ಬೀದರ್‌ನಲ್ಲಿ 2027ರ ಜನವರಿ ತಿಂಗಳಲ್ಲಿ ಬಹುವರ್ಷಗಳ ನಂತರ ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ಜರುಗಲಿದ್ದು, ಬೀದರ ಜಿಲ್ಲೆಯ ಉದ್ಯೋಗಾಕಾಂಕ್ಷಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು.
ಬೀದರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾಡನಾಡಿ, ʼಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಯುವಕರು ಈ ಸೇನಾ ಭರ್ತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಅವಕಾಶವಿದ್ದು, ಬೀದರ ಜಿಲ್ಲೆಯ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಸದುಪಯೋಗ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.
ಬೀದರನ ನೆಹರು ಕ್ರೀಡಾಂಗಣದಲ್ಲಿ ಸೇನಾ ಭರ್ತಿ ರ‍್ಯಾಲಿ ಜರುಗಲಿದ್ದು, ರ‍್ಯಾಲಿ ಯಶಸ್ವಿಗೊಳ್ಳಲು ಜಿಲ್ಲಾಡಳಿತದಿಂದ ಎಲ್ಲ ರೀತಿಯ ಸಹಕಾರ ನೀಡುವುದುದಾಗಿ ತಿಳಿಸಿದರು.
ಅಗ್ನಿವೀರ ಸೇನಾ ಭರ್ತಿ ರ‍್ಯಾಲಿ ಬಗ್ಗೆ ಕರ್ನಲ್ ಅಶ್ವಿನಿ ಅವರು ಮಾತನಾಡಿ, ʼಬೀದರನಲ್ಲಿ 5 ವರ್ಷಗಳ ನಂತರ ರ‍್ಯಾಲಿ ಜರುಗಲಿದೆ. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕರು ವಿಶೇಷವಾಗಿ ಬೀದರ ಜಿಲ್ಲೆಯ ಯುವಕರು ಇದರ ಪ್ರಯೋಜನ ಪಡೆದುಕೊಳ್ಳಬೇಕುʼ ಎಂದು ತಿಳಿಸಿದರು.
ಬೀದರ ಜಿಲ್ಲೆಯ ಆಭ್ಯರ್ಥಿಗಳು ತೀರ ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಾರೆ, ಯುವರಲ್ಲಿ ಸೇನಾ ಭರ್ತಿ ಬಗ್ಗೆ ಹೆಚ್ಚಿನ ಅರಿವು ಪ್ರಚಾರ ಅಗತ್ಯವಿದೆ ಎಂದರು.
ಇದನ್ನೂ ಓದಿ : ಬೀದರ್ | ಭಿಕ್ಷಾಟನೆ ಮುಕ್ತ ನಗರವನ್ನಾಗಿಸಲು ಜಿಲ್ಲಾಡಳಿತ ಸಹಕಾರ ಅಗತ್ಯ
ಸಭೆಯಲ್ಅಲಿಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.




