ವಿಚಾರವಾಗಿ ಮಾತನಾಡಿ, “ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿವೇಶನಗಳನ್ನು ವಾಪಸ್‌ ಕೊಟ್ಟಿದ್ದಾರೆ. ಸಿಎಂ ಪತ್ನಿ ಪರಿಹಾರದ ರೂಪದಲ್ಲಿ ನಿವೇಶನ ಪಡೆದಿದ್ದಾರೆ. ಯಾವುದೇ ವಿಶೇಷ ಕೆಟಗರಿಯಲ್ಲಿ ಪಡೆದಿಲ್ಲ. ಹೀಗಾಗಿ ಇದು ಕಾನೂನುಬಾಹಿರವಲ್ಲ” ಎಂದು ಹೇಳಿದರು.‌

“ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ. ಬಿಜೆಪಿಯವರು ಸುಳ್ಳು ಹೇಳಿ, ವಾಮ ಮಾರ್ಗದಲ್ಲಿ ಹರಿಯಾಣದಲ್ಲಿ ಗೆಲುವು ಸಾಧಿಸಿದ್ದಾರೆ” ಎಂದು ಆರೋಪಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...