ಕೈದಿಗಳಿಗೆ ರಾಜಾತಿಥ್ಯ ಆರೋಪ, ಸಿಎಂ ಮನೆಗೆ ಬಿಜೆಪಿ ನಾಯಕರ ಮುತ್ತಿಗೆ, ಪೊಲೀಸರಿಂದ ಬಂಧನ

Date:

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂದು ಆರೋಪಿಸಿರುವ ಬಿಜೆಪಿ ನಾಯಕರು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿ ಸೋಮವಾರ ಸಿಎಂ ಮನೆ ಮುತ್ತಿಗೆಗೆ ಯತ್ನಿಸಿದರು.

- Advertisement -

ಬಿಜೆಪಿ ಯುವ ಮೋರ್ಚಾ ಹಮ್ಮಿಕೊಂಡಿದ್ದ ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಪ್ರತಿಭಟನೆಯಲ್ಲಿ ಸಾಗಿ ಬರುತ್ತಿದ್ದ ನಾಯಕರನ್ನು ಪೊಲೀಸರು ತಡೆದು ಬಂಧಿಸಿ, ಬಸ್‌ನಲ್ಲಿ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಪ್ರತಿಭಟನೆಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, “ಪರಪ್ಪನ ಅಗ್ರಹಾರ ಜೈಲು ಒಂದು ರೀತಿ ನೈಟ್ ಕ್ಲಬ್ ಆಗಿ, ಮನರಂಜನಾ ಕ್ಲಬ್ ಆಗಿ ಪರಿವರ್ತನೆಗೊಂಡಿದೆ. ಭಯೋತ್ಪಾದಕರು, ಐಎಸ್‍ಐ ಏಜೆಂಟರು, ಮುಸ್ಲಿಂ ಮೂಲಭೂತವಾದಿಗಳು- ಇವರೆಲ್ಲರಿಗೂ ಪರಪ್ಪನ ಅಗ್ರಹಾರ ಜೈಲು ಮನರಂಜನಾ ಕ್ಲಬ್ ಆಗಿದೆ” ಎಂದು ಆರೋಪಿಸಿದರು.

“ಇಂಥ ದೇಶದ್ರೋಹಿಗಳಿಗೆ ಟಿ.ವಿ., ಮೊಬೈಲ್ ಫೋನ್, ಗುಂಡು- ತುಂಡುಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಎಲ್ಲವೂ ಬಹಳ ಸರಾಗವಾಗಿ ನಡೆಯುತ್ತಿದೆ. ರಾಜ್ಯ ಸರಕಾರವು ಕಣ್ಮುಚ್ಚಿ ಕುಳಿತಿರುವುದು ಇದರಿಂದ ಮೇಲ್ನೋಟಕ್ಕೆ ಗೊತ್ತಾಗುತ್ತದೆ. ಈ ಕಾಂಗ್ರೆಸ್ ಸರಕಾರದ ಕುಮ್ಮಕ್ಕಿನಿಂದಲೇ ದೇಶದ್ರೋಹಿಗಳಿಗೆ ಐಷಾರಾಮಿ ವ್ಯವಸ್ಥೆಗಳನ್ನು ಪರಪ್ಪನ ಅಗ್ರಹಾರ ಜೈಲಲ್ಲಿ ಮಾಡಲಾಗಿದೆ. ಇದಕ್ಕೆಲ್ಲ ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ನೇರ ಹೊಣೆಗಾರರು” ಎಂದು ದೂರಿದರು.

ಪೊಲೀಸ್ ಠಾಣೆ ಕಾಂಗ್ರೆಸ್ ಕಚೇರಿ: ಆರ್.ಅಶೋಕ್

ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಮಾತನಾಡಿ, “ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ಪರಮೇಶ್ವರ್ ಅವರ ಹಾಟ್‍ಲೈನ್ ಮೂಲಕ ಈ ಜೈಲಿನಿಂದ ಪಾಕಿಸ್ತಾನ, ಅಪಘಾನಿಸ್ತಾನಕ್ಕೆ ಕರೆಗಳು ಹೋಗುತ್ತಿವೆ. ಇವರು 2 ವರ್ಷದಿಂದ ಕತ್ತೆ ಕಾಯುತ್ತಿದ್ದಾರಾ? ಗುಪ್ತಚರ ವಿಭಾಗ ಎರಡು ವರ್ಷದಿಂದ ಸತ್ತು ಹೋಗಿದೆ. ಪೊಲೀಸ್ ಠಾಣೆಗಳನ್ನು ಇವರು ಕಾಂಗ್ರೆಸ್ ಕಚೇರಿ ಮಾಡಿದ್ದಾರೆ” ಎಂದು ಆಕ್ಷೇಪಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಶಾಸಕರಾದ ಕೆ. ಗೋಪಾಲಯ್ಯ, ಉದಯ್ ಬಿ. ಗರುಡಾಚಾರ್, ಎಂ. ಕೃಷ್ಣಪ್ಪ, ಸಿ. ಮುನಿರಾಜು, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ, ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ಶಾಸಕ ಧೀರಜ್ ಮುನಿರಾಜು, ರಾಜ್ಯ ಕಾರ್ಯದರ್ಶಿಗಳಾದ ಹೆಚ್.ಸಿ. ತಮ್ಮೇಶ್ ಗೌಡ, ಶರಣು ತಳ್ಳಿಕೇರಿ, ಮುಖಂಡ ಉಮೇಶ್ ಶೆಟ್ಟಿ, ಜಿಲ್ಲಾಧ್ಯಕ್ಷರಾದ ಎಸ್. ಹರೀಶ್, ಸಪ್ತಗಿರಿ ಗೌಡ ಮತ್ತು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...