ಬಜೆಟ್‌ನಲ್ಲಿ ಕೃಷಿಗೆ ಆದ್ಯತೆ ನೀಡಬೇಕು: ರೈತ ಸಂಘದಿಂದ ಸಿಎಂ, ಸಚಿವರಿಗೆ ಮನವಿ

Date:

ರಾಜ್ಯ ಸರ್ಕಾರ ಈ ಸಾಲಿನ ಬಜೆಟ್ ನಲ್ಲಿ ಕೃಷಿಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರೈತಪರ ಹಕ್ಕೊತ್ತಾಯವನ್ನು ಸಲ್ಲಿಸಿತು.

- Advertisement -

ತದನಂತರ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರನ್ನೂ ಭೇಟಿಯಾಗಿ ಈ ಸಂಬಂಧ ಅವರಿಗೆ ಮನವರಿಕೆ ಮಾಡಿಕೊಟ್ಟರು. ನಬಾರ್ಡ್ ರೈತರ ಸಾಲವನ್ನು ಕಡಿತ ಮಾಡಿದ ಬಗ್ಗೆ ಸಹಕಾರಿ ಸಚಿವರಾದ ಕೆ ಎನ್ ರಾಜಣ್ಣರವರನ್ನು ಭೇಟಿಯಾಗಿ ರೈತರ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಸಂಪನ್ಮೂಲವನ್ನು ಕ್ರೋಡೀಕರಿಸಿ ಹೆಚ್ಚಿನ ಸಾಲವನ್ನು ನೀಡಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ನಿಯೋಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಮಾಲಿ ಪಾಟೀಲ್, ಕಾರ್ಯಾಧ್ಯಕ್ಷ ಜೆ ಎಂ ವೀರಸಂಗಯ್ಯ, ಪ್ರಧಾನ ಕಾರ್ಯದರ್ಶಿ ಎನ್ ಡಿ ವಸಂತ್ ಕುಮಾರ್, ಕಾರ್ಯದರ್ಶಿ ಅರುಣ್ ಕುಮಾರ್ ಕುರುಡಿ, ಗೋಪಾಲ್ ಪಾಪೇಗೌಡ ಇದ್ದರು.

ಹಕ್ಕೊತ್ತಾಯದ ಮುಖ್ಯಾಂಶಗಳು

  1. ಬಿ.ಜೆ.ಪಿ ಸರ್ಕಾರ ಭೂ-ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದ ನಂತರ ಗುಜರಾತ್ ಮೂಲದ ಬಂಡವಾಳ ಶಾಹಿಗಳು ಲಂಗು-ಲಗಾಮಿಲ್ಲದೆ ಸಾವಿರಾರು ಎಕರೆ ಫಲವತ್ತಾದ ಭೂಮಿಯನ್ನು ಕೊಂಡು ಆ ಭೂಮಿಯನ್ನೇ ಹೆಚ್ಚು ಬೆಲೆಗೆ ಕಂಪನಿಗಳಿಗೆ ಮಾರಾಟ ಮಾಡಿ ಲಾಭಗಳಿಸುತ್ತಿದ್ದಾರೆ ಮತ್ತು ಕೃಷಿಯೇತರ ಉದ್ದೇಶಕ್ಕಾಗಿ ಬಳಸುತ್ತಿದ್ದಾರೆ. ಈ ಹಾವಳಿಯನ್ನು ತಡೆಗಟ್ಟಲು ಸೂಕ್ತ ಕಾನೂನನ್ನು ಈ ಆಯವ್ಯಯದ ಅಧಿವೇಶನದಲ್ಲಿ ರೂಪಿಸಬೇಕು.
  2. ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವಂತೆ ಭೂ-ಸುಧಾರಣೆ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಬೇಕು. ಎ.ಪಿ.ಎಂ.ಸಿ ಕಾಯ್ದೆಯನ್ನು ರೈತಸ್ನೇಹಿಯಾಗಿ ಮತ್ತಷ್ಟು ಬಲಪಡಿಸಬೇಕು. ಜಾನುವಾರು ಹತ್ಯೆ ನಿಷೇಧ ಸಂರಕ್ಷಣಾ ಕಾಯ್ದೆಯನ್ನು ರೈತರ ಹಿತದೃಷ್ಟಿಯಿಂದ ವಾಪಸ್ ಪಡೆಯಬೇಕು.
  3. ಕೃಷಿ ಪಂಪ್‌ಸೆಟ್ ವಿದ್ಯುತ್ ಸಂಪರ್ಕ ಉಚಿತವಾಗಿರಬೇಕು. ಅಕ್ರಮ-ಸಕ್ರಮ ಹಾಗೂ ಹೊಸ ವಿದ್ಯುತ್ ಸಂಪರ್ಕಗಳಿಗೆ ರೈತರೇ ಪೂರ್ಣ ವೆಚ್ಚ ಭರಿಸುವ ನಿಯಮ ಜಾರಿಗೆ ಬಂದಿದೆ. ಇದನ್ನು ವಾಪಸ್ ಪಡೆದು ಕೃಷಿ ಪಂಪ್‌ಸೆಟ್‌ಗಳಿಗೆ ಉಚಿತ ಸಂಪರ್ಕ ಕೊಡಬೇಕು.
  4. ಪ್ರೊ.ಎಂ.ಡಿ. ನಂಜುಂಡಸ್ವಾಮಿ ಅವರ ಕರೆಯ ಮೇರೆಗೆ ಕರ ನಿರಾಕರಣ ಚಳವಳಿಯಲ್ಲಿ ಭಾಗವಹಿಸಿ ಗೃಹ ವಿದ್ಯುತ್ ಬಿಲ್ ಉಳಿಸಿಕೊಂಡಿರುವ ಸಂಪೂರ್ಣ ಬಾಕಿಯನ್ನು ಮನ್ನಾ ಮಾಡಬೇಕು. ತೋಟದ ಮನೆಯಲ್ಲಿ ವಾಸ ಮಾಡುವವರಿಗೆ ನಿರಂತರ ಗೃಹ ಬಳಕೆ ವಿದ್ಯುತನ್ನು ಒದಗಿಸಬೇಕು.
  5. ನಬಾರ್ಡ್ ಸಾಲ ಮೊತ್ತವನ್ನು ಕಡಿಮೆ ಮಾಡಿರುವುದು ಖಂಡನೀಯ. ಆದರೆ ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲವನ್ನು ಕಡಿಮೆ ಮಾಡದೇ ಮುಂದುವರಿಸಬೇಕು.
  6. ಮೈಕ್ರೋ ಫೈನಾನ್ಸ್ ಹಾವಳಿ ಮತ್ತು ಕಿರುಕುಳವನ್ನು ತಪ್ಪಿಸಲು ಕಾನೂನು ರೂಪಿಸಲು ಮುಂದಾಗಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸುತ್ತಾ, ಇದು ತಾತ್ಕಾಲಿಕ ಪರಿಹಾರವಷ್ಟೆ ಆಗುತ್ತದೆ. ದುಡಿಯುವ ವರ್ಗಕ್ಕೆ ಹೆಚ್ಚು ಹೆಚ್ಚು ಸಾಲ ಸಿಗುವ ವ್ಯವಸ್ಥೆಯನ್ನು ಸರ್ಕಾರದ ಅಧೀನ ಸಂಸ್ಥೆಗಳ ಮೂಲಕವೇ ಮಾಡಿ ದುಡಿಯುವ ವರ್ಗವನ್ನು ರಕ್ಷಿಸಬೇಕು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...