ಅಡ್ಡಂಡ ಕಾರ್ಯಪ್ಪರ ‘ಗಾಂಧಿ ಹತ್ಯೆಯ ಸತ್ಯ’ ನಾಟಕ, ಪುಸ್ತಕ ನಿಷೇಧಕ್ಕೆ ಆಗ್ರಹ

Date:

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದಂತೆ ಅಡ್ಡಂಡ ಕಾರ್ಯಪ್ಪ ಅವರು ರಚಿಸಿರುವ “ಗಾಂಧಿ ಹತ್ಯೆಯ ಸತ್ಯ (The Truth Behind Gandhi’s Assassination)” ಎಂಬ ನಾಟಕ ಮತ್ತು ಪುಸ್ತಕದ ಪ್ರದರ್ಶನ ಹಾಗೂ ಪ್ರಸರಣಕ್ಕೆ ನಿಷೇಧ ಹೇರುವಂತೆ ಒತ್ತಾಯಿಸಿ, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯ ಅಧ್ಯಕ್ಷರಾದ ಶರಣಪ್ಪ ಸಲಾದಪುರ ಅವರು ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ, ನಾಡೋಜ ಗೌರವ ಪದವಿ ವಿಜೇತ ಡಾ. ವೂಡೇ ಪಿ. ಕೃಷ್ಣ ಅವರಿಗೆ ಅಧಿಕೃತವಾಗಿ ಮನವಿ ಸಲ್ಲಿಸಿದ್ದಾರೆ.

- Advertisement -

ಮಹಾತ್ಮ ಗಾಂಧೀಜಿಯವರು ಸತ್ಯ, ಅಹಿಂಸೆ, ಶಾಂತಿ, ಸರ್ವಧರ್ಮ ಸಮನ್ವಯ ಮತ್ತು ಮಾನವೀಯ ಮೌಲ್ಯಗಳ ಮೂಲಕ ಜಗತ್ತಿಗೆ ಮಾರ್ಗದರ್ಶನ ನೀಡಿದ ಮಹಾನ್ ನಾಯಕರು ಎಂದು ಪತ್ರದಲ್ಲಿ ಸ್ಮರಿಸಲಾಗಿದೆ. ಗಾಂಧೀಜಿಯವರ ಹತ್ಯೆಗೆ ಸಂಬಂಧಿಸಿದ ಐತಿಹಾಸಿಕ ಘಟನೆಗಳ ಕುರಿತು ತಪ್ಪು ತಿಳಿವಳಿಕೆ ಮೂಡಿಸುವ ಅಥವಾ ಇತಿಹಾಸವನ್ನು ವಿಕೃತಗೊಳಿಸುವ ಅಂಶಗಳು ಕೃತಿಯಲ್ಲವೆಯೇ ಎಂಬುದನ್ನು ಗಂಭೀರವಾಗಿ ಪರಿಶೀಲಿಸಬೇಕಾದ ಅಗತ್ಯವಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್...

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ. ಏಕೆಂದರೆ ಮಾರುಕಟ್ಟೆಯಲ್ಲಿ ಈಗ ಮಾರಾಟವಾಗುತ್ತಿರುವ ಅಕ್ಕಿ ಬಹುತೇಕ ಹಿಂದಿನ ಬೆಳೆ ವರ್ಷಗಳಲ್ಲಿ ಉತ್ಪಾದನೆಯಾಗಿ ಸಂಗ್ರಹಿಸಲ್ಪಟ್ಟಿರುವ ಅಕ್ಕಿ. ಪ್ರಸಕ್ತ...

ಬಡವರ ನಿವೇಶನಗಳ ಮೇಲೆ ಕೆಎಐಡಿಬಿ ಕರಿ ನೆರಳು: ಸೂರು...

ಮಂಗಳೂರಿನ ಪ್ರವಾಸೋದ್ಯಮಕ್ಕೆ ಹೊಸ ಮೆರುಗನ್ನು ನೀಡಿರುವುದೇ ತಣ್ಣೀರುಬಾವಿ ಸಮುದ್ರ ತೀರ. ಈ ಸಮುದ್ರ ತೀರ ಇತ್ತೀಚಿನ ದಿನಗಳಲ್ಲಿ ತನ್ನ ಸೌಂದರ್ಯದಿಂದ ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತಿದೆ. ವಿಭಿನ್ನ ಶೈಲಿಯ ಮನರಂಜನೆಗೆ ಹೆಸರುವಾಸಿಯಾಗಿರುವ ತಣ್ಣೀರುಬಾವಿ ಬೀಚ್...

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ಇದನ್ನೂ ಓದಿ: ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಭಿನ್ನಾಭಿಪ್ರಾಯ ವ್ಯಕ್ತಪಡಿಸುವ ಸ್ವಾತಂತ್ರ್ಯವಿದ್ದರೂ, ನ್ಯಾಯಾಲಯದ ದಾಖಲೆಗಳು, ಐತಿಹಾಸಿಕ ಸಾಕ್ಷ್ಯಗಳು ಮತ್ತು ಅಧಿಕೃತ ದಾಖಲೆಗಳ ಆಧಾರದ ಮೇಲೆಯೇ ಇಂತಹ ಕೃತಿಗಳನ್ನು ಪರಿಶೀಲಿಸಬೇಕು ಎಂದು ಅಭಿಪ್ರಾಯಪಡಲಾಗಿದೆ.

ಅಡ್ಡಂಡ ಕಾರ್ಯಪ್ಪ ಅವರ ಈ ನಾಟಕ ಮತ್ತು ಪುಸ್ತಕದ ವಿಷಯವನ್ನು ಇತಿಹಾಸಕಾರರು, ತಜ್ಞರ ಸಮಿತಿಯಿಂದ ಪರಿಶೀಲಿಸಬೇಕು. ಐತಿಹಾಸಿಕ ದಾಖಲೆಗಳಿಗೆ ವಿರುದ್ಧವಾದ ಅಥವಾ ತಪ್ಪು ಮಾಹಿತಿ ನೀಡುವ ಅಂಶಗಳು ಕಂಡುಬಂದಲ್ಲಿ ಸೂಕ್ತ ಕ್ರಮಕ್ಕೆ ಮುಂದಾಗಬೇಕು ಎಂದು ಮನವಿದಾರರು ಆಗ್ರಹಿಸಿದ್ದಾರೆ.

ಈ ನಾಟಕದ ಪ್ರದರ್ಶನ ಮತ್ತು ಪುಸ್ತಕದ ಪ್ರಸರಣವನ್ನು ಕಾನೂನುಬದ್ಧವಾಗಿ ನಿಷೇಧಿಸುವಂತೆ ಸಂಬಂಧಪಟ್ಟ ಸರ್ಕಾರ ಹಾಗೂ ಪ್ರಾಧಿಕಾರಗಳಿಗೆ ಮನವಿ ಸಲ್ಲಿಸಬೇಕು. ಗಾಂಧೀಜಿಯವರ ಜೀವನ, ಸ್ವಾತಂತ್ರ್ಯ ಹೋರಾಟ, ಹತ್ಯೆ ಹಾಗೂ ಅವರ ವಿಚಾರಧಾರೆಗಳ ಕುರಿತು ಜನರಲ್ಲಿ ಐತಿಹಾಸಿಕ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ ಮತ್ತು ಸೌಹಾರ್ದತೆಯ ಸಂದೇಶವನ್ನು ಮುಂದಿನ ಪೀಳಿಗೆಗೆ ತಲುಪಿಸುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ವಿನಂತಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಬಸ್ ಪ್ರಯಾಣ, ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ರಾಜ್ಯ ಕಾಂಗ್ರೆಸ್ ಸರ್ಕಾರ ಬಸ್ ಪ್ರಯಾಣ ದರ ಹಾಗೂ ಹಾಲಿನ ದರ...

ಸಿಬಿಎಸ್‌ಇ 10 ಮತ್ತು 12ನೇ ತರಗತಿ ಪ್ರಾಯೋಗಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 2026-27ರ ಶೈಕ್ಷಣಿಕ ಸಾಲಿನ 10ನೇ...

ಜಾರ್ಜಿಯಾದಲ್ಲಿ ಜ್ಯೋತ್ ಸಿಂಗ್‌ಗೆ ಐತಿಹಾಸಿಕ ಜಯ: ಪ್ರತಿನಿಧಿ ಸಭೆಗೆ ಆಯ್ಕೆಯಾದ ಮೊದಲ ಸಿಖ್

ಅಮೆರಿಕದ ಜಾರ್ಜಿಯಾ ರಾಜ್ಯದ ಪ್ರತಿನಿಧಿ ಸಭೆಗೆ ಭಾರತೀಯ ಮೂಲದ ಜ್ಯೋತ್ ಸಿಂಗ್...

ಸಹ-ಆರೋಪಿಗಳು ಖುಲಾಸೆಯಾದಾಗ ಪ್ರತ್ಯೇಕ ಆರೋಪವಿಲ್ಲದೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗದು: ಸುಪ್ರೀಂ ಕೋರ್ಟ್

ಇತರೆ ಸಹ-ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಂದರ್ಭದಲ್ಲಿ, ಯಾವುದೇ ಪ್ರತ್ಯೇಕ ಅಥವಾ ಸ್ವತಂತ್ರ ಆರೋಪವಿಲ್ಲದೆ...