ನೈಸ್ ಯೋಜನೆಗೆ ಕಾನೂನು ಚೌಕಟ್ಟಿನಲ್ಲೇ ಕ್ರಮ: ಸಿಎಂ ಡಿಕೆಶಿ

Date:

ನೈಸ್ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡರೂ ಕಾನೂನು ಚೌಕಟ್ಟಿನಲ್ಲೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.

- Advertisement -

ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೈಸ್ ಯೋಜನೆ ಕುರಿತು ಸರ್ಕಾರ ಕಾನೂನು ಉಲ್ಲಂಘಿಸಿ ಸಂಪುಟ ತೀರ್ಮಾನ ಕೈಗೊಂಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, “ನಾವು ಏನು ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತೇವೆ. ಕಾನೂನು ಅಭಿಪ್ರಾಯ ಪಡೆದುಕೊಳ್ಳುತ್ತೇವೆ. ಎಲ್ಲವನ್ನೂ ಮರುಪರಿಶೀಲನೆ ಮಾಡುತ್ತಿದ್ದೇವೆ. ಕಾನೂನು ಬಿಟ್ಟು ಏನನ್ನೂ ಮಾಡುವುದಿಲ್ಲ. ಕಾನೂನು ಉಲ್ಲಂಘನೆಯಾಗಿದ್ದರೆ ಕೋರ್ಟ್ ಇದೆ, ಹೋರಾಟ ಮಾಡಲಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ನೈಸ್ ಯೋಜನೆಯಿಂದ ರೈತರು ತಮ್ಮ ಆಸ್ತಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ರಕ್ಷಿಸುವುದು ಸರ್ಕಾರದ ಜವಾಬ್ದಾರಿ ಎಂದು ಶಿವಕುಮಾರ್ ಹೇಳಿದರು. ಹಿಂದಿನ ಸರ್ಕಾರಗಳು ಒಪ್ಪಂದಗಳಿಗೆ ಸಹಿ ಮಾಡಿ ಕೊಟ್ಟಿವೆ. ರೈತರು ಆಸ್ತಿ ಕಳೆದುಕೊಂಡಿದ್ದಾರೆ. ಅವರನ್ನು ರಕ್ಷಣೆ ಮಾಡಬೇಕು. ನನಗೂ ಪ್ರಜ್ಞೆ ಇದೆ. ಮನುಷ್ಯ ವಿದ್ಯಾವಂತನಾಗಿರದಿದ್ದರೂ ಬುದ್ಧಿವಂತನಾಗಿರಬೇಕು, ಸಾಮಾನ್ಯ ಪ್ರಜ್ಞೆ ಇರಬೇಕು ಎಂದು ಹೇಳಿದರು.‌

ಇದನ್ನೂ ಓದಿ: ರೈತರಿಗೆ ನಿವೇಶನ ಹಂಚಿಕೆ, ನೈಸ್ ಅಕ್ರಮದ ಸಕ್ರಮ ಪ್ರಯತ್ನ; ಕೆಪಿಆರ್‌ಎಸ್‌ ಆಪಾದನೆ

ಇದೇ ವೇಳೆ ರಾಜ್ಯದಲ್ಲಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ವೈಜ್ಞಾನಿಕ ಹಾಗೂ ತಾಂತ್ರಿಕ ವರದಿಗಳ ಆಧಾರದಲ್ಲಿ ಹಂತ ಹಂತವಾಗಿ ಇನ್ನಷ್ಟು ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗುವುದು. ಹಲವು ತಾಲೂಕುಗಳಿಂದ ಬರದ ವರದಿಗಳು ಬರುತ್ತಿವೆ. ಇನ್ನೂ ಬಹಳ ತಾಲೂಕುಗಳು ಘೋಷಣೆಯಾಗುತ್ತವೆ. ಹಲವು ಕಡೆ ಭೀಕರ ಬರ ಇದೆ. 21 ದಿನ ಮಳೆಯಾಗದ ಸ್ಥಳಗಳನ್ನು ಗುರುತಿಸಿ, ತಾಂತ್ರಿಕ ವರದಿ ಆಧರಿಸಿ ತೀರ್ಮಾನ ಮಾಡಲಾಗುವುದು ಎಂದರು.

ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿರುವ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳ ಕುರಿತು ಚರ್ಚಿಸಲು ವಿಶೇಷ ವಿಧಾನಸಭೆ ಅಧಿವೇಶನ ಕರೆಯಲಾಗಿದೆ. ಬರಪೀಡಿತ ಪ್ರದೇಶಗಳ ವಾಸ್ತವ ಸ್ಥಿತಿಯನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ರೈತರಿಗೆ ಅಗತ್ಯ ನೆರವು ಒದಗಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ವರ್ಷಗಳ ಬಳಿಕ ಮಗನೊಂದಿಗೆ ಮ್ಯಾನ್ಮಾರ್‌ ನಾಯಕಿ ಆಂಗ್ ಸಾನ್ ಸೂ ಕಿ ಮಾತು; ಯಾರೀ ʼಶಾಂತಿʼ ದೂತೆ?

ಮ್ಯಾನ್ಮಾರ್‌ನ ಪ್ರಜಾಪ್ರಭುತ್ವದ ಧೀಮಂತ ನಾಯಕಿ ಹಾಗೂ ನೋಬೆಲ್ ಶಾಂತಿ ಪ್ರಶಸ್ತಿ ವಿಜೇತೆ...

WhatsApp ‘ಎಐ’ ಗುಟ್ಟು ರಟ್ಟು: ಬಳಕೆದಾರರಿಂದ ಬಚ್ಚಿಡಲಾಗಿದ್ದ ರಹಸ್ಯ ಸೂಚನೆಗಳು ಬಯಲು

WhatsApp ತನ್ನ ಎಐ (AI) ಚಾಟ್‌ಬಾಟ್‌ಗೆ ನೀಡಿದ್ದ ರಹಸ್ಯ ಸೂಚನೆಗಳು ಆಕಸ್ಮಿಕವಾಗಿ...

ಮಧುಮೇಹಿಗಳಿಗೆ ಸಿಹಿಸುದ್ದಿ: ಇನ್ಸುಲಿನ್, ಮಾತ್ರೆಗಳ ಹಂಗಿಲ್ಲದೆ ‘ಶುಗರ್’ ನಿಯಂತ್ರಿಸುವ ಹೊಸ ಸಾಧನ!

ಇನ್ಸುಲಿನ್ ಮತ್ತು ನಿರಂತರ ಮಾತ್ರೆಗಳ ಹಂಗಿಲ್ಲದೆ ಮಧುಮೇಹವನ್ನು (ಸಕ್ಕರೆ ಕಾಯಿಲೆ) ಪರಿಣಾಮಕಾರಿಯಾಗಿ...

ಶಾಂತಿ ಮಾತುಕತೆ ಬೆನ್ನಲ್ಲೇ ಕೀವ್ ಮೇಲೆ ರಷ್ಯಾ ಕ್ಷಿಪಣಿ ದಾಳಿ; 2 ಸಾವು, 34 ಮಂದಿಗೆ ಗಾಯ

ಉಕ್ರೇನ್‌ನಲ್ಲಿ ಶಾಂತಿ ಸ್ಥಾಪಿಸುವ ಕುರಿತು ಅಮೆರಿಕದ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆದ ಕೆಲವೇ...