ತಿರುಪತಿಗೆ ಹೋಗುತ್ತಿದ್ದವರ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ನಾಲ್ವರು ಮೃತಪಟ್ಟು ಆರು ಮಂದಿ ಗಾಯಗೊಂಡ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ನಡೆದಿದೆ.
ರಾಣೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 4ರ ಹಲಗೇರಿ ಬೈಪಾಸ್‌ನಲ್ಲಿ ಅಪಘಾತ ಸಂಭವಿಸಿದ್ದು, ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಮೀಳಾ (28) ಎಂಬುವವರು ರಾಣೆಬೆನ್ನೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ
ಮೃತ ನಾಲ್ವರೂ ಹಾವೇರಿ ಪಟ್ಟಣದ ಅಶ್ವಿನಿ ನಗರದ ನಿವಾಸಿಗಳಾಗಿದ್ದು ತಿರುಪತಿ ದರ್ಶನಕ್ಕೆ ತೆರಳುತ್ತಿದ್ದರು. ಮಧ್ಯರಾತ್ರಿ 12.30ರ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಹಾವೇರಿ ಎಸ್‌ಪಿ ಭೇಟಿ ಮಾಡಿ ಮಾಹಿತಿ ಕಲೆ ಹಾಕಿದರು.
ಗಾಯಗೊಂಡವರನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
