ನಟ ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

Date:

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ, ಪವಿತ್ರಾ ಗೌಡ ಸೇರಿ 11 ಮಂದಿಯ ಜಾಮೀನು ಅರ್ಜಿಗಳ ವಿಚಾರಣೆಯನ್ನು ಬೆಂಗಳೂರಿನ ಸತ್ರ ನ್ಯಾಯಾಲಯ ಬುಧವಾರಕ್ಕೆ ಮುಂದೂಡಿತು.

- Advertisement -

ನ್ಯಾಯಾಧೀಶರಾದ ಜೈಶಂಕರ್‌ ವಿಚಾರಣೆ ನಡೆಸಿದ್ದು, ದರ್ಶನ್‌ ಹೊರತುಪಡಿಸಿ ಉಳಿದ ಆರೋಪಿಗಳ ಪರ ವಕೀಲರು ವಾದ ಮಂಡಿಸಿದರು. ಆ ಬಳಿಕ ವಿಶೇಷ ಸರ್ಕಾರಿ ಅಭಿಯೋಜಕರಾದ ಪಿ. ಪ್ರಸನ್ನಕುಮಾರ್‌ ವಾದ ಮಂಡಿಸಿದರು. ಆ ಬಳಿಕ ಕೋರ್ಟ್‌ ತೀರ್ಪನ್ನು ಕಾಯ್ದಿರಿಸಿ ವಿಚಾರಣೆಯನ್ನು ಬುಧವಾರಕ್ಕೆ (ಅಕ್ಟೋಬರ್‌ 9) ಮುಂದೂಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಕ್ಟೋಬರ್ ಮೂರು, ನಾಲ್ಕು, ಐದರಂದು ನಡೆದ ವಿಚಾರಣೆಯಲ್ಲಿ ದರ್ಶನ್ ಪರ ಹಿರಿಯ ವಕೀಲರಾದ ಸಿವಿ ನಾಗೇಶ್, ಪವಿತ್ರಾ ಪರ ವಕೀಲರು ತನಿಖೆಯಲ್ಲಿ ಹಲವು ಲೋಪದೋಷಗಳಿವೆ ಎಂದಿದ್ದರು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ಅವರು, ಪೊಲೀಸರೇ ಸಾಕ್ಷ್ಯಗಳನ್ನು ಸೃಷ್ಟಿಮಾಡಿದ್ದಾರೆ, ಕತೆ ಹೆಣೆದಿದ್ದಾರೆ ಎಂದು ಟೀಕೆ ಮಾಡಿದ್ದರು. ಪೊಲೀಸರು ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಅರೇಬಿಯನ್ ನೈಟ್ಸ್ ಕತೆಗೆ ಹೋಲಿಕೆ ಮಾಡಿದ್ದರು.

ಇಂದು ವಾದ ಮಂಡಿಸಿದ ಎಸ್​ಪಿಪಿ ಪ್ರಸನ್ನ ಕುಮಾರ್, ಆರೋಪಿಗಳ ಪರ ವಕೀಲರು ಎತ್ತಿರುವ ಪ್ರತಿ ಪ್ರಶ್ನೆಗೂ ಸಹ ಉತ್ತರ ಇದೆ ಎಂದು ಹೇಳಿಯೇ ವಾದ ಆರಂಭಿಸಿದರು. ಸಿವಿ ನಾಗೇಶ್ ಅವರು ಪ್ರಶ್ನೆ ಮಾಡಿದ್ದ, ಎತ್ತಿ ತೋರಿಸಿದ್ದ ಲೋಪದೋಷಗಳಿಗೆ ಬಹುತೇಕ ಉತ್ತರಗಳನ್ನು ಸ್ಪಷ್ಟತೆಯನ್ನು ಎಸ್​ಪಿಪಿ ನೀಡಿದರು. ಮಾತ್ರವಲ್ಲದೆ, ದರ್ಶನ್ ಹಾಗೂ ಅವರ ತಂಡ ರೇಣುಕಾ ಸ್ವಾಮಿ ಮೇಲೆ ಹಲ್ಲೆ ಮಾಡಿದ ರೀತಿ, ಆ ನಂತರ ನಡೆದ ಘಟನೆಗಳು, ಪ್ರತ್ಯಕ್ಷದರ್ಶಿಗಳು ನೀಡಿರುವ ಹೇಳಿಕೆ ಎಲ್ಲವನ್ನೂ ಉಲ್ಲೇಖಿಸಿ, ‘ಇದು ದರ್ಶನ್ ರಕ್ತಚರಿತ್ರೆ’ ಎಂದು ಟೀಕೆ ಮಾಡಿದರು.

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್, ಪವಿತ್ರಾ ಹಾಗೂ ಇತರ ಆರೋಪಿಗಳ ಬಂಧನವಾಗಿ ನಾಲ್ಕು ತಿಂಗಳಾಗಿದೆ. ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದ ನಾಲ್ಕು ಮಂದಿಗೆ ಈಗಾಗಲೇ ಜಾಮೀನು ದೊರೆತಿದೆ. ದರ್ಶನ್​ರ ಜಾಮೀನಿಗಾಗಿ ವಕೀಲ ಸಿ ವಿ ನಾಗೇಶ್ ವಾದ ಮಂಡಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...