ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ

Date:

ರಾಜ್ಯದಲ್ಲಿ ಮಳೆ ಕೊರತೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ, ಕುಡಿಯುವ ನೀರಿನ ಪರೀಕ್ಷೆ ಮಾಡಿ ಸನ್ನದ್ಧ ಸ್ಥಿತಿಯಲ್ಲಿರುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕಾರ್ಯದರ್ಶಿಗಳಿಗೆ ಈ ಸಂಬಂಧ ಲಿಖಿತ ಸೂಚನೆ ನೀಡಿರುವ ಅವರು, ಜೂನ್ ಮಧ್ಯಭಾಗದ ಹೊತ್ತಿಗೆ ರಾಜ್ಯದಲ್ಲಿ ವಾಡಿಕೆಯಂತೆ ಆಗಬೇಕಿದ್ದ ಮಳೆ ಆಗಿಲ್ಲ, ಎಲ್ ನಿನೋ ಪ್ರಭಾವದಿಂದಾಗಿ ಮುಂಗಾರು ಮಳೆ ಕೊರತೆ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಈ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

ದೇವರು, ಪುರಾಣ, ಕರ್ಮಕಾಂಡಗಳು ಮನುಷ್ಯನನ್ನು ಗುಲಾಮನನ್ನಾಗಿ ಮಾಡುತ್ತವೆಂದು ಹೇಳಿದ...

ಪೆರಿಯಾರ್ ದೇವರನ್ನು ವಿರೋಧಿಸಿದ್ದು ದೇವರ ಮೇಲಿನ ದ್ವೇಷಕ್ಕಲ್ಲ; ಬದಲಿಗೆ ದೇವರ ಹೆಸರಿನಲ್ಲಿ ನಡೆಯುವ ಮೋಸ, ಶೋಷಣೆಯ ವಿರುದ್ಧ. ಅವರು ಮುಖ್ಯಮಂತ್ರಿ ಸ್ಥಾನವನ್ನು ತಿರಸ್ಕರಿಸಿದರು. ಜೀವನಪೂರ್ತಿ ಯಾವುದೇ ಅಧಿಕಾರದ ಕುರ್ಚಿಯನ್ನೂ ಏರಲಿಲ್ಲ. ಪ್ರತಿಯೊಬ್ಬ ಮನುಷ್ಯನಿಗೂ...

ʼಕ್ಯಾಷ್‌ಲೆಸ್‌ ಎಕಾನಮಿʼ ಹೆಸರಲ್ಲಿ ಸುಲಿಗೆ; ನೋಟು ಬ್ಯಾನ್‌ನಿಂದ UPI...

ಈ ಅಸಮರ್ಪಕ ಆರ್ಥಿಕ ಹೊಡೆತದ ವಿರುದ್ಧ ‘ಭಾರತೀಯ ಚಿಲ್ಲರೆ ವ್ಯಾಪಾರಿಗಳ ಸಂಘ’ (Retailers Association of India - RAI) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಕೇಂದ್ರದ ಈ ನಡೆ ಡಿಜಿಟಲ್ ಆರ್ಥಿಕತೆಯನ್ನು ನುಚ್ಚುನೂರು...

ಈ ಬಾರಿ ರಾಜ್ಯದಲ್ಲಿ ಮಳೆಯ ಸರಾಸರಿ ಪ್ರಮಾಣ ಮತ್ತು ಸರಾಸರಿ ಮಳೆಯ ಅವಧಿ ಕಡಿಮೆ ಆಗುವ ಭೀತಿ ಎದುರಾಗಿದ್ದು, ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರುವ ಅಪಾಯವೂ ಇದೆ. ಈ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯ್ತಿ ಮಟ್ಟದಲ್ಲಿ ಹಾಲಿ ನೀರು ಪೂರೈಕೆ ಮಾಡುತ್ತಿರುವ ಜಲ ಮೂಲಗಳ ಜೊತೆಗೆ ಪರ್ಯಾಯ ಜಲ ಮೂಲಗಳನ್ನು ಗುರುತಿಸಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗದಂತೆ ಕ್ರಮ ವಹಿಸುವ ಅಗತ್ಯ ಮನಗಾಣಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಮೂವರು ಮಕ್ಕಳ ಮದುವೆ, ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳುವೆ : ಶಾಸಕ ಪ್ರಭು ಚವ್ಹಾಣ

ಈ ಸಂಬಂಧ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಖಾಸಗಿ ತೆರೆದ ಬಾವಿ, ಕೊಳವೆ ಬಾವಿಗಳನ್ನು ಗುರುತಿಸಿ, ಆ ಬಾವಿಗಳ ನೀರಿನ ಪ್ರಮಾಣ, ಲಭ್ಯತೆ ಖಚಿತಪಡಿಸಿಕೊಂಡು ನೀರು ಕುಡಿಯಲು ಯೋಗ್ಯವಾಗಿದೆಯೇ ಇಲ್ಲವೇ ಎಂಬ ಬಗ್ಗೆ ಪರೀಕ್ಷೆ ನಡೆಸಿ, ಅಂತಹ ಖಾಸಗಿ ಜಲ ಮೂಲಗಳ ಮಾಲೀಕರೊಂದಿಗೆ ಮಾತನಾಡಿ, ಅಗತ್ಯ ಬಿದ್ದಲ್ಲಿ ನೀರು ಬಳಕೆ ಮಾಡುವ ಬಗ್ಗೆ ನಿಯಮಾನುಸಾರ ಒಡಂಬಡಿಕೆ ಮಾಡಿಕೊಂಡು ಸನ್ನದ್ಧ ಸ್ಥಿತಿಯಲ್ಲಿರುವಂತೆ ಅವರು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ್ತೂರಿ ರಂಗನ್ ವರದಿ: ಸಿಎಂಗೆ ಮನವಿ ಸಲ್ಲಿಸಲು ಪಕ್ಷ, ಸಂಘಟನೆಗಳಿಗೆ ಅವಕಾಶವಿದೆ; ಟಿ.ಡಿ ರಾಜೇಗೌಡ 

ಕಸ್ತೂರಿರಂಗನ್ ವರದಿ ಕುರಿತು ತಮ್ಮ ಅಭಿಪ್ರಾಯ, ಆಕ್ಷೇಪಣೆ ಹಾಗೂ ಬೇಡಿಕೆಗಳನ್ನು ಮುಖ್ಯಮಂತ್ರಿ...

ದವಡೆ ಜಜ್ಜಿಸಿಕೊಂಡ ಆಪರೇಷನ್ ಎಪಿಕ್ ಫ್ಯೂರಿ: ಇರಾನ್ ಕಾಳಗದಲ್ಲಿ ಅಮೆರಿಕಕ್ಕೆ ಆದ ನಷ್ಟಗಳೇನೇನು?

ಬೃಹತ್ ಮೊತ್ತದ ಬಜೆಟ್, ದುಬಾರಿ ಬೆಲೆಯ ಯುದ್ಧ ವಿಮಾನಗಳು ಮತ್ತು ಅತ್ಯಾಧುನಿಕ...

ಅಪೌಷ್ಟಿಕತೆಯ ನೆರಳಲ್ಲಿ ಕಲ್ಯಾಣ ಕರ್ನಾಟಕ; ರಾಯಚೂರಿನ ಶೇ. 49.5 ಮಕ್ಕಳಲ್ಲಿ ಪೋಷಕಾಂಶದ ಕೊರತೆ

ಇತ್ತೀಚಿನ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS 2023–24) ಕಲ್ಯಾಣ ಕರ್ನಾಟಕ...

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...