ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ

Date:

ರಾಜ್ಯ ಸರ್ಕಾರದ ಎಲ್ಲಾ ನಾಗರಿಕ ಸೇವಾ ಹುದ್ದೆಗಳ ನೇಮಕಾತಿಯಲ್ಲಿ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಹಲವಾರು ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು ಸಲ್ಲಿಸಿದ ಮನವಿ ಪರಿಗಣಿಸಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಅನುಮೋದನೆಯೊಂದಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಪ್ರಕಟಿಸಿದೆ.

- Advertisement -

ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಜಾರಿಯಾಗುವವರೆಗೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅಥವಾ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸದಾಗಿ ಮುಂದಿನ ಆದೇಶದವರೆಗೂ ಯಾವುದೇ ಅಧಿಸೂಚನೆ ಹೊರಡಿಸಬಾರದೆಂದು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ನ್ಯಾಯಮೂರ್ತಿ ಹೆಚ್ ಎನ್ ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಅಗತ್ಯ ಮಾರ್ಪಾಡುಗಳೊಂದಿಗೆ ಅಂಗೀಕರಿಸಿ, ಪರಿಶಿಷ್ಟ ಜಾತಿಯಲ್ಲಿರುವ 101 ಜಾತಿಗಳನ್ನು 5 ಪ್ರವರ್ಗಗಳ ಬದಲಾಗಿ ಪ್ರವರ್ಗ-ಎ, ಪ್ರವರ್ಗ-ಬಿ ಮತ್ತು ಪ್ರವರ್ಗ-ಸಿ ಎಂದು 3 ಪ್ರವರ್ಗಗಳಾಗಿ ವರ್ಗೀಕರಿಸಿ, ಶಿಕ್ಷಣ ಮತ್ತು ಉದ್ಯೋಗದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಶೇಕಡ 17 ರಷ್ಟು ಮೀಸಲಾತಿಯನ್ನು ಪ್ರವರ್ಗ- ಎರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು, ಪ್ರವರ್ಗ-ಬಿ ರಲ್ಲಿನ ಸಮುದಾಯಗಳಿಗೆ ಶೇಕಡ 6 ರಷ್ಟು ಮತ್ತು ಪ್ರವರ್ಗ – ಸಿ ರಲ್ಲಿನ ಸಮುದಾಯಗಳಿಗೆ ಶೇಕಡ 5 ರಷ್ಟು ನಿಗದಿಪಡಿಸಿ, ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿರುತ್ತದೆ.

ಈ ಹಿಂದೆ ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆ ಬಯಸಿ ಅರ್ಜಿಗಳನ್ನು ಸಲ್ಲಿಸಿ ಭಾಗವಹಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಗೆ ಕ್ರಮವಾಗಿ 2 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಲಾಗಿತ್ತು.

ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 2 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿತ್ತು.

ಇದನ್ನೂ ಓದಿ: ಈ ದಿನ ಸಂಪಾದಕೀಯ | ಸಿನೆಮಾ ಟಿಕೆಟ್ ದರಗಳಿಗೆ ಸರ್ಕಾರಿ ಕಡಿವಾಣದ ಸಂಗತಿಯೇನು?

ಆದರೆ ಹಲವಾರು ಜನಪ್ರತಿನಿಧಿಗಳು ಮತ್ತು ಸಂಘ ಸಂಸ್ಥೆಗಳು ಮನವಿ ಸಲ್ಲಿಸಿ ರಾಜ್ಯ ಸಿವಿಲ್ ಸೇವೆಗಳಿಗೆ ಮಾಡುವ ನೇರ ನೇಮಕಾತಿಯಲ್ಲಿ ಗರಿಷ್ಠ ವಯೋಮಿತಿಯಲ್ಲಿ 5 ವರ್ಷಗಳ ಸಡಿಲಿಕೆಯನ್ನು ನೀಡುವಂತೆ ಕೋರಿದ್ದರು.

ಸದರಿ ಮನವಿಗಳನ್ನು ಪರಿಶೀಲಿಸಿ ಒಂದು ಬಾರಿಗೆ ಮಾತ್ರ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆ ನೀಡಲು ತೀರ್ಮಾನಿಸಿ, 2027ರ ಡಿಸೆಂಬರ್‌ 31ರವರೆಗೆ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿ ಹೊರಡಿಸುವ ಅಧಿಸೂಚನೆಗಳನ್ವಯ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಆಯಾಯ ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯಲ್ಲಿ ಒಂದು ಬಾರಿಯ ಕ್ರಮವಾಗಿ (as a one-time measure) 3 ವರ್ಷಗಳ ಸಡಿಲಿಕೆ ನೀಡಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, (ಸೇವಾ ನಿಯಮಗಳು) ಆದೇಶ ಹೊರಡಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

 ‘ಸ್ಟಿಂಗ್ ಆಪರೇಷನ್’ ಪ್ರಕರಣ: ತನಿಖೆಗೆ ಮೊಬೈಲ್ ನೀಡಲು ಕೃಪಾ ಆಳ್ವ ಹಿಂದೇಟು!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿದೆ ಎನ್ನಲಾದ ‘ಸ್ಟಿಂಗ್ ಆಪರೇಷನ್’...

ಓಲಾ, ಉಬರ್ ಟ್ಯಾಕ್ಸಿಗಳಿಗೂ ಮೀಟರ್ ಕಡ್ಡಾಯ: ಸಾರಿಗೆ ಇಲಾಖೆಯ ಮಹತ್ವದ ನಿರ್ಧಾರ

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಓಲಾ, ಉಬರ್‌ನಂತಹ ಆ್ಯಪ್ ಆಧಾರಿತ ಟ್ಯಾಕ್ಸಿ...

SIR ಕಡಿತಗಳ ಆರೋಪದ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಯ SSR ಘೋಷಿಸಿದ ECI

ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವೇಳೆ ಮತದಾರರ ಪಟ್ಟಿಯಿಂದ...