ನಕಲಿ ವೋಟರ್‌ ಐಡಿ ತಯಾರಿಕೆ ಆರೋಪ; ಭೈರತಿ ಸುರೇಶ್‌ ಆಪ್ತ ಸೇರಿ ಮೂವರು ಸಿಸಿಬಿ ವಶಕ್ಕೆ

Date:

  • ‘ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದಾನೆ’ 
  • ‘ದುಡ್ಡು ಕೊಟ್ಟರೆ ನಕಲಿ ವೋಟರ್ ಐಡಿ, ಡಿಎಲ್ ಮಾಡಿಕೊಡುತ್ತಿದ್ದರು’

ನಕಲಿ ಮತದಾರರ ಗುರುತಿನ ಚೀಟಿ, ಆಧಾರ್‌ ಕಾರ್ಡ್‌, ಡ್ರೈವಿಂಗ್‌ ಲೈಸೆನ್ಸ್‌ಗಳನ್ನು ಮಾಡಿಕೊಡುತ್ತಿರುವ ಆರೋಪದ ಮೇಲೆ ಸಚಿವ ಭೈರತಿ ಸುರೇಶ್‌ ಅವರ ಆಪ್ತ ಸೇರಿದಂತೆ ಮೂವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ದುಡ್ಡು ಕೊಟ್ಟರೆ ವೋಟರ್ ಐಡಿ, ಆಧಾರ್, ಡಿಎಲ್ ಮಾಡಿಕೊಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಹೆಬ್ಬಾಳದ ಕನಕ ನಗರದಲ್ಲಿರುವ ಎಂಎಸ್ಎಲ್ ಟೆಕ್ನೊ ಸಲ್ಯೂಷನ್ ಕಂಪನಿ ಮೇಲೆ ದಾಳಿ ಮಾಡಿ, ಮೌನೇಶ್‌ ಕುಮಾರ್‌, ಭಗತ್‌ ಹಾಗೂ ರಾಘವೇಂದ್ರ ಅವರನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇವರಲ್ಲಿ ಮೌನೇಶ್‌ ಎಂಬುವವ ಸಚಿವ ಭೈರತಿ ಸುರೇಶ್‌ ಅವರಿಗೆ ಆಪ್ತನಾಗಿದ್ದು, ಅವರ ಜೊತೆಗಿನ ಸಾಕಷ್ಟು ಫೋಟೋಗಳು ವೈರಲ್‌ ಆಗುತ್ತಿದೆ.

ಕಳೆದ ವಿಧಾನಸಭಾ ಚುನಾವಣೆಯ ವೇಳೆ ಚಿಲುಮೆ ಸಂಸ್ಥೆ ಹೆಸರಿನಲ್ಲಿ ವೋಟರ್‌ ಐಡಿಯಿಂದ ಹೆಸರುಗಳನ್ನು ಡಿಲೀಟ್‌ ಮಾಡಿರುವ ಆರೋಪ ಕೇಳಿಬಂದಿತ್ತು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಕಲಿ ವೋಟರ್‌ ಐಡಿ ತಯಾರಿಸುತ್ತಿದ್ದ ಈ ಮೂವರ ಪ್ರಕರಣ ಮಹತ್ವ ಪಡೆದುಕೊಂಡಿದೆ.

m3

ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗುವುದಕ್ಕೆ ಸಹಕಾರ ನೀಡಿದ್ದಾರೆ ಎಂಬ ಆರೋಪ ಇವರ ಮೇಲಿದೆ. ಒರಿಜಿನಲ್ ಐಡಿ ಕಾರ್ಡ್ ಎಂದು ಹಣ ಪಡೆದು ಸರ್ಕಾರ ಮತ್ತು ಸಾರ್ವಜನಿಕರಿಗೆ ಮೋಸ ಮಾಡಿದ್ದಾರೆ ಎನ್ನಲಾಗಿದೆ.

ಯಾವುದೇ ಕ್ಷೇತ್ರದ ವೋಟರ್ ಐಡಿ, ಯಾವುದೇ ಆಧಾರ್ ಕೇಳಿದರೂ ಮಾಡಿಕೊಡುತ್ತಾರೆ ಎಂಬ ಆರೋಪದ ಬಗ್ಗೆ ಮಾಹಿತಿ ಪಡೆದು, ದಾಳಿ ನಡೆಸಿದ ಸಿಸಿಬಿ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಕೃತ್ಯಕ್ಕೆ ಬಳಸುತಿದ್ದ ಕಂಪ್ಯೂಟರ್ ಸೇರಿ ಹಲವಾರು ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಆದರೆ ಆರೋಪಿಗಳನ್ನು ಇನ್ನೂ ಬಂಧನ ಮಾಡಿಲ್ಲ ಎನ್ನಲಾಗಿದೆ. ಕೇವಲ ನೋಟಿಸ್ ನೀಡಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...