ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಯತ್ನಿಸುತ್ತಿದೆ: ಡಿಸಿಎಂ ಡಿಕೆ ಶಿವಕುಮಾರ್

Date:

  • ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ
  • ಜಗದೀಶ ಶೆಟ್ಟರ್‌, ರಮೇಶ ಜಾರಕಿಹೊಳಿ ಭೇಟಿಗೇಕೆ ಭಯ?

ಬಿಜೆಪಿ ಮತ್ತು ಜೆಡಿಎಸ್‌ನವರು ಹತಾಶೆಯ ಸ್ಥಿತಿಗೆ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಲೇವಡಿ ಮಾಡಿದರು.

- Advertisement -

ಬೆಂಗಳೂರಿನ ಸದಾಶಿವನಗರದ ನಿವಾಸದ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಬಿಜೆಪಿಯ ತಂಡವೊಂದು ಸರ್ಕಾರ ಬೀಳಿಸಲು ಕೆಲಸ ಮಾಡುತ್ತಿದೆ. ಈ ಬಗ್ಗೆ ನನಗೆ ಎಲ್ಲ ಗೊತ್ತಿದೆ. ಯಾವ ಶಾಸಕರನ್ನು, ಯಾರು ಯಾವಾಗ ಭೇಟಿ ಮಾಡಿದರು, ಮಾಡುತ್ತಿದ್ದಾರೆ ಎಂದು ಸಂಬಂಧಪಟ್ಟವರೇ ನನಗೆ ಮತ್ತು ಮುಖ್ಯಮಂತ್ರಿಗೆ ಮಾಹಿತಿ ನೀಡಿದ್ದಾರೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಿಜೆಪಿಯವರು ಯಾವ ರೀತಿ ಆಮೀಷ ಒಡ್ಡುತ್ತಿದ್ದಾರೆ ಎನ್ನುವುದನ್ನೂ ನಮ್ಮ ಶಾಸಕರು ಹೇಳಿದ್ದಾರೆ. ನಮ್ಮ ಬಳಿ ಪ್ರತಿಯೊಂದು ಮಾಹಿತಿ ಇದೆ. ಯಾರನ್ನೆಲ್ಲ ಭೇಟಿಯಾಗಿದ್ದಾರೆ ಎಂಬುದನ್ನು ಅಧಿವೇಶನದಲ್ಲಿ ಬಹಿರಂಗಪಡಿಸುವೆ” ಎಂದರು.

ಈ ಸುದ್ದಿ ಓದಿದ್ದೀರಾ? ಕೆ ಸಿ ರಘು: ಮಾಸದ ನಗು, ಜ್ಞಾನದ ಬೆರಗು

ಜಗದೀಶ ಶೆಟ್ಟರ್‌ ಮತ್ತು ರಮೇಶ ಜಾರಕಿಹೊಳಿ ಭೇಟಿ ವಿಚಾರವಾಗಿ ಪತ್ರಕರ್ತರು ಪ್ರಶ್ನಿಸಿದಾಗ, “ಎಲ್ಲದರಲ್ಲೂ ಅನುಮಾನ ಪಡಬಾರದು. ಜಗದೀಶ ಶೆಟ್ಟರ್ ಅವರು, ತಮ್ಮ ಶಕ್ತಿ ಏನಿದೆ ಎಂದು ಈಗಾಗಲೇ ತೋರಿಸಿದ್ದಾರೆ. ಈ ಬಗ್ಗೆ ನಾನೇನು ಹೆಚ್ಚು ಮಾತನಾಡುವುದಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...