ಎಡಿಜಿಪಿ ಚಂದ್ರಶೇಖರ್–ಕುಮಾರಸ್ವಾಮಿ ಪ್ರಕರಣ: ಸಂಧಾನ ವಿಫಲ, ಆ. 20ಕ್ಕೆ ವಿಚಾರಣೆ

Date:

ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನಡುವಿನ ಕಾನೂನು ಸಮರಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಸಂಧಾನ ಯತ್ನವು ಅಂತಿಮವಾಗಿ ವಿಫಲವಾಗಿದೆ. ಹೀಗಾಗಿ, ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಆಗಸ್ಟ್ 20ಕ್ಕೆ ನಿಗದಿಪಡಿಸಿದೆ.

- Advertisement -

​ಎಡಿಜಿಪಿ ಚಂದ್ರಶೇಖರ್ ಅವರು ದಾಖಲಿಸಿದ್ದ ಬೆದರಿಕೆ ಪ್ರಕರಣವನ್ನು ಪರಸ್ಪರ ರಾಜಿ ಮೂಲಕ ಬಗೆಹರಿಸಿಕೊಳ್ಳುವಂತೆ ಹೈಕೋರ್ಟ್‌ ಈ ಹಿಂದೆ ಉಭಯ ಕಡೆಯವರಿಗೆ ಸಲಹೆ ನೀಡಿತ್ತು. ಈ ಪ್ರಕ್ರಿಯೆ ಸುಗಮವಾಗಿ ನಡೆಯಲಿ ಎಂಬ ಉದ್ದೇಶದಿಂದ ನ್ಯಾಯಾಲಯವು ಮಧ್ಯಸ್ಥಿಕೆದಾರರೊಬ್ಬರನ್ನೂ ನೇಮಕ ಮಾಡಿತ್ತು. ಆದರೆ, ಇಬ್ಬರ ನಡುವೆ ಹಲವು ಸುತ್ತಿನ ಮಾತುಕತೆಗಳು ನಡೆದರೂ ಯಾವುದೇ ಸಹಮತ ಮೂಡದ ಕಾರಣ, ಸಂಧಾನ ಪ್ರಕ್ರಿಯೆ ಮುರಿದುಬಿದ್ದಿದೆ ಎಂದು ತಿಳಿದುಬಂದಿದೆ. ಸಂಧಾನ ವಿಫಲವಾಗಿರುವುದರಿಂದ, ಪ್ರಕರಣವು ಇದೀಗ ಮರಳಿ ನ್ಯಾಯಪೀಠದ ಪರಿಶೀಲನೆಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಸಾಯಿ ಮಿನರಲ್ಸ್ ಕಂಪನಿಗೆ ನಿಯಮಗಳನ್ನು ಉಲ್ಲಂಘಿಸಿ ಗಣಿಗಾರಿಕೆ ಗುತ್ತಿಗೆ ಮಂಜೂರು ಮಾಡಿದ ಆರೋಪದಡಿ, ಎಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ (ಅಭಿಯೋಜನೆಗೆ) ಅನುಮತಿ ಕೋರಿ ಎಡಿಜಿಪಿ ಎಂ. ಚಂದ್ರಶೇಖರ್ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು.

​ಈ ಬೆಳವಣಿಗೆಯ ಬೆನ್ನಲ್ಲೇ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಶಾಸಕ ಸುರೇಶ್ ಬಾಬು ಅವರು ಮಾಧ್ಯಮಗಳ ಮುಂದೆ ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ, ಬೆದರಿಕೆ ಒಡ್ಡಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ಅವರು ಸಂಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

​ಈ ದೂರಿನ ಅನ್ವಯ, ಸರ್ಕಾರಿ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದಡಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 223 ಮತ್ತು 224ರ ಅನ್ವಯ ಎಚ್.ಡಿ. ಕುಮಾರಸ್ವಾಮಿ, ನಿಖಿಲ್ ಹಾಗೂ ಸುರೇಶ್ ಬಾಬು ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದರು.

​ತಮ್ಮ ವಿರುದ್ಧ ದಾಖಲಾಗಿರುವ ಈ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕುಮಾರಸ್ವಾಮಿ ಹಾಗೂ ಇತರ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಸೂಚಿಸಿದ್ದ ಸಂಧಾನ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ, ಅರ್ಜಿಯ ಮುಂದಿನ ವಿಚಾರಣೆಯು ಆಗಸ್ಟ್ 20ರಂದು ನಡೆಯಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ವಂದೇ ಮಾತರಂ’ ಹಾಡದಿದ್ದರೆ ಅಪರಾಧವಲ್ಲ, ಶಿಕ್ಷೆಯೂ ಇಲ್ಲ: ಸುಪ್ರೀಂ ಕೋರ್ಟ್

‘ವಂದೇ ಮಾತರಂ’ನ ಹಾಡುವುದು ಕಡ್ಡಾಯವಲ್ಲ. ಹಾಡದಿದ್ದ ಕಾರಣಕ್ಕೆ ಶಿಕ್ಷೆ ನೀಡಲಾಗುವುದಿಲ್ಲ ಎಂದು...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಜಗತ್ತಿನಲ್ಲೇ ಮೊದಲು: ಹಂದಿ ಮೂತ್ರಪಿಂಡದಿಂದ 9 ತಿಂಗಳು ಜೀವಿಸಿದ ವ್ಯಕ್ತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬೆಳವಣಿಗೆಯೊಂದು ನಡೆದಿದೆ. ತಳಿವಿಜ್ಞಾನದ (ಜೆನೆಟಿಕ್ಸ್‌) ಮೂಲಕ...

ಒಡಿಶಾದಲ್ಲೂ ಸಿಜೆಪಿ ‘ಸ್ಕೂಲ್ ಟೀಕ್ ಕರೋ’ ಅಭಿಯಾನ: ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ತನ್ನ 'ಸ್ಕೂಲ್ ಟೀಕ್ ಕರೋ' (ಶಾಲೆ ಸರಿಪಡಿಸಿ)...