ನಕಲಿ ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ: ಈಶ್ವರ ಖಂಡ್ರೆ

Date:

ನಕಲಿ ಮತ್ತು ಸುಳ್ಳು ದಾಖಲೆ ಸೃಷ್ಟಿಸಿ ಅರಣ್ಯ ಭೂಮಿ ಕಬಳಿಸಲು ಪ್ರಯತ್ನಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ, ಕಾನೂನು ಕ್ರಮ ಜರುಗಿಸಿ, ಶಿಕ್ಷೆ ಆಗುವಂತೆ ನೋಡಿಕೊಳ್ಳಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಉನ್ನತಾಧಿಕಾರಿಗಳಿಗೆ ಸೂಚಿಸಿದ್ದಾರೆ.

- Advertisement -

ಬೆಲೆಬಾಳುವ ಅರಣ್ಯ ಭೂಮಿ ಕಬಳಿಕೆ ಪ್ರಯತ್ನಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಮ್ಮ ಕಚೇರಿಯಲ್ಲಿಂದು ಹಿರಿಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಬೆಂಗಳೂರು ಕೆಂಗೇರಿ ಬಳಿಯ ಬಿ.ಎಂ. ಕಾವಲು ಕಾಯ್ದಿಟ್ಟ ಅರಣ್ಯ ವ್ಯಾಪ್ತಿಯ ಸುಮಾರು 25 ಸಾವಿರ ಕೋಟಿ ರೂ. ಬೆಲೆಬಾಳುವ ಸುಮಾರು 482 ಎಕರೆ ಮೀಸಲು ಅರಣ್ಯ ಭೂಮಿ ರಕ್ಷಣೆಗೆ ಮೇಲ್ಮನವಿ ಸಲ್ಲಿಸುವಂತೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಎಂ.ಬಿ. ನೇಮಣ್ಣ ಗೌಡ ಎನ್ನುವವರು 2025ರ ಆಗಸ್ಟ್ 13ರಂದು ಹೈಕೋರ್ಟ್ ಗೆ ಅರ್ಜಿ ಹಾಕಿದ್ದು, 17 ದಿನಗಳಲ್ಲಿ ಅಂದರೆ ಆಗಸ್ಟ್ 30ರಂದು ಉಚ್ಛ ನ್ಯಾಯಾಲಯ ಆದೇಶ ನೀಡಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಈ ತೀರ್ಪನ್ನು ಪ್ರಶ್ನಿಸಿ ಕೂಡಲೇ ಮೇಲ್ಮನವಿ ಸಲ್ಲಿಸಬೇಕು ಎಂದು ಸೂಚಿಸಿದರು.

ಹಾಸನ ವಿಭಾಗದ ಇನಾಂ ರದ್ದು ಕುರಿತ ನ್ಯಾಯಾಲಯದ ವಿಶೇಷ ಜಿಲ್ಲಾಧಿಕಾರಿಯವರು ಬೆಂಗಳೂರು ಬಿ.ಎಂ.ಕಾವಲು ಅರಣ್ಯ ಭೂಮಿಯನ್ನು 1974ರಲ್ಲಿ ತಮಗೆ 532 ಎಕರೆ ಮಂಜೂರು ಮಾಡಿರುತ್ತಾರೆಂದು ದಾಖಲೆ ಸಲ್ಲಿಸಿ ಆದೇಶ ಪಡೆದಿದ್ದಾರೆ. ಆದರೆ ಈ ಭೂಮಿ 1933ರಲ್ಲಿ ಸೆಕ್ಷನ್ 4 ಆಗಿ, 1935ರಲ್ಲಿ ಕಾಯ್ಡಿಟ್ಟ ಅರಣ್ಯ ಎಂದು ಅಧಿಸೂಚನೆಯಾಗಿದೆ. ಬೆಂಗಳೂರಿನ ಅಧಿಸೂಚಿತ ಅರಣ್ಯ ಭೂಮಿಯನ್ನು ಹಾಸನ ವಿಶೇಷ ಜಿಲ್ಲಾಧಿಕಾರಿ ಹೇಗೆ ಮಂಜೂರು ಮಾಡುತ್ತಾರೆ. ಮಿಗಿಲಾಗಿ 532 ಎಕರೆಯನ್ನು ಮಂಜೂರು ಮಾಡಲು ಕಾನೂನಿನಲ್ಲಿ ಅವಕಾಶ ಇದೆಯೇ, ಭೂ ಪರಿಮಿತಿ ಕಾಯ್ದೆ ಅನ್ವಯಿಸುವುದಿಲ್ಲವೇ ಈ ಎಲ್ಲ ಅಂಶವನ್ನು ನ್ಯಾಯಾಲಯದ ಗಮನಕ್ಕೆ ತಂದು ಸಮರ್ಥವಾಗಿ ವಾದ ಮಂಡಿಸುವಂತೆ ತಿಳಿಸಿದರು.

ಇಲಾಖೆಗೆ ವಕೀಲರನ್ನು ನೇಮಿಸಲು ಸೂಚನೆ: ಸರ್ಕಾರದ ಅಭಿಯೋಜಕರು ಕೊನೆ ಕ್ಷಣದವರೆಗೂ ಈ ಪ್ರಕರಣದಲ್ಲಿ ಮಾಹಿತಿ ನೀಡದೆ ಇರುವ ಬಗ್ಗೆಯೂ ಅಸಮಾಧಾನ ವ್ಯಕ್ತಪಡಿಸಿದ ಅವರು, ಕೆಲವು ಅರ್ಹ ಪ್ರಕರಣದಲ್ಲೂ ಮೇಲ್ಮನವಿಗೆ ಸೂಕ್ತ ಪ್ರಕರಣ ಅಲ್ಲ ಎಂದು ಸರ್ಕಾರಿ ವಕೀಲರು ಅಭಿಪ್ರಾಯ ವ್ಯಕ್ತಪಡಿಸುತ್ತಿರುವ ಬಗ್ಗೆಯೂ ತೀವ್ರ ಬೇಸರ ವ್ಯಕ್ತಪಡಿಸಿದರು.

ಅರಣ್ಯ ಭೂಮಿ ಕಬಳಿಕೆ ಮತ್ತು ಒತ್ತುವರಿ ಪ್ರಕರಣಗಳಲ್ಲಿ, ಸಮರ್ಥ ವಕೀಲರನ್ನು ನೇಮಕ ಮಾಡಲು ಮತ್ತು ಪರಿಣಾಮಕಾರಿಯಾಗಿ ವಾದ ಮಂಡಿಸುವಂತೆ ಸರ್ಕಾರಿ ಅಭಿಯೋಜಕರುಗಳಿಗೆ ಮತ್ತು ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರಿಗೆ ಸೂಚಿಸಲು ಸಭೆಯಲ್ಲಿ ಹಾಜರಿದ್ದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರಿಗೆ ತಿಳಿಸಿದರು.
ಅರಣ್ಯ ಒತ್ತುವರಿ ಪ್ರಕರಣ ಹೆಚ್ಚಿರುವ 6-7 ಜಿಲ್ಲೆಗಳಲ್ಲಿ ಇಲಾಖೆಯಿಂದಲೇ ಪ್ರತ್ಯೇಕವಾಗಿ ವಕೀಲರನ್ನು ನೇಮಕ ಮಾಡಿಕೊಂಡು, ಅವರೊಂದಿಗೆ ವಾರಕ್ಕೊಮ್ಮೆ ಸಭೆ ನಡೆಸಿ, ಪ್ರಗತಿ ತಿಳಿಯುವುದು ಅಗತ್ಯವಾಗಿದೆ. ಹೀಗಾಗಿ ವಕೀಲರ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಈ ಪ್ರಕರಣದಲ್ಲಿ ಅರಣ್ಯ ಭೂಮಿ ಕಬಳಿಸಲು ದೊಡ್ಡ ಹುನ್ನಾರವೇ ನಡೆದಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ. ಈ ಹಿಂದೆ ಇದೇ ವ್ಯಕ್ತಿ ಸೇರಿದಂತೆ ಕೆಲವರು ಸಲ್ಲಿಸಿದ್ದ ಮೇಲ್ಮನವಿ ಸಂಬಂಧ ವಿಚಾರಣೆ ನಡೆಸಿದ್ದ ಮೂಡಿಗೆರೆಯ ಉಪ ವಿಭಾಗಾಧಿಕಾರಿಗಳು ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಸುವವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗೆ ಸೂಚಿಸಿದ್ದಾರೆ. ಆದರೂ ವಿಳಂಬ ಮಾಡಿರುವ ಅರಣ್ಯಾಧಿಕಾರಿಗಳ ವಿರುದ್ಧವೂ ಕ್ರಮಕ್ಕೆ ಸೂಚಿಸಿದರು. ಅರಣ್ಯ ಭೂಮಿ ಕಬಳಿಸುವವರ ಮತ್ತು ಸಹಕಾರ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಈಶ್ವರ ಖಂಡ್ರೆ ಸೂಚಿಸಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ ಮತ್ತಿತರರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ.  ಇನ್ನೂ...

ಕೆಪಿಎಸ್‌ಸಿ ಪರೀಕ್ಷಾ ಅಕ್ರಮದ ಆರೋಪಿ ಬಸವರಾಜ್ ಕಿನ್ನಾಳೆ RSS ಪಥಸಂಚಲನದ ಫೋಟೊ ವೈರಲ್

ಕೆಪಿಎಸ್‌ಸಿ ಪರೀಕ್ಷಾ ಅಕ್ರಮ ಪ್ರಕರಣದಲ್ಲಿ ಸಿಐಡಿಯಿಂದ ಬಂಧನಕ್ಕೊಳಗಾಗಿ, ಮಧ್ಯಂತರ ಜಾಮೀನಿನ ಮೇಲೆ...

‘ಎಸ್ಐಆರ್’ ವಿರುದ್ಧ ಸಿಡಿದೆದ್ದ ರೈತ-ದಲಿತ ಸಂಘಟನೆಗಳು: ಅ.23ರಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ

ದೇಶದಲ್ಲಿ ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳನ್ನು...