ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ: ಸಕ್ಕರೆ ಸಚಿವ ಶಿವಾನಂದ ಪಾಟೀಲ

Date:

ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್‌ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

- Advertisement -

ವಿಧಾನ ಪರಿಷತ್ತಿನಲ್ಲಿ ಮಂಗಳವಾರ ರವಿಕುಮಾರ್‌ ಹಾಗೂ ಇತರ ಸದಸ್ಯರು ನಿಯಮ 330ರ ಅಡಿಯಲ್ಲಿ ನೀಡಿದ್ದ ಸೂಚನೆಗೆ ಉತ್ತರಿಸಿದ ಸಚಿವರು, ಕೇಂದ್ರ ಸರ್ಕಾರ ಸಕ್ಕರೆಯ ಎಂಎಸ್‌ಪಿ ದರ ಹೆಚ್ಚಳ ಮಾಡಿದರೆ ಸಕ್ಕರೆ ಕಾರ್ಖಾನೆಗಳು ಹಾಗೂ ಕಬ್ಬು ಬೆಳೆಗಾರರ ಬಹುತೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಸಮಸ್ಯೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಚರ್ಚೆ ಮಾಡಲಾಗಿದೆ. ಸಕ್ಕರೆ ಕಾರ್ಖಾನೆಗಳ ಮಾಲೀಕರ ಬೇಡಿಕೆಗಳಲ್ಲಿ ಎರಡು ಬೇಡಿಕೆಗಳು ಮಾತ್ರ ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಬರಲಿವೆ. ವಿದ್ಯುತ್‌ ಖರೀದಿ ಒಪ್ಪಂದ ಮತ್ತು ನೀರಿನ ತೆರಿಗೆ ಬೇಡಿಕೆಗಳನ್ನು ಪರಿಗಣಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಕೇಂದ್ರ ಸರ್ಕಾರ ಸಕ್ಕರೆ ರಫ್ತು ಮಾಡಲು ಅವಕಾಶ ನೀಡಬೇಕು. ಎಥೆನಾಲ್‌ ದರ ಪರಿಷ್ಕರಣೆ ಹಾಗೂ ಉತ್ಪಾದನಾ ಪ್ರಮಾಣಕ್ಕೆ ಅನುಗುಣವಾಗಿ ಹಂಚಿಕೆ ಮಾಡಬೇಕು. ಈ ಬೇಡಿಕೆಗಳಿಗೆ ಕೇಂದ್ರ ಸ್ಪಂದಿಸಿದರೆ ಕಬ್ಬು ಬೆಳೆಗಾರರ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಕ್ಕರೆಗೆ ಎಲ್‌ಪಿಜಿ ರೀತಿ ಗೃಹ ಬಳಕೆಗೆ ಬೇರೆ ಹಾಗೂ ವಾಣಿಜ್ಯ ಬಳಕೆಗೆ ಬೇರೆ ದರ ನಿಗದಿಪಡಿಸಬೇಕು ಎಂಬ ಬೇಡಿಕೆಯನ್ನು ಕೇಂದ್ರ ಸರ್ಕಾರ ಪರಿಗಣಿಸಿದರೆ ಗ್ರಾಹಕರಿಗೂ ಅನುಕೂಲ, ಕಬ್ಬು ಬೆಳೆಗಾರರ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದರು.

ರಾಜ್ಯದಲ್ಲಿ ಸತತ ಎರಡು ವರ್ಷ ಕಬ್ಬು ಬೆಳೆಗಾರರಿಗೆ ಪೂರ್ಣ ಪ್ರಮಾಣದಲ್ಲಿ ಹಣ ಪಾವತಿ ಮಾಡಲಾಗಿದೆ. ಈ ವರ್ಷ ಇನ್ನೂ ಕ್ರಷಿಂಗ್‌ ನಡೆದಿದ್ದು, ಈ ಬಾರಿಯೂ ಪೂರ್ಣ ಪ್ರಮಾಣದಲ್ಲಿ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು. ಅತಿ ಹೆಚ್ಚು ಸಕ್ಕರೆ ಉತ್ಪಾದನೆ ಮಾಡುವ ಮೂರು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಮಾತ್ರ ರೈತರಿಗೆ ಪೂರ್ಣ ಪ್ರಮಾಣದಲ್ಲಿ ಕಬ್ಬಿನ ಬಿಲ್‌ ಪಾವತಿ ಮಾಡಲಾಗಿದೆ. ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶಗಳಲ್ಲಿ ಇನ್ನೂ ರೈತರ ಕಬ್ಬಿನ ಬಿಲ್‌ ಬಾಕಿ ಇದೆ ಎಂದು ಸಚಿವರು ವಿಧಾನ ಪರಿಷತ್ತಿಗೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೂರಜ್ ರೇವಣ್ಣಗೆ ಬಿಗ್ ರಿಲೀಫ್! 2 ಪ್ರಕರಣಗಳ ಬಿ-ರಿಪೋರ್ಟ್ ಸಲ್ಲಿಸಿದ ಸಿಐಡಿ

ಜೆಡಿಎಸ್ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ವಿರುದ್ಧ ದಾಖಲಾಗಿದ್ದ ಅಸಹಜ ಲೈಂಗಿಕ...

ಟಿಎಂಸಿ ಚಿಹ್ನೆ ಮುಟ್ಟುಗೋಲು: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಟಿಎಂಸಿ ಪಕ್ಷದ ಆಂತರಿಕ ಭಿನ್ನಮತ ಮತ್ತು ಬಂಡಾಯದ ಬಳಿಕ ಚುನಾವಣಾ ಆಯೋಗವು...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು ಬಲ್ಲಿರಾ?

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು,...

ಬಿಆರ್‌ಎಸ್ ಶಾಸಕ ಅನರ್ಹ; ಸ್ಪೀಕರ್ ಆದೇಶ ರದ್ದುಗೊಳಿಸಿದ ತೆಲಂಗಾಣ ಹೈಕೋರ್ಟ್

ಬಿಆರ್‌ಎಸ್ (BRS) ಟಿಕೆಟ್‌ನಡಿ 2023ರ ವಿಧಾನಸಭಾ ಚುನಾವಣೆಯಲ್ಲಿ ಖೈರತಾಬಾದ್ ಕ್ಷೇತ್ರದಿಂದ ಗೆದ್ದು,...