ರಾಜ್ಯದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 393 ಹುಲಿಗಳ ಸಂಖ್ಯೆ ದಾಖಲು

Date:

Advertisements

2024ರ ನಾಲ್ಕನೇ ಹಂತದ ಸಮೀಕ್ಷೆಯ ಪ್ರಕಾರ, ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 393 ಹುಲಿಗಳ ಸಂಖ್ಯೆ ದಾಖಲಾಗಿದೆ.

ಕರ್ನಾಟಕ ಅರಣ್ಯ ಇಲಾಖೆ, ಬೆಂಗಳೂರಿನ ಅರಣ್ಯ ಭವನದಲ್ಲಿ ಸ್ಥಾಪಿಸಿರುವ ಕರ್ನಾಟಕ ವನ್ಯಜೀವಿ ತಾಂತ್ರಿಕ ಘಟಕದ ಮೂಲಕ ಈ ಸಮೀಕ್ಷೆಯ ಮಾಹಿತಿಯನ್ನು ವಿಶ್ಲೇಷಿಸಿ, “ಕರ್ನಾಟಕ – 2024 ಹುಲಿಗಳ, ಸಸ್ಯಾಹಾರಿ ಹಾಗೂ ಇತರ ಪ್ರಾಣಿಗಳ ವಾರ್ಷಿಕ ವರದಿ” ಪ್ರಕಟಿಸಲಾಗಿದೆ.

ನಾಲ್ಕನೇ ಹಂತದ ಸಮೀಕ್ಷೆಗಳು ಮುಖ್ಯವಾಗಿ ಕ್ಯಾಮೆರಾ ಸಮೀಕ್ಷೆಯನ್ನು ಒಳಗೊಂಡಿದ್ದು, ಇದು ಹುಲಿ ಹಾಗೂ ಇತರೆ ಬೇಟೆ ಪ್ರಾಣಿಗಳ ಸಂಖ್ಯೆ ಅಂದಾಜಿಗೆ ಉಪಯೋಗಿಸಲಾಗಿದೆ. ಸಸ್ಯಾಹಾರಿ ಪ್ರಾಣಿಗಳ ಸಂಖ್ಯೆ ಅಂದಾಜು ಮಾಡಲು ಲೈನ್ ಟ್ರಾನ್ಸೆಕ್ಟ್ ಸಮೀಕ್ಷೆ ಬಳಸಲಾಗುತ್ತಿದೆ.

Advertisements

ಹುಲಿ ಸಂರಕ್ಷಣದಲ್ಲಿ ಮುಂಚೂಣಿಯಲ್ಲಿರುವ ರಾಜ್ಯವಾಗಿರುವ ಕರ್ನಾಟಕ, ಮಾರ್ಗಸೂಚಿಗಳ ಅನುಸಾರ 2015ರಿಂದ ಈ ಸಮೀಕ್ಷೆಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದೆ. 2023ರ ನವೆಂಬರ್‌ನಿಂದ 2024ರ ಫೆಬ್ರವರಿಯವರೆಗೆ ಕರ್ನಾಟಕ ರಾಜ್ಯದ 5 ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ – ನಾಗರಹೊಳೆ, ಬಂಡೀಪುರ, ಭದ್ರ, ಬಿಳಿಗಿರಿರಂಗನಾಥ ಸ್ವಾಮಿ ಬೆಟ್ಟ (BRT) ಮತ್ತು ಕಾಳಿ (ದಾಂಡೇಲಿ-ಅಂಶಿ) ಪ್ರದೇಶಗಳಲ್ಲಿ ಈ Phase IV ಸಮೀಕ್ಷೆಗಳು ಕೈಗೊಳ್ಳಲಾಗಿದೆ.

ಒಟ್ಟು 2,160 ಕ್ಯಾಮೆರಾಗಳನ್ನು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಅಳವಡಿಸಲಾಗಿದ್ದು, ಇದರಿಂದ ಸುಮಾರು 61 ಲಕ್ಷ ವನ್ಯಜೀವಿ ಚಿತ್ರಗಳು ಪಡೆದುಕೊಳ್ಳಲಾಗಿದೆ. ಹುಲಿ ಚಿತ್ರಗಳನ್ನು AI ಆಧಾರಿತ ತಂತ್ರಾಂಶದ ಮೂಲಕ ಪ್ರತ್ಯೇಕಿಸಲಾಗಿದ್ದು, ಪ್ರತಿ ಹುಲಿಯ ಎರಡು ಬದಿಯಲ್ಲಿನ ವಿಭಿನ್ನ ಪಟ್ಟೆ ವಿನ್ಯಾಸವನ್ನು ಗುರುತಿಸುವ ಮೂಲಕ ಪ್ರತ್ಯೇಕ ಹುಲಿಗಳನ್ನು ಗುರುತಿಸಲಾಗಿದೆ.

2024ರ ಹಂತ ನಾಲ್ಕರ ಸಮೀಕ್ಷೆಯ ಪ್ರಕಾರ, ಕರ್ನಾಟಕದ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಒಟ್ಟು 393 ಹುಲಿಗಳ ಸಂಖ್ಯೆ ದಾಖಲಾಗಿದ್ದು, ಕೆಲವು ಹುಲಿಗಳು ಹುಲಿ ಸಂರಕ್ಷಿತ ಪ್ರದೇಶಗಳಿಂದ ಇತರ ಹುಲಿ ವಾಸಸ್ಥಾನ ಪ್ರದೇಶಗಳತ್ತ ವಲಸೆ ಹೋಗುತ್ತಿರುವುದು ಗಮನಿಸಲಾಗಿದೆ.

ಇಡೀ ರಾಜ್ಯದಲ್ಲಿ ಪ್ರತಿ ನಾಲ್ಕು ವರ್ಷಕ್ಕೊಮ್ಮೆ ಸಮೀಕ್ಷೆ ಮಾಡಲಾಗುತ್ತಿದ್ದು, ಐದು ಹುಲಿ ಸಂರಕ್ಷಿತ ಪ್ರದೇಶಗಳು ಹಾಗೂ ಇತರ ಹುಲಿ ವಾಸಸ್ಥಾನಗಳಲ್ಲೂ ಹುಲಿಗಳ ಸಂಖ್ಯೆ ಕ್ರಮೇಣ ಏರಿಕೆಯಾಗಿದೆ. ಮುಂಬರುವ ಅಖಿಲ ಭಾರತ ಹುಲಿ ಗಣತಿ (AITE) – 2026, ಹುಲಿ ಸಂರಕ್ಷಿತ ಪ್ರದೇಶಗಳಿಂದ ವಲಸೆ ಹೋದ ಹುಲಿಗಳು ಇತರ ಸಂರಕ್ಷಿತ ಪ್ರದೇಶಗಳಲ್ಲಿ ಸ್ಥಾಪಿತವಾಗಿರುವ ಬಗ್ಗೆ ಸ್ಪಷ್ಟವಾದ ಚಿತ್ರಣವನ್ನು ನೀಡುವ ನಿರೀಕ್ಷೆಯಿದೆ ಎಂದು ಅರಣ್ಯ ಇಲಾಖೆ ಪ್ರಕಟಣೆಯಲ್ಲಿ ವಿವರಿಸಿದೆ.

ಹುಲಿ 5
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X